ದಾವೂದ್ ಹೆಸರಲ್ಲಿ ಬೆದರಿಕೆ ಕರೆ ಮಾಡಿದ ವ್ಯಕ್ತಿ ಕೋಲ್ಕತಾದಲ್ಲಿ ಸೆರೆ
Team Udayavani, Sep 14, 2020, 10:22 AM IST
ಮುಂಬಯಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹೆಸರಿನಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ರಾಜ್ಯಸಭಾ ಸದಸ್ಯ ಸಂಜಯ್ ರಾವುತ್ ಅವರಿಗೆ ಬೆದರಿಕೆ ಕರೆ ಮಾಡಿದ ಆರೋಪದ ಮೇಲೆ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳವು (ಎಟಿಎಸ್) 49ರ ಹರೆಯದ ಕೋಲ್ಕತಾ ನಿವಾಸಿ ಪಾಲಶ್ ಬೋಸ್‌ನನ್ನು ಬಂಧಿಸಿದೆ.
ಬಂಧಿತ ಆರೋಪಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಗೃಹ ಸಚಿವ ಅನಿಲ್ ದೇಶ್ಮುಖ್ ಅವರ ನಿವಾಸ ಗಳಿಗೂ ಕರೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ರಾಜ್ಯ ಎಟಿಎಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಎಟಿಎಸ್ ಹೇಳಿಕೆಯ ಪ್ರಕಾರ, ಬೋಸ್ ಸ್ವತಃ ದಾವೂದ್ ಇಬ್ರಾಹಿಂ ಗ್ಯಾಂಗ್‌ನ ಸದಸ್ಯನೆಂದು ಹೇಳಿ ರಾವುತ್ ಅವರಿಗೆ ಹಲವು ಬಾರಿ ಜೀವ ಬೆದರಿಕೆಗಳನ್ನು ಕರೆಗಳನ್ನು ಮಾಡಿದ್ದ. ಈ ಬಗ್ಗೆ ರಾವುತ್ ಅವರ ದೂರಿನ ಆಧಾರದ ಮೇಲೆ ಪೊಲೀಸರು ಅಪರಿಚಿತ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 505, 506 (ಜಿಜಿ) ಮತ್ತು 507ರ ಅಡಿಯಲ್ಲಿ ಅಪರಾಧವನ್ನು ದಾಖಲಿಸಿ ತನಿಖೆ ಪ್ರಾರಂಭಿ ಸಿದ್ದರು. ತನಿಖೆ ವೇಳೆ ಆರೋಪಿ ಕೋಲ್ಕತ್ತಾದಲ್ಲಿ ಅಡಗಿದ್ದಾನೆ ಎಂದು ಎಟಿಎಸ್‌ಗೆ ಮಾಹಿತಿ ಸಿಕ್ಕಿದ್ದು. ಈ ಆಧಾರದ ಮೇಲೆ ತಂಡವು ಕೋಲ್ಕತಾ ಪೊಲೀಸರ ಸಹಾ ಯದಿಂದ ಕಾರ್ಯಾಚರಣೆ ನಡೆಸಿ ಬೋಸ್‌ನನ್ನು ಬಂಧಿಸಿದೆ.
ಬೋಸ್ ಬಳಿಯಿಂದ ಎರಡು ಮೊಬೈಲ್ ಹ್ಯಾಂಡ್‌ಸೆಟ್‌ಗಳು, ಒಂದು ಭಾರತೀಯ ಸಿಮ್ ಮತ್ತು ಮೂರು ಅಂತಾರಾಷ್ಟ್ರೀಯ ಸಿಮ್ ಕಾರ್ಡ್‌ಗಳನ್ನು ವಶಪಡಿಸಿಕೊಳ್ಳ ಲಾಗಿದೆ ಎಂದು ಎಟಿಎಸ್ ಅಧಿಕಾರಿ ದಯಾ ನಾಯಕ್ ತಿಳಿಸಿ¨ªಾರೆ. ಆರೋಪಿಯು ಈ ಅಪರಾಧವನ್ನು ಒಪ್ಪಿ ಕೊಂಡಿ¨ªಾನೆ ಎಂದು ಅ ಧಿಕಾರಿ ಹೇಳಿದ್ದಾರೆ.
ಬೋಸ್ ವಿಜ್ಞಾನ ಪದವೀಧರನಾಗಿದ್ದು, 15 ವರ್ಷಗಳ ಕಾಲ ದುಬಾೖನಲ್ಲಿ ಕೆಲಸ ಮಾಡಿದ್ದ. ಆತನ ಅಲ್ಲಿನ ಸಂಪರ್ಕ ಗಳನ್ನು ಪರಿಶೀಲಿಸಲಾಗುತ್ತಿದೆ ಎಂದವರು ತಿಳಿಸಿದ್ದಾರೆ. ಆರೋಪಿ ಮಹಾರಾಷ್ಟ್ರ ರಾಜಕಾರಣಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ. ಬಾಂದ್ರಾದಲ್ಲಿರುವ ಠಾಕ್ರೆ ನಿವಾಸ ವಾದ ಮಾತೋಶ್ರೀ ಬಗ್ಗೆ ವಿವರವನ್ನು ಗೂಗಲ್‌ನಲ್ಲಿ ಹುಡುಕಿದ್ದ. ಆತ 1999 ಮತ್ತು 2018ರ ನಡುವೆ ದುಬೈನಲ್ಲಿ ಕೆಲಸ ಮಾಡಿದ್ದ ಎಂದು ಆತ ನಮಗೆ ತಿಳಿಸಿದ್ದಾನೆ ಎಂದು ಅಧಿಕಾರಿ ಹೇಳಿದ್ದಾರೆ. ಸೆ. 2 ಮತ್ತು 6ರ ನಡುವೆ ಬೋಸ್ ಅಂತಾರಾಷ್ಟ್ರೀಯ ಸಿಮ್ ಕಾರ್ಡ್ ಬಳಸಿ ರಾಜಕಾರಣಿ ಗಳಿಗೆ ಅನೇಕ ಕರೆಗಳನ್ನು ಮಾಡಿದ್ದ. ಸೆ. 6ರಂದು ಕೇವಲ ರಾವುತ್ ಅವರಿಗೆ ಕರೆ ಮಾಡಿದ್ದ ಎಂದು ಎಟಿಎಸ್ ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.