“ಗುಣಮಟ್ಟದ ಕಾಮಗಾರಿಗೆ ಆದ್ಯತೆ’
5.20 ಕೋ. ರೂ. ವೆಚ್ಚದ ಪರಪ್ಪು-ಆದೂರ್‌ಪೆರಾಲ್ ರಸ್ತೆಗೆ ಶಿಲಾನ್ಯಾಸ
Team Udayavani, Sep 16, 2020, 8:37 AM IST
ಪರಪ್ಪು-ಆದೂರ್‌ಪೆರಾಲ್ ರಸ್ತೆ ಕಾಮಗಾರಿಗೆ ಶಾಸಕ ಹರೀಶ್ ಪೂಂಜ ಶಿಲಾನ್ಯಾಸ ನೆರವೇರಿಸಿದರು.
ಬೆಳ್ತಂಗಡಿ: ಅನೇಕ ವರ್ಷಗಳ ಬೇಡಿಕೆಯ ಪರಪ್ಪು- ಆದೂರ್‌ಪೆರಾಲ್ ರಸ್ತೆಗೆ ಕೇಂದ್ರ ಹಾಗೂ ರಾಜ್ಯ ಸರಕಾರ ಬೇಡಿಕೆಯನ್ನು ಮನ್ನಿಸಿ 5.20 ಕೋ. ರೂ. ಮಂಜೂರು ಮಾಡಿದೆ. ರಸ್ತೆ ಗುಣಮಟ್ಟ ಕಾಪಾಡುವಲ್ಲಿ ಪ್ರಥಮ ಆದ್ಯತೆ ನೀಡಲಾಗಿದ್ದು, ಗುತ್ತಿಗೆದಾರರು ಕಳಪೆ ಕಾಮಗಾರಿ ಮಾಡದಂತೆ ಗ್ರಾಮಸ್ಥರೇ ಜಾಗೃತೆ ವಹಿಸಬೇಕೆಂದು ಶಾಸಕ ಹರೀಶ್ ಪೂಂಜ ಹೇಳಿದರು.
ಪ್ರಧಾನಮಂತ್ರಿ ಗ್ರಾಮಸಡಕ್ ಯೋಜನೆಯಡಿ 5.20 ಕೋ. ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಪರಪ್ಪು³-ಆದೂರ್ ಪೆರಾಲ್ ರಸ್ತೆಗೆ ಸೆ. 14ರಂದು ಶಿಲಾನ್ಯಾಸ ನೆರವೇರಿಸಿ ಶಾಸಕರು ಮಾತನಾಡಿದರು. ತಾಲೂಕಿನ ಅಭಿವೃದ್ಧಿ ನಮ್ಮ ಗುರಿಯಾಗಿದ್ದು, ಸುಮಾರು 600 ಕೋ. ರೂ.ಗಳ ಅನುದಾನವನ್ನು ತಾಲೂಕಿಗೆ ತರುವಲ್ಲಿ ಶ್ರಮಿಸಿದ್ದೇನೆ. ಇದೀಗ ಮತ್ತೆ ಗ್ರಾಮ ಗ್ರಾಮದ ಅಭಿವೃದ್ಧಿ ಕನಸನ್ನು ಕಾಣುತ್ತಿದೆ ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯತ್ ಸ್ಥಾಯೀ ಸಮಿತಿ ಅಧ್ಯಕ್ಷೆ ಮಮತಾ ಎಂ. ಶೆಟ್ಟಿ, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಕಾರ್ಯದರ್ಶಿ ಸುಬ್ರಹ್ಮಣ್ಯ ಗೌಡ ಕೈಕುರೆ, ಗುತ್ತಿಗೆದಾರರಾದ ವಸಂತ ಮಜಲು, ಪ್ರಶಾಂತ್ ಪ್ರತಿಮಾ ನಿಲಯ ಮತ್ತಿತರರು ಉಪಸ್ಥಿತರಿದ್ದರು. ದಾಮೋದರ ಗೌಡ ಬೆರ್ಕೆ ಸ್ವಾಗತಿಸಿದರು. ಶೇಖರ್ ನಾಯ್ಕ ವಂದಿಸಿದರು.
ಮಾದರಿ ಕೆಲಸ
ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮಾತನಾಡಿ, ಮನಸ್ಸಿನಲ್ಲಿ ಅಭಿವೃದ್ಧಿ ಕಲ್ಪನೆ ಇದ್ದರೆ ಯಾವ ರೀತಿ ಅಭಿವೃದ್ಧಿಯಾಗುತ್ತದೆ ಎಂಬುದಕ್ಕೆ ಶಾಸಕ ಹರೀಶ್ ಪೂಂಜ ಸಾಕ್ಷಿಯಾಗಿದ್ದಾರೆ. ಜನರ ಸೇವೆಗಾಗಿ, ತಾಲೂಕಿನ ಅಭಿವೃದ್ಧಿಗಾಗಿ ಯುವ ಶಾಸಕನಾಗಿ ಮಾಡುತ್ತಿರುವ ಶ್ರಮ ರಾಜ್ಯಕ್ಕೆ ಮಾದರಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.