![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Sep 15, 2020, 4:34 PM IST
ಮುಂಬೈ:ಕೇಂದ್ರ ಸರ್ಕಾರ ದಿಢೀರ್ ಆಗಿ ಈರುಳ್ಳಿ ರಫ್ತನ್ನು ಕೂಡಲೇ ಜಾರಿಗೆ ಬರುವಂತೆ ನಿಷೇಧಿಸಿದೆ. ಏತನ್ಮಧ್ಯೆ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಮಂಗಳವಾರ(ಸೆಪ್ಟೆಂಬರ್ 15, 2020) ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿಯಾಗಿ ಈರುಳ್ಳಿ ರಫ್ತು ನಿಷೇಧದ ಬಗ್ಗೆ ಕೇಂದ್ರ ಮರು ಚಿಂತನೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.
ಪಾಕ್, ಇತರ ದೇಶಗಳಿಗೆ ಲಾಭವಾಗಲಿದೆ!
ಮಧ್ಯಪ್ರದೇಶ, ಗುಜರಾತ್, ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಮುಂಗಾರು ಮಳೆಯಿಂದಾಗಿ ಕಂಗಾಲಾಗಿದ್ದ ರೈತರಿಗೆ ಈರುಳ್ಳಿ ಬೆಳೆಯಿಂದ ಉತ್ತಮ ಬೆಲೆ ಸಿಗುತ್ತಿದ್ದ ಸಂದರ್ಭದಲ್ಲಿಯೇ ರಫ್ತು ನಿಷೇಧದ ದಿಢೀರ್ ನಿರ್ಧಾರ ಕೈಗೊಂಡಿರುವುದು ಈರುಳ್ಳಿ ಬೆಳೆಗಾರರನ್ನು ಕೆರಳಿಸಿರುವುದಾಗಿ ವರದಿ ತಿಳಿಸಿದೆ.
ಭಾರತದ ಈ ನಿರ್ಧಾರದಿಂದಾಗಿ ಗಲ್ಫ್ ದೇಶಗಳು, ಶ್ರೀಲಂಕಾ ಹಾಗೂ ಬಾಂಗ್ಲಾ ದೇಶದ ಈರುಳ್ಳಿ ಮಾರುಕಟ್ಟೆಗಳು ಇಕ್ಕಟ್ಟಿಗೆ ಸಿಲುಕಲಿದೆ. ಅಲ್ಲದೇ ಭಾರತವನ್ನು ಹೊರತುಪಡಿಸಿ ಪಾಕಿಸ್ತಾನ ಮತ್ತು ಇತರ ದೇಶಗಳ ಮಾರುಕಟ್ಟೆಗೆ ಲಾಭವಾಗಲಿದೆ ಎಂದು ಶರದ್ ಪವಾರ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ನೂರು ದಿನದಲ್ಲಿ ಶತಕೋಟಿ ವ್ಯವಹಾರದ ಸಾಧನೆ ; ಪುಣೆ ಮೂಲದ ಈ ಕಂಪೆನಿ ಬಗ್ಗೆ ನಿಮಗೆ ಗೊತ್ತಾ?
ಪಾಕಿಸ್ತಾನ ಕೂಡ ಮುಖ್ಯವಾಗಿ ಈರುಳ್ಳಿ ಬೆಳೆಯುತ್ತಿದ್ದು ಹಲವಾರು ದೇಶಗಳಿಗೆ ಈರುಳ್ಳಿ ರಫ್ತು ಮಾಡುತ್ತಿದೆ. ಒಂದು ವೇಳೆ ಭಾರತ ಈರುಳ್ಳಿ ರಫ್ತು ನಿಷೇಧಿಸಿದರೆ ಅದರ ಲಾಭವನ್ನು ಪಾಕಿಸ್ತಾನ ಪಡೆಯಲಿದೆ. ಅಲ್ಲದೇ ಬಾಂಗ್ಲಾದೇಶದಂತಹ ಪ್ರಮುಖ ದೇಶಕ್ಕೆ ಈರುಳ್ಳಿ ರಫ್ತು ಮಾಡಿದರೆ ನಮ್ಮ ರೈತರಿಗೆ ಅನ್ಯಾಯವಾಗಲಿದೆ ಎಂದು ಪವಾರ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಈರುಳ್ಳಿ ರಫ್ತು ನಿಷೇಧಿಸಿರುವುದನ್ನು ಮಹಾರಾಷ್ಟ್ರ ಭಾಗದ ರೈತರು ಮತ್ತು ಮಹಾರಾಷ್ಟ್ರದ ಜನಪ್ರತಿನಿಧಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ತನ್ನ ನಿರ್ಧಾರದ ಬಗ್ಗೆ ಮರು ಚಿಂತಿಸುವಂತೆ ಪಿಯೂಷ್ ಗೋಯಲ್ ಜೀ ಅವರಿಗೆ ನಾನು ಮನವಿ ಮಾಡಿಕೊಂಡಿದ್ದೇನೆ ಎಂದು ಪವಾರ್ ಟ್ವೀಟ್ ಮಾಡಿದ್ದಾರೆ.
ಮಹಾರಾಷ್ಟ್ರದ ಲಾಸಾಲ್ ಗಾಂವ್ ಮಾರುಕಟ್ಟೆಯಲ್ಲಿನ ಡಾಟಾದ ಅಂಕಿ ಅಂಶದ ಪ್ರಕಾರ, ಮಾರ್ಚ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಈರುಳ್ಳಿ ದರ ದುಪ್ಪಟ್ಟಾಗಿದೆ. ಭಾರತದ ಚಿಲ್ಲರೆ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಜೂನ್-ಜುಲೈ ತಿಂಗಳಿನಲ್ಲಿ ಕೆಜಿಗೆ 20ರೂಪಾಯಿಯಿಂದ 35, 40 ರೂ.ವರೆಗೆ ಏರಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈರುಳ್ಳಿ ರಫ್ತು ನಿಷೇಧಕ್ಕೆ ನಿರ್ಧಾರ ತೆಗೆದುಕೊಂಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ: ನಟಿ- ಸಂಸದೆ ಮಿಮಿ ಚಕ್ರವರ್ತಿಯ ವಿರುದ್ಧ ಅಸಭ್ಯ ಕಮೆಂಟ್ ಮಾಡಿದ ಟ್ಯಾಕ್ಸಿ ಡ್ರೈವರ್ ಬಂಧನ
ಈರುಳ್ಳಿ ರಫ್ತು ನಿಷೇಧ ಕೇವಲ ಮಹಾರಾಷ್ಟ್ರದ ಈರುಳ್ಳಿ ಬೆಳೆಗಾರರನ್ನು ಮಾತ್ರ ಸಂಕಷ್ಟಕ್ಕೆ ದೂಡುವುದಿಲ್ಲ ಬದಲಿಗೆ ಇಡೀ ದೇಶದ ರೈತರನ್ನು ಇಕ್ಕಟ್ಟಿಗೆ ಸಿಲುಕಿಸಲಿದೆ ಎಂದು ಅಖಿಲ ಭಾರತ ಕಿಸಾನ್ ಸಂಘದ ಪ್ರಧಾನ ಕಾರ್ಯದರ್ಶಿ ಡಾ.ಅಜಿತ್ ನವಲೆ ತಿಳಿಸಿದ್ದಾರೆ.
ಕೇಂದ್ರದ ಈ ನಿರ್ಧಾರದಿಂದ ರೈತರು ಆಕ್ರೋಶಕ್ಕೊಳಗಾಗಿದ್ದಾರೆ. ಅಲ್ಲದೇ ಪ್ರತಿಭಟನೆ ನಡೆಸುವುದಾಗಿಯೂ ನವಲೆ ಎಚ್ಚರಿಸಿದ್ದಾರೆ. ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಳ್ಳಲು ಬಿಹಾರ ಚುನಾವಣೆಯೇ ಕಾರಣ ಎಂದು ಅವರು ಆರೋಪಿಸಿದ್ದಾರೆ.
Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ
New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ
Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್
Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!
Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.