ವಡಗೇರಾ ತಾಲೂಕಾಭಿವೃದ್ಧಿಗೆ ಪ್ರಯತ್ನ ಮಾಡುವೆ: ಮುದ್ನಾಳ
Team Udayavani, Sep 14, 2020, 4:56 PM IST
ಯಾದಗಿರಿ: ಮತಕ್ಷೇತ್ರದ ನೂತನ ತಾಲೂಕು ಕೇಂದ್ರ ವಡಗೇರಾ ಪಟ್ಟಣ ಸೇರಿದಂತೆ ಗ್ರಾಮಿಣ ಭಾಗಗಳ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕ ವೆಂಕಟರಡ್ಡಿ ಮುದ್ನಾಳ ಹೇಳಿದರು.
ನಗರದ ಎನ್‌ವಿಎಂ ಸಭಾಂಗಣದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಡಗೇರಾ ಪಟ್ಟಣದಲ್ಲಿ ಮೊದಲು ಮಿನಿ ವಿಧಾನಸೌಧ ಕಟ್ಟಡ ನಿರ್ಮಾಣ ಅಗತ್ಯವಿದೆ. ಅದಾದರೆ ಸರ್ಕಾರದ ಎಲ್ಲ ಕಚೇರಿಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲು ಅನುಕೂಲವಾಗಲಿದೆ. ಈ ಬಗ್ಗೆ ಕಂದಾಯ ಸಚಿವಆರ್.ಅಶೋಕ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿ ಚರ್ಚಿಸಿರುವುದಾಗಿ ಹೇಳಿದರು.
ವಡಗೇರಾ ಪಟ್ಟಣದಲ್ಲಿ ಗ್ರಾಪಂ ಅಸ್ತಿತ್ವದಲ್ಲಿದೆ. ಅದನ್ನು ಪಪಂಗೆ ಮೇಲ್ದರ್ಜೆಗೆ ಏರಿಸುವ ವಿಚಾರವಾಗಿ ನಗರಾಭಿವೃದ್ಧಿ ಸಚಿವಬಸವರಾಜ ಬೈರತಿ ಅವರನ್ನು ಭೇಟಿಯಾಗಿ ಚರ್ಚಿಸಿದ್ದು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.
ಈಗಾಗಲೇ ಮುಖ್ಯಮಂತ್ರಿಗಳು ಸಚಿವ ಸಂಪುಟ ಸಭೆಯಲ್ಲಿ ಯಾದಗಿರಿಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಮಂಜೂರಾತಿ ನೀಡಿ ಸೂಕ್ತ ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. ಶೀಘ್ರವೇ ಅಡಿಗಲ್ಲು ಸಮಾರಂಭ ನಿಗದಿ ಪಡಿಸಲಾಗುವುದು.ಜೊತೆಗೆ ಜಿಲ್ಲಾ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅಭಿವೃದ್ಧಿಗೆ ವೇಗ ನೀಡುವುದಾಗಿ ಹೇಳಿದ ಅವರು, ರಾಜ್ಯದಲ್ಲಿ ಕೊರೊನಾ ವೈರಸ್ ದಾಳಿಯಿಂದ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ ಎಂದರು.ರಾಜ್ಯದಲ್ಲಿ ಇನ್ನೂ 3 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಬಿಎಸ್‌ವೈ ಮುಂದುವರಿಯಲಿದ್ದಾರೆ. ಅದರಲ್ಲಿ ಯಾವುದೇ ಸಂಶಯ ಬೇಡ. ಪಕ್ಷದಲ್ಲಿ ಅವರನ್ನು ಬದಲಾವಣೆ ಮಾಡುವ ಪ್ರಸ್ತಾಪವಿಲ್ಲ ಎಂದು ಹೇಳಿದರು.
ನಗರಕ್ಕೆ ಹೊಂದಿಕೊಂಡಿರುವ ರೈಲ್ವೆ ಮೇಲ್ಸೇತುವೆ ಶಿಥಿಲಗೊಂಡಿದೆ. ಕೂಡಲೇ ಕಾಮಗಾರಿ ಕೈಗೊಂಡುವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗುವುದು. ಪ್ರವಾಹದಿಂದ ಬೆಳೆ ಹಾನಿಯಾದ ರೈತರಿಗೆ ಪರಿಹಾರ ಒದಗಿಸಿ ಕೊಡಲಾಗುವುದು. ಠಾಣಗುಂದಿ ಬಳಿ ಭೀಮಾ ನದಿಗೆ ಹಾಗೂ ವಡಿಗೇರಾ ತಾಲೂಕಿನ ಚನ್ನೂರ(ಜೆ) ಹತ್ತಿರ ಕೃಷ್ಣಾ ನದಿಗೆ ದೊಡ್ಡ ಬ್ರಿಡ್ಜ್ ಕಂ. ಬ್ಯಾರೇಜ್‌ಗಳ ನಿರ್ಮಾಣ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು. ಕಾಮಗಾರಿ ಅನುಷ್ಠಾನಗೊಂಡರೆ ಹಲವಾರು ಗ್ರಾಮಗಳ ಜನರ ಕುಡಿವ ನೀರಿನ ಸಮಸ್ಯೆ ದೂರವಾಗುವ ಜೊತೆಗೆಅವರ ಜಮಿನು ನೀರಾವರಿ ಕ್ಷೇತ್ರವನ್ನಾಗಿ ಮಾಡಿಕೊಳ್ಳಲು ಸಹಾಯಕವಾಗುತ್ತದೆ. ಜಿಲ್ಲೆಯಲ್ಲಿ ಯಾವುದಾದರೂ ಅಕ್ರಮ ಚಟುವಟಿಕೆಗಳು ನಡೆದರೆ ಕ್ರಮ ಕೈಗೊಳ್ಳಲು ಪೊಲೀಸರಿಗೆ ಮುಕ್ತ ಸ್ವಾತಂತ್ರ್ಯವಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಡಾ. ವೀರಬಸವಂತರಡ್ಡಿ ಮುದ್ನಾಳ, ಬಿಜೆಪಿ ಮಂಡಲ ಅಧ್ಯಕ್ಷ ರಾಜಶೇಖರ ಕಾಡಂನೋರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.