ಶುಂಠಿ ಬೆಳೆಯಿಂದ ಬದುಕು ಕಟ್ಟಿಕೊಳ್ಳುತ್ತಿರುವ ರೈತರು

ನೀರಿನ ಕೊರತೆ ನಡುವೆಯೂ ಬೆಳೆಗಾರರು ಹೆಚ್ಚಳ ,78 ಎಕರೆಯಲ್ಲಿದ್ದ ಬೆಳೆ, ಈ ಬಾರಿ 178 ಎಕರೆಗೆ ಹೆಚ್ಚಳ

Team Udayavani, Sep 14, 2020, 12:26 PM IST

ಶುಂಠಿ ಬೆಳೆಯಿಂದ ಬದುಕು ಕಟ್ಟಿಕೊಳ್ಳುತ್ತಿರುವ ರೈತರು

ದೇವನಹಳ್ಳಿ: ನೀರಿನ ಕೊರತೆ ನಡುವೆಯೂ ರೈತರು ಶುಂಠಿ ಬೆಳೆಯಲು ಮುಂದಾಗಿದ್ದು, ಈ ಬಾರಿ ಉತ್ತಮ ಇಳುವರಿಯಿಂದ ಬಂಪರ್‌ ಬೆಳೆಯ ನಿರೀಕ್ಷೆಯಲ್ಲಿದ್ದಾರೆ.

ಈ ವರ್ಷ ಪ್ರಸ್ತುತ ಮಳೆ ಉತ್ತಮವಾಗಿ ಆಗುತ್ತಿರುವುದರಿಂದ ಶುಂಠಿ ಬೆಳೆಗೆ ನೀರುಣಿಸುವುದು ಕಷ್ಟವಾಗುತ್ತಿಲ್ಲ. ಸಕಾಲದಲ್ಲಿ ಮಳೆಯಾಗುತ್ತಿರುವುದರಿಂದ ಈ ಮಧ್ಯೆ 15 ದಿನ ಮಳೆ ಬಂದಿರಲಿಲ್ಲ. ಕಳೆದ 3-4 ದಿನಗಳಿಂದ ಮತ್ತೇ ಮಳೆ ಸುರಿಯುತ್ತಿದೆ. ಸಾಧಾರಣ ಮಳೆಯಾದರೆ ಸಾಕು ಹೆಚ್ಚು ಮಳೆ ಬಂದುಬೆಳೆಯಲ್ಲಿ ನೀರು ತುಂಬಿದರೆ ಬೇರು ಹಾಗೂ ಮಣ್ಣಿನ ತೇವಾಂಶಕ್ಕೆ ಕೊಳೆತು ಹೋಗುತ್ತದೆ. ಇದನ್ನು ಅರಿತು ಶುಂಠಿ ಬೆಳೆ ಜಮೀನಿನಲ್ಲಿ ನೀರು ನಿಲ್ಲದಂತೆ, ಬಸಿ ಕಾಲುವೆಯನ್ನು ಅಳವಡಿಸಿಕೊಳ್ಳಲಾಗುತ್ತಿದೆ ಎಂದು ರೈತರು ಹೇಳುತ್ತಿದ್ದಾರೆ. ಬೇಡಿಕೆ ಹೆಚ್ಚಳ:ಜಿಲ್ಲೆಯಲ್ಲಿ ಶುಂಠಿ ಬೆಳೆ ಪ್ರಸಕ್ತ ವರ್ಷದಲ್ಲಿ 178 ಎಕರೆಯಲ್ಲಿದೆ. ಕಳೆದ ವರ್ಷ 78 ಎಕರೆಯಲ್ಲಿತ್ತು. ವಾರ್ಷಿಕವಾಗಿ ಶುಂಠಿ ಬೆಳೆ ವಿಸ್ತೀರ್ಣದಲ್ಲಿ ಹೆಚ್ಚಳ ಕಂಡುಬರುತ್ತಿದೆ. ಈ ವರ್ಷವೂ ಶುಂಠಿ ಬೆಳೆಗೆ ಬೇಡಿಕೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತೋಟಗಾರಿಕಾ ಇಲಾಖಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಲ್ಪ ನೀರಿನಲ್ಲಿ ಬೆಳೆ: ಶುಂಠಿಯನ್ನು ಈಗಾಗಲೇ ತಾಲೂ ಕಿನಲ್ಲಿ ಅನೇಕ ಕಡೆ ನಾಟಿ ಮಾಡಿ, ಬೆಳೆಯಲು ರೈತರು ಮುಂದಾಗಿದ್ದಾರೆ. ಒಂದು ವರ್ಷದ ಅವಧಿ ನೀರಾವರಿ ಅವಲಂಬಿತ ಶುಂಠಿ ಬೆಳೆ ಬಿತ್ತನೆ ಮಾಡಿ, ಈಗಾಗಲೇ 3 ತಿಂಗಳು ಕಳೆಯುತ್ತಿವೆ. ತಾಲೂಕು ಮತ್ತು ಜಿಲ್ಲೆಯಲ್ಲಿ ಅಂತರ್ಜಲಮಟ್ಟ ಪ್ರತಿವರ್ಷ ಕುಸಿಯುತ್ತಿದೆ. 1200 ರಿಂದ 1500 ಅಡಿಗಳಿಗೆ ಕೊಳವೆ ಬಾವಿ ಕೊರೆಸಿದರೂ ನೀರು ಸಿಗದ ಸ್ಥಿತಿನಿರ್ಮಾಣ ವಾಗಿದೆ. ಇರುವ ಅಲ್ಪಸ್ವಲ್ಪದ ನೀರಿನಲ್ಲಿಯೇ ಶುಂಠಿ ಇತರೆ ಬೆಳೆಗಳನ್ನು ರೈತರು ಬೆಳೆಯುತ್ತಿದ್ದಾರೆ. ಮತ್ತೂಂದು ಕಡೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಂದ ಮೇಲೆ ರೈತರ ಜಮೀನು ಬಡಾವಣೆ, ಲೇಔಟ್‌ಗಳ ನಿರ್ಮಾಣಕ್ಕೆ ಮಾರಾಟ ವಾಗುತ್ತಿದೆ. ಉಳಿದ ಭೂಮಿಯಲ್ಲಿಯೇರೈತರು ತರಕಾರಿ, ಇತರೆ ಬೆಳೆ ಬೆಳೆಯುತ್ತಿದ್ದಾರೆ. ಕಳೆದ 6-7 ವರ್ಷಗಳ ಹಿಂದೆ ಪ್ರಾಯೋಗಿಕವಾಗಿ ಬೆಳೆಯಲು ಪ್ರಾರಂಭಿಸಿದ ರೈತರು, ವಾಣಿಜ್ಯ ಬೆಳೆ, ಸಾಂಬಾರು ಪದಾರ್ಥದಲ್ಲಿ ಪ್ರಮುಖವಾಗಿರುವ ಶುಂಠಿಬೆಳೆಗೆ ಹೆಚ್ಚು ಒತ್ತು ನೀಡಿದ್ದಾರೆ.

ಶುಂಠಿ ಬೆಳೆ ಬೆಳೆಯಲು ಪ್ರಥಮ ಬಾರಿಗೆ ಕೈ ಹಾಕಿದ್ದೇನೆ. 1 ಎಕರೆಗೆ ಶುಂಠಿ ಬೀಜ, ಉಳುಮೆ, ಬಿತ್ತನೆ, ಕೊಟ್ಟಿಗೆ ಗೊಬ್ಬರ, ಕ್ರಿಮಿನಾಶಕ ಸೇರಿ 60 ಸಾವಿರ ರೂ.ವೆಚ್ಚವಾಗಿದೆ. ನಿರೀಕ್ಷೆ ಮೀರಿ ಶುಂಠಿ ಬೆಳೆ ಬರುತ್ತದೆ ಎಂದು ಭಾವಿಸಿದ್ದೇನೆ. 2ಲಕ್ಷ ರೂ.ಲಾಭ ಬರುವ ಸಾಧ್ಯತೆ ಇದೆ. ಎಸ್‌.ಪಿ.ಮುನಿರಾಜು, ಶುಂಠಿ ಬೆಳೆಗಾರ, ಸಾವಕನಹಳ್ಳಿ ಎಂಪಿಸಿಎಸ್‌ ಅಧ್ಯಕ್ಷ

ರೈತರು ತಾವು ಯಾವ ಬೆಳೆ ಬೆಳೆಯುತ್ತೇವೆಂಬುವುದರ ಬಗ್ಗೆ ತೋಟಗಾರಿಕಾಇಲಾಖೆಯಿಂದ ಮಾಹಿತಿ ನೀಡುತ್ತೇವೆ. ಶುಂಠಿ ಫಸಲು ಉತ್ತಮವಾಗಿ ಬೆಳವಣಿಗೆ ಕಾಣುತ್ತಿದೆ. ಈ ಬೆಳೆಗೆ ಬರುವ ರೋಗ ನಿವಾರಣೆಗೆ ಆಯಾ ತಾಲೂಕಿನ ತೋಟಗಾರಿಕೆ ಅಧಿಕಾರಿಗಳನ್ನುಸಂಪರ್ಕಿಸಿ ಮಾಹಿತಿ ಪಡೆಯಬಹುದು. ಮಹಂತೇಶ್‌ ಮುರುಗೋಡ್‌, ಜಿಲ್ಲಾ ತೋಟಗಾರಿಕಾ ಇಲಾಖೆ ಉಪನಿರ್ದೇಶಕ

 

ಎಸ್‌.ಮಹೇಶ್‌

ಟಾಪ್ ನ್ಯೂಸ್

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-ghati-1

Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.