![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Sep 16, 2020, 6:52 PM IST
ದಾವಣಗೆರೆ: ಸ್ಮಾರ್ಟ್ ಸಿಟಿ ಯೋಜನೆಯಡಿ ಎಸ್.ಎಸ್.ಎಂ. ನಗರ, ಬಿಡಿ ಲೇಔಟ್, ಪಾರ್ವತಮ್ಮ ನಗರಗಳಲ್ಲಿ ಕೈಗೊಳ್ಳುತ್ತಿರುವ 10 ಕೋಟಿ ರೂ. ವೆಚ್ಚದ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿಗೆ ಶಾಸಕ ಶಾಮನೂರು ಶಿವಶಂಕರಪ್ಪ ಮಂಗಳವಾರ ಭೂಮಿಪೂಜೆ ನೆರವೇರಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಮಾರ್ಟ್‌ಸಿಟಿ ಯೋಜನೆಯಡಿ ಸಿಸಿ ಚರಂಡಿ, ಕವರಿಂಗ್ ಸ್ಲಾಬ್ ಹಾಗೂ ಸಿಸಿ ರಸ್ತೆ ನಿರ್ಮಾಣ ಸೇರಿಂದಂತೆ ಮೂಲ ಸೌಕರ್ಯ ಅಭಿವೃದ್ಧಿಗಳ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ. ಗುತ್ತಿಗೆದಾರರು ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸಿ ಆದಷ್ಟು ಬೇಗ ಜನರಿಗೆ ಒದಗಿಸಬೇಕು. ಸಿಜಿ ಆಸ್ಪತ್ರೆಯಲ್ಲಿ 30 ವೆಂಟಿಲೇಟರ್ ಗಳಿವೆ. ಆದರೆ ಆಪರೇಟರ್ ಮಾಡುವವರಿಲ್ಲ. ಕೂಡಲೇ ನೇಮಕ ಮಾಡಿಕೊಂಡು ಸಾರ್ವಜನಿಕರ ಚಿಕಿತ್ಸೆಗೆ ಅನುಕೂಲ ಮಾಡಿಕೊಡಲಾಗುವುದು ಎಂದರು.
ಮಹಾನಗರಪಾಲಿಕೆ ಮೇಯರ್ ಬಿ.ಜಿ. ಅಜಯಕುಮಾರ್ ಮಾತನಾಡಿ, ಸ್ಮಾರ್ಟ್‌ಸಿಟಿ ಯೋಜನೆಯಡಿ ಕೆಲಸಗಳು ವಿಳಂಬವಾಗುತ್ತಿವೆ ಎಂಬ ಮಾತು ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಾಕಷ್ಟುಸಭೆ ಮಾಡಲಾಗಿದೆ. ಆದಷ್ಟು ಬೇಗ ಕೆಲಸ ಮಾಡಲು ಸೂಚನೆ ನೀಡಲಾಗಿದ್ದುಸದ್ಯದಲ್ಲಿಯೇ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು. ಈಗಾಗಲೇ ಶೇ. 60ರಷ್ಟು ಕೆಲಸವಾಗಿದೆ ಎಂದು ತಿಳಿಸಿದರು. ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಟಿ. ವಿರೇಶ್, ಮುಖಂಡ ಅಮಾನುಲ್ಲಾ ಖಾನ್ ಮಾತನಾಡಿದರು.ಉಪ ಮಹಾಪೌರರಾದ ಸೌಮ್ಯ ನರೇಂದ್ರ,ಸದಸ್ಯರಾದ ಎ.ಬಿ. ರಹೀಂ, ಚಮನ್‌ಸಾಬ್, ಜಾಕೀರ್ ಇನ್ನಿತರರು ಇದ್ದರು.
ಶಾಸಕರ ಅಸಮಾಧಾನ : ಆಡಳಿತ ನಡೆಸುವವರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕು. ಆದರೆ, ಇತ್ತೀಚಿಗೆ ಸರ್ಕಾರದಿಂದ 125ಕೋಟಿ ರೂ. ಅನುದಾನ ಬಂದಾಗಒಂದು ಕಣ್ಣಿಗೆ ಸುಣ್ಣ ಒಂದು ಕಣ್ಣಿಗೆ ಬೆಣ್ಣೆ ಎಂಬಂತೆ ವರ್ತಿಸಿದರು. ಈ ಬಗ್ಗೆ ಸಚಿವರ ಗಮನಕ್ಕೂ ತರಲಾಯಿತು.ಅವರು ಸಹ ಸ್ಪಂದಿಸಲಿಲ್ಲ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಅಸಮಾಧಾನ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ
Davanagere: ಪಕ್ಷದಿಂದ ಯತ್ನಾಳ್ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?
Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ
Davanagere: ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್
Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.