ಜಿಲ್ಲೆಯಲ್ಲಿ ಅಪೌಷ್ಟಿಕತೆ ನಿರ್ಮೂಲನೆಗೆ ಅಗತ್ಯ ಕ್ರಮ

ಅಪೌಷ್ಟಿಕ ಮಕ್ಕಳ ಗುರುತಿಸಿ ಸರ್ಕಾರದ ಸೌಲಭ್ಯ: ಜಿಲ್ಲಾಧಿಕಾರಿ ಡಾ.ವೆಂಕಟೇಶ್‌

Team Udayavani, Sep 15, 2020, 1:30 PM IST

ಜಿಲ್ಲೆಯಲ್ಲಿ ಅಪೌಷ್ಟಿಕತೆ ನಿರ್ಮೂಲನೆಗೆ ಅಗತ್ಯ ಕ್ರಮ

ಮಂಡ್ಯ: ಜಿಲ್ಲೆಯಲ್ಲಿರುವ ಅಪೌಷ್ಟಿಕ ಮಕ್ಕಳು ಹಾಗೂ ಗರ್ಭಿಣಿಯರನ್ನು ಗುರುತಿಸಿ,ಸರ್ಕಾರದಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ತಲುಪಿಸುವ ಮೂಲಕ ಅಪೌಷ್ಟಿಕ ನಿರ್ಮೂಲನೆಮಾಡಲು ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಪೋಷಣ್‌ ಅಭಿಯಾನದ ರಥಕ್ಕೆ ಚಾಲನೆ ನೀಡಿ ಮಾತನಾಡಿದರು.

ಜಾಗೃತಿ ಮೂಡಿಸಿ: ಸೆಪ್ಟೆಂಬರ್‌ ಮಾಹೆಯನ್ನು ಪೋಷಣ್‌ ಅಭಿಯಾನದ ಮಾಸವಾಗಿ ಆಚರಣೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಅಪೌಷ್ಟಿಕಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಎಂಬುದು ಕಾರ್ಯಕ್ರಮದ ಉದ್ದೇಶವಾಗಿದೆ. ಅಪೌಷ್ಟಿಕ ಮಕ್ಕಳು ಮತ್ತು ಗರ್ಭಿಣಿಯರನ್ನು ಗುರುತಿಸಿ, ಅವರಿಗೆ ಜಾಗೃತಿಯನ್ನು ಮೂಡಿಸಿ ಸರ್ಕಾರದಿಂದ ಸಿಗುವ ಎಲ್ಲ ಸವಲತ್ತುಗಳನ್ನು ತಲುಪಿಸಲಾಗುವುದು ಎಂದು ಹೇಳಿದರು.

ಅಂಗನವಾಡಿ ಮಕ್ಕಳಿಗೆ ಸೌಲಭ್ಯ: ಜಿಲ್ಲೆಯಲ್ಲಿ 2500ಕ್ಕೂ ಹೆಚ್ಚು ಅಂಗನವಾಡಿಗಳ ಮುಖಾಂತರ 92 ಸಾವಿರ ಅಂಗನವಾಡಿ ಮಕ್ಕಳಿಗೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಇದರಲ್ಲಿ ಪ್ರಮುಖವಾಗಿ ಅಕ್ಷರ ಅಭ್ಯಾಸ ಮತ್ತು ಕೌಶಲ್ಯಅಭಿವೃದ್ಧಿ ಮಾಡುವ ಜೊತೆಗೆ ಪೌಷ್ಟಿಕ ಆಹಾರ ನೀಡಲಾಗುತ್ತದೆ. ಜಿಲ್ಲೆಯಲ್ಲಿ ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ 134 ಇದ್ದು, ಇದನ್ನು ಹಂತ-ಹಂತವಾಗಿ ಕಡಿಮೆ ಮಾಡಲಾಗುವುದು ಎಂದರು.

ಪೌಷ್ಟಿಕ ಆಹಾರ ಸೇವಿಸಿ: ಮಧ್ಯಮ ಅಪೌಷ್ಟಿಕೆಯಿಂದ ಇರುವಂಥ 4500 ಮಕ್ಕಳನ್ನು ಕೂಡ ಅಪೌಷ್ಟಿಕತೆಯಿಂದ ಪೌಷ್ಟಿಕತೆಗೆ ತರಲು ಅಂಗನವಾಡಿ ಕಾರ್ಯಕರ್ತರು, ಅಧಿಕಾರಿಗಳು ಮತ್ತು ಸರ್ಕಾರ ಕೆಲಸ ಮಾಡುತ್ತಿದೆ. ಗ್ರಾಮಾಂತರ, ನಗರ ಪ್ರದೇಶ ಹಾಗೂ ಕೊಳಚೆ ಪ್ರದೇಶಗಳಲ್ಲಿರುವ ಮಕ್ಕಳು, ಹದಿಹರೆಯ ಹಾಗೂ ಗರ್ಭಿಣಿಯರು ಪೌಷ್ಟಿಕ ಆಹಾರದ ಜೊತೆಗೆ ಜಂತುಹುಳು ಮಾತ್ರೆ ಯನ್ನುಕಾಲಕಾಲಕ್ಕೆ ಸೇವಿಸಬೇಕು ಎಂದರು.

ಆರೋಗ್ಯ ಸಮಸ್ಯೆಗೆ ತಾತ್ಸಾರ ಬೇಡ: ಯಾವುದೇ ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ ತಾತ್ಸಾರ ಮಾಡದೆ ತಕ್ಷಣವೇ ತಮ್ಮ ಹತ್ತಿರದ ಆರೋಗ್ಯದ ಕೇಂದ್ರವನ್ನು ಸಂಪರ್ಕಿಸಿ, ಉತ್ತಮವಾದ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಎಲ್ಲರೂ ಅಪೌಷ್ಟಿ ಕತೆಯ ವಿರುದ್ಧ ಹೋರಾಡಬೇಕು ಎಂದು ಹೇಳಿದರು. ಜಿಪಂ ಸಿಇಒ ಎಸ್‌.ಎಂ.ಜುಲ್‌ಫಿಖಾರ್‌ ಉಲ್ಲಾ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್‌.ಪಿ.ಮಂಚೇಗೌಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಉಪನಿರ್ದೇಶಕ ಎಸ್‌.ರಾಜಮೂರ್ತಿ, ಕಾರ್ಯಕ್ರಮ ಸಂಯೋಜಕಿ ಉಷಾರಾಣಿ ಹಾಜರಿದ್ದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

festcide

Mandya: ಭ್ರೂಣ ಹತ್ಯೆ ತಲೆಮರೆಸಿಕೊಂಡಿದ್ದ 12 ಆರೋಪಿಗಳ ಬಂಧನ

Malavalli: ಸಾರಿಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…

Malavalli: ಸಾರಿಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…

Bommai

Governer Procicution: ಹೈಕೋರ್ಟ್‌ ತೀರ್ಪಿನ ಮೇಲೆ ಸಿಎಂ ಸ್ಥಾನ ನಿರ್ಧಾರ: ಬೊಮ್ಮಾಯಿ

suicide (2)

Mandya; ರೋಡ್ ರೋಮಿಯೋಗಳ ಕಿರುಕುಳ: 14 ವರ್ಷದ ವಿದ್ಯಾರ್ಥಿನಿ ಆತ್ಮಹ*ತ್ಯೆ

1-wwwww

BJP 12 ವರ್ಷಗಳಿಂದ ತುಕ್ಕು ಹಿಡಿದಿದ್ದ ಪ್ರಕರಣಕ್ಕೆ ಜೀವ ನೀಡಿದೆ: ಸಚಿವ ಮಧು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.