ಬೈಂದೂರು ಯೆಡ್ತರೆ: ಹೊಳೆಯಲ್ಲಿ ಯುವಕನ ಶವ ಪತ್ತೆ, ಕಾಲು ಜಾರಿ ಬಿದ್ದಿರುವ ಶಂಕೆ
Team Udayavani, Sep 15, 2020, 10:54 AM IST
ಉಪ್ಪುಂದ: ಇಲ್ಲಿನ ಸುಮನಾವತಿ ಹೊಳೆಯಲ್ಲಿ ಸ್ಥಳೀಯ ಯುವಕನ ಶವ ಪತ್ತೆಯಾಗಿದ್ದು, ಎರಡು ದಿನಗಳ ಹಿಂದೆ ಕಾಲು ಜಾರಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.
ಮೃತ ಯುವಕನನ್ನು ರಾಹುತನ್ ಕಟ್ಟೆ, ಯೆಡ್ತರೆ ನಿವಾಸಿ ಶಿವರಾಜು (28) ಎಂದು ಗುರುತಿಸಲಾಗಿದೆ.
ಮೃತ ಯುವಕ ಶಿವರಾಜು ತಾಯಿ ಮತ್ತು ಅಜ್ಜಿಯೊಂದಿಗೆ ವಾಸವಿದ್ದ ಎನ್ನಲಾಗಿದೆ. ಇಂದು ಮುಂಜಾನೆ ಮನೆಯಿಂದ ಅರ್ಧ ಕಿ.ಮೀ ದೂರದಲ್ಲಿ ಸುಮನಾವತಿ ಹೊಳೆಯಲ್ಲಿ ಮೃತದೇಹ ಪತ್ತೆಯಾಗಿದೆ. ಸ್ಥಳೀಯರು ಮೃತದೇಹವನ್ನು ಗಮನಿಸಿ ಹೊಳೆಯಿಂದ ಹೊರತೆಗೆದಿದ್ದು, ಎರಡು ದಿನದ ಹಿಂದೆ ಸಾವನ್ನಪ್ಪಿರಬಹುದು ಎಂದು ಅಂದಾಜಿಸಲಾಗಿದೆ.
ಇದನ್ನೂ ಓದಿ: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣ: ಮಾಜಿ ಸಚಿವರ ಪುತ್ರ ಆದಿತ್ಯ ಆಳ್ವ ಮನೆ ಮೇಲೆ ಸಿಸಿಬಿ ದಾಳಿ
ಶಿವರಾಜು ಅವಿವಾಹಿತನಾಗಿದ್ದು, ಕೆಲವೊಮ್ಮೆ ಮನೆಬಿಟ್ಟರೆ ಒಂದೆರಡು ದಿನ ಮನೆಗೆ ಬರುತ್ತಿರಲಿಲ್ಲ ಎನ್ನಲಾಗಿದೆ. ಹೀಗಾಗಿಯೇ ಮನೆಯವರು ಈತನನ್ನು ಹುಡುಕಾಡಿರಲಿಲ್ಲ. ಈತ ಊರಿನಲ್ಲಿಯೂ ಅಷ್ಟಾಗಿ ಜನರೊಂದಿಗೆ ಬೆರೆಯುತ್ತಿರಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.
ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಮಹಜರು ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್
Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
IPL Auction 2025: ಇಂದು, ನಾಳೆ ಐಪಿಎಲ್ ಬೃಹತ್ ಹರಾಜು
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪಲಾಯನ ಮಾಡಲ್ಲ: ನಿಖಿಲ್
Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.