ಐಸಿಸ್ ಹೆಚ್ಚು ಸಕ್ರಿಯ: ಲೋಕಸಭೆಯಲ್ಲಿ ಕರ್ನಾಟಕದ ಬಗ್ಗೆ ನೀಡಿದ ಮಾಹಿತಿಯಲ್ಲೇನಿದೆ?

ಐಸಿಸ್ ಸಂಘಟನೆಗೆ ಸೇರಿರುವ ಬಗ್ಗೆ ಕೇಂದ್ರ ಮತ್ತು ರಾಜ್ಯ ಗುಪ್ತಚರ ಇಲಾಖೆ ಗಮನಕ್ಕೆ ಬಂದಿರುವುದಾಗಿ ಹೇಳಿದೆ.

Team Udayavani, Sep 16, 2020, 2:46 PM IST

ಐಸಿಸ್ ಹೆಚ್ಚು ಸಕ್ರಿಯ: ಲೋಕಸಭೆಯಲ್ಲಿ ಕರ್ನಾಟಕದ ಬಗ್ಗೆ ನೀಡಿದ ಮಾಹಿತಿಯಲ್ಲೇನಿದೆ?

Representative Image

ನವದೆಹಲಿ:ಭಾರತದ ಹಲವು ರಾಜ್ಯಗಳಲ್ಲಿ ಐಸಿಸ್ ಉಗ್ರಗಾಮಿ ಸಂಘಟನೆ ಸಕ್ರಿಯವಾಗಿದೆ ಎಂದು ಕೇಂದ್ರ ಗೃಹ ಇಲಾಖೆ ಬುಧವಾರ(ಸೆಪ್ಟೆಂಬರ್ 16, 2020) ಲೋಕಸಭೆಗೆ ನೀಡಿರುವ ಮಾಹಿತಿಯಲ್ಲಿ ಹಲವು ವಿಷಯಗಳು ಬಹಿರಂಗಗೊಂಡಿದೆ.

ಲೋಕಸಭೆಗೆ ಮಾಹಿತಿ ನೀಡಿರುವ ಕೇಂದ್ರ, ದೇಶದ ವಿವಿಧ ರಾಜ್ಯಗಳಲ್ಲಿನ ಕೆಲವು ವ್ಯಕ್ತಿಗಳು ಐಸಿಸ್ ಉಗ್ರಗಾಮಿ ಸಂಘಟನೆಗೆ ಸೇರ್ಪಡೆಯಾಗಿರುವುದಾಗಿ ತನಿಖಾ ಸಂಸ್ಥೆಗಳು ತಿಳಿಸಿರುವುದಾಗಿ ವಿವರಿಸಿದೆ.

ಗೃಹ ಸಚಿವಾಲಯದ ರಾಜ್ಯ ಖಾತೆ ಸಚಿವ ಜಿ.ಕಿಶನ್ ರೆಡ್ಡಿ ಲೋಕಸಭೆಗೆ ನೀಡಿರುವ ಮಾಹಿತಿಯಲ್ಲಿ, ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಈವರೆಗೆ ಐಸಿಸ್ ಜತೆ ಸಂಪರ್ಕ ಹೊಂದಿದ್ದ 122 ಆರೋಪಿಗಳನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ. ಅಲ್ಲದೇ ಹಲವಾರು ರಾಜ್ಯಗಳಲ್ಲಿಯೂ ಪ್ರಾಥಮಿಕ ತನಿಖೆಯ ಹಿನ್ನೆಲೆಯಲ್ಲಿ 17 ಪ್ರಕರಣಗಳನ್ನು ದಾಖಲು ಮಾಡಿಕೊಂಡಿರುವುದಾಗಿ ವಿವರಿಸಿದ್ದಾರೆ.

ಬರಿಗೈಯಲ್ಲಿ ಹಾವು ಹಿಡಿದು ನೆಟ್ಟಿಗರಿಗೆ ಅಚ್ಚರಿ ಮೂಡಿಸಿದ ಮಹಿಳೆ: ವಿಡಿಯೋ ವೈರಲ್

ಯಾವ ರಾಜ್ಯಗಳಲ್ಲಿ ಐಸಿಸ್ ಹೆಚ್ಚು ಸಕ್ರಿಯ:

ಎನ್ ಐಎ ತನಿಖೆಯಲ್ಲಿ ಬಯಲುಗೊಂಡಿರುವ ಮಾಹಿತಿ ಪ್ರಕಾರ, ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡು, ಪಶ್ಚಿಮಬಂಗಾಳ, ರಾಜಸ್ಥಾನ, ಬಿಹಾರ, ಉತ್ತರಪ್ರದೇಶ, ಮಧ್ಯಪ್ರದೇಶ ಮತ್ತು ಜಮ್ಮು ಕಾಶ್ಮೀರದಲ್ಲಿ ಐಸಿಸ್ ಹೆಚ್ಚು ಸಕ್ರಿಯವಾಗಿರುವುದಾಗಿ ತಿಳಿಸಿದೆ.

ವಿವಿಧ ರಾಜ್ಯಗಳಲ್ಲಿನ ವ್ಯಕ್ತಿಗಳು ಐಸಿಸ್ ಸಂಘಟನೆಗೆ ಸೇರಿರುವ ಬಗ್ಗೆ ಕೇಂದ್ರ ಮತ್ತು ರಾಜ್ಯ ಗುಪ್ತಚರ ಇಲಾಖೆ ಗಮನಕ್ಕೆ ಬಂದಿರುವುದಾಗಿ ಹೇಳಿದೆ.

ಕರ್ನಾಟಕ ಮತ್ತು ಕೇರಳದಲ್ಲಿ ದೊಡ್ಡ ಪ್ರಮಾಣದಲ್ಲಿಯೇ ಐಸಿಸ್ ಸಂಘಟನೆಯ ಉಗ್ರರಿದ್ದಾರೆ ಎಂದು ಈಗಾಗಲೇ ವಿಶ್ವಸಂಸ್ಥೆ ನೀಡಿರುವ ವರದಿಯಲ್ಲಿಯೂ ಉಲ್ಲೇಖಿಸಲಾಗಿತ್ತು. ಭಾರತೀಯ ಉಪಖಂಡದಲ್ಲಿ 150ರಿಂದ 200 ಮಂದಿ ಸದಸ್ಯರು ಐಸಿಸ್ ಗೆ ಸೇರಿದ್ದಾರೆ. ಐಎಸ್ ಇಂಡಿಯನ್ ಹೆಸರಿನಲ್ಲಿ ಕರ್ನಾಟಕದಲ್ಲಿ ಉಗ್ರರು ಕಾರ್ಯಾಚರಣೆ ನಡೆಸುತ್ತಿರುವುದಾಗಿ ವರದಿ ತಿಳಿಸಿದೆ.

ಮನಾಲಿ ಟು ಲೇಹ್: ಜಗತ್ತಿನ ಅತೀ ಉದ್ದದ ಅಟಲ್ ಸುರಂಗ ಮಾರ್ಗ- ಏನಿದರ ವಿಶೇಷತೆ

ಐಸಿಸ್ ಉಗ್ರಗಾಮಿ ಸಂಘಟನೆ ಇಂಟರ್ನೆಟ್ ಆಧಾರಿತ ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸಿಕೊಳ್ಳುವ ಮೂಲಕ ತಮ್ಮ ಸಿದ್ದಾಂತವನ್ನು ಪ್ರಚುರಪಡಿಸುತ್ತಿದೆ ಎಂದು ವರದಿ ಹೇಳಿದೆ. ಗುಪ್ತಚರ ಇಲಾಖೆಯ ಮನವಿ ಮೇರೆಗೆ ಐಸಿಸ್ ಉಗ್ರಗಾಮಿ ಸಂಘಟನೆಯ ಸಾಮಾಜಿಕ ಜಾಲತಾಣಗಳ ಮೇಲೆ ಸೈಬರ್ ಸ್ಪೇಸ್ ತುಂಬಾ ನಿಕಟವಾಗಿ ಕಣ್ಗಾವಲಿಟ್ಟಿರುವುದಾಗಿ ವರದಿ ಹೇಳಿದೆ. ಅಲ್ಲದೇ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ರೆಡ್ಡಿ ತಿಳಿಸಿದ್ದಾರೆ. ಅಷ್ಟೇ ಅಲ್ಲ ಉಗ್ರಗಾಮಿ ಸಂಘಟನೆಗಳ ದೇಣಿಗೆ ಪ್ರಕ್ರಿಯೆ ಬಗ್ಗೆಯೂ ಸರ್ಕಾರಕ್ಕೆ ತಿಳಿದಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು.

ಟಾಪ್ ನ್ಯೂಸ್

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.