ಎಲ್ಲ ಭಾಷೆಗೆ ಸಮಾನ ಹಕ್ಕು ನೀಡಿ
Team Udayavani, Sep 15, 2020, 3:16 PM IST
ರಾಯಚೂರು: ಕೇಂದ್ರ ಸರ್ಕಾರ ಜಾರಿಗೆ ತಂದ ಹಿಂದಿ ದಿವಸ್ ಆಚರಣೆ ಖಂಡಿಸಿ ನಗರದಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ನಗರದ ಡಾ| ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಡಿಸಿ ಮೂಲಕ ಪ್ರಧಾನಿಗೆ ಮನವಿ ಸಲ್ಲಿಸಲಾಯಿತು.
ಕೇಂದ್ರ ಸರ್ಕಾರ ಹಿಂದಿ ಭಾಷೆಯನ್ನು ಬಲವಂತವಾಗಿ ಹೇರುವ ಮೂಲಕ ಪ್ರಾದೇಶಿಕ ಭಾಷೆಗಳ ಅಸ್ತಿತ್ವಕ್ಕೆ ಧಕ್ಕೆ ತರುವ ಹುನ್ನಾರ ನಡೆಸಿದೆ. ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಹಿನ್ನೆಲೆಯಿದೆ. ಈಗ ಆಡಳಿತ ಭಾಷೆಯಾಗಿ ಹಿಂದಿ ಹೇರಿಕೆ ಮಾಡಿ ಹಂತ ಹಂತವಾಗಿ ಪ್ರಾದೇಶಿಕ ಭಾಷೆಗಳನ್ನು ಕೊಲ್ಲುವ ಯತ್ನ ನಡೆಸುತ್ತಿರುವುದು ಖಂಡನೀಯ ಎಂದರು.
ಸೆ.14ರಂದು ಹಿಂದಿ ದಿವಸ್ ಆಚರಣೆ ಮಾಡುವುದನ್ನು ಕೂಡಲೇ ನಿಲ್ಲಿಸಬೇಕು.ಅದನ್ನು ಭಾರತೀಯ ಭಾಷಾ ದಿನವನ್ನಾಗಿ ಆಚರಿಸಬೇಕು. ಸಂವಿಧಾನದ ಎಂಟನೇ ಪರಿಚ್ಛೇದದಲ್ಲಿರುವ ಎಲ್ಲ 22 ಭಾಷೆಗಳನ್ನು ಅಧಿಕೃತ ಸಂಪರ್ಕ ಭಾಷೆಗಳನ್ನಾಗಿಮಾಡಬೇಕು. ಶಿಕ್ಷಣ, ಉದ್ಯೋಗದ ವಿಚಾರದಲ್ಲಿ ಎಲ್ಲ ಭಾಷೆಗಳಿಗೂ ಸಮಾನ ಹಕ್ಕು ನೀಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾಧ್ಯಕ್ಷ ವಿನೋದರೆಡ್ಡಿ, ಕೊಂಡಪ್ಪ, ವಿಷ್ಣು ಪ್ರಸಾದ್ ಯಾದವ್, ಶರಣಪ್ಪ ಆಟೋ, ಸಾದಿಕ್,ಫಿರೋಜ್, ರಮೇಶ, ವೆಂಕಟೇಶ, ಸುರೇಶ, ಪ್ರಕಾಶ ಇತರರಿದ್ದರು. ಕರ್ನಾಟಕ ಜನ ಸೈನ್ಯ: ಇದೇ ವಿಚಾರವಾಗಿ ಕರ್ನಾಟಕ ಜನ ಸೈನ್ಯ ಸಂಘಟನೆ ಸದಸ್ಯರು ಸೋಮವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಹಿಂದಿ ದಿವಸ್ ಆಚರಿಸುವ ಮೂಲಕ ದಕ್ಷಿಣ ಭಾರತದ ಎಲ್ಲ ರಾಜ್ಯಗಳ ಮೇಲೆ ಕೇಂದ್ರ ಸರ್ಕಾರ ಹಿಂದಿ ಹೇರಿಕೆಗೆ ಮುಂದಾಗಿದೆ.ದಕ್ಷಿಣ ಭಾರತದಲ್ಲಿ ಎಲ್ಲ ವಿದ್ಯಾರ್ಥಿಗಳಿಗೆಶೈಕ್ಷಣಿಕವಾಗಿ ಒತ್ತಾಯಪೂರ್ವಕವಾಗಿ ಹಿಂದಿಭಾಷೆ ಕಲಿಯುವಂತೆ ಮಾಡುತ್ತಿರುವುದು ಖಂಡನೀಯ. ದಕ್ಷಿಣ ಭಾರತದ ಮಕ್ಕಳಿಗೆ ತ್ರಿಭಾಷಾ ನೀತಿ ಜಾರಿಗೆ ತಂದು ಮಕ್ಕಳ ವಿದ್ಯಾಭ್ಯಾಸದ ಮೇಲೆ ಒತ್ತಡ ಹಾಕುತ್ತಿರುವುದು ದುರದೃಷ್ಟಕರ ಸಂಗತಿ ಎಂದರು.
ಉತ್ತರ ಭಾರತದಲ್ಲಿ ಹೆಚ್ಚಾಗಿ ಹಿಂದಿ ಬಳಸುವುದರಿಂದ ಅಲ್ಲಿ ಬೇಕಾದರೆ ಆಚರಿಸಿಕೊಳ್ಳಲಿ. ಆದರೆ, ದಕ್ಷಿಣ ಭಾರತದಲ್ಲಿ ಪ್ರತಿ ರಾಜ್ಯಕ್ಕೂ ತನ್ನದೆಯಾದ ಪ್ರಾದೇಶಿಕ ಭಾಷೆ ಇದ್ದು, ಅದಕ್ಕೆ ಐತಿಹಾಸಿಕ ಹಿನ್ನೆಲೆ ಕೂಡ ಇದೆ. ಹಿಂದಿ ದಿವಸ್‌ವನ್ನು ದಕ್ಷಿಣ ಭಾರತ ರಾಜ್ಯಗಳಿಗೆ ಕಡ್ಡಾಯಗೊಳಿಸಬಾರದು. ಈ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ, ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು.
ಸಂಘಟನೆ ಜಿಲ್ಲಾಧ್ಯಕ್ಷ ವೆಂಕಟೇಶ ಅರಗೋಲ, ಪದಾಧಿಕಾರಿಗಳಾದ ಶಾಂತಕುಮಾರ, ಪ್ರಸಾದ ಭಂಡಾರಿ, ವೆಂಕಟಸ್ವಾಮಿ, ಬಸವರಾಜ ಕ್ಯಾದಿಗೇರಾ, ವೀರಣ್ಣ ಶೆಟ್ಟಿ ಭಂಡಾರಿ, ಹುಸೇನ್, ಸಂದೀಪ, ರಮೇಶ, ಭೀಮೇಶ ಸೇರಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.