6 ತಿಂಗಳಿಂದ ಪ್ರವಾಸಿಗರಿಲ್ಲದೆ ಬಣಗುಡುತ್ತಿದ್ದ ಹಳೇಬೀಡಿಗೆ ಪ್ರವಾಸಿಗರ ಆಗಮನ
Team Udayavani, Sep 17, 2020, 12:09 PM IST
ಹಳೇಬೀಡು: ಗ್ರಾಮದಲ್ಲಿನ ವಿಶ್ವ ವಿಖ್ಯಾತ ಹೊಯ್ಸಳೇಶ್ವರ ದೇವಾಲಯ ವೀಕಣೆಗೆ ಆರು ತಿಂಗಳ ನಂತರ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಕೋವಿಡ್ ಸೋಂಕಿನ ಭಯದಿಂದ ಪ್ರವಾಸಿಗರಿಗೆ ಸರ್ಕಾರ ನಿರ್ಬಂಧ ವಿಧಿಸಿತ್ತು.
ಹೊಯ್ಸಳರ ಕಾಲದ, ಸೂಕ್ಷ್ಮ ಕೆತ್ತನೆ ಹೊಂದಿರುವ ಹೊಯ್ಸಳೇಶ್ವರ, ಜೈನಬಸದಿ, ಕೇದಾರೇಶ್ವರ ದೇವಾಲಯಗಳ ಶಿಲ್ಪ ಕಲಾ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ದೇಶ ವಿದೇಶಗಳಿಂದ ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದರು. ಆದರೆ, ದೇಶದಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸರ್ಕಾರ ಪ್ರವಾಸಿ ಸ್ಥಳಗಳನ್ನು ಮುಚ್ಚಿತ್ತು. ಲಾಕ್‌ಡೌನ್‌ನಿಂದ ಮನೆಯಲ್ಲೇ ಕಾಲಕಳೆಯುತ್ತಿದ್ದ ಜನರು, ಈಗ ಪ್ರವಾಸಿ ಸ್ಥಳಗಳ ವೀಕ್ಷಣೆಗೆ ಹೆಚ್ಚು ಒಲವು ತೋರುತ್ತಿದ್ದು, ದಿನದಿಂದ ದಿನಕ್ಕೆ ದ್ವಿಗುಣಗೊಳ್ಳುತ್ತಿದ್ದಾರೆ.
ರಾಜ್ಯದ ಪ್ರವಾಸಿಗರೇ ಹೆಚ್ಚು: ಸದ್ಯ ಅಂತಾರಾಜ್ಯ, ವಿದೇಶಿ ಪ್ರವಾಸಿಗರು ಕಡಿಮೆ ಸಂಖ್ಯೆಯಲ್ಲಿ ಆಗಮಿಸಿದರೆ, ಹಾಸನ ಜಿಲ್ಲೆ ಒಳಗೊಂಡಂತೆ ಬೆಂಗಳೂರು, ಮಂಗಳೂರು, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಉಡುಪಿ ಸೇರಿ ದಕ್ಷಿಣ ಕರ್ನಾಟಕದ ಜಿಲ್ಲೆಗಳಿಂದ ನೂರಾರು ಪ್ರವಾಸಿಗರು ದೇವಾಲಯದ ವೀಕ್ಷಣೆಗೆ ಆಗಮಿಸುತ್ತಿದ್ದಾರೆ. ಇದರಿಂದ ಪ್ರವಾಸೋದ್ಯಮ ಇಲಾಖೆ ಆರ್ಥಿಕವಾಗಿ ಚೇತರಿಕೆ ಕಾಣುವ ಎಲ್ಲಾ ಲಕ್ಷಣಗಳುಕಾಣುತ್ತಿವೆ.
ಹಚ್ಚ ಹಸಿರಿನಿಂದ ಕೂಡಿದ ಹೊರಾಂಗಣ:
ಹಳೇಬೀಡಿನ ಹೊಯ್ಸಳೇಶ್ವರ ದೇವಾಲಯದ ಒಟ್ಟು 15 ಹೆಕ್ಟೇರ್ ವಿಶಾಲ ಉದ್ಯಾನ ಹೊಂದಿದ್ದು, ಆರು ತಿಂಗಳಿಂದ ಜನರ ಓಡಾಟವಿಲ್ಲದೆ, ಮುಂಗಾರು ಮಳೆ ಸಮರ್ಪಕವಾಗಿ ಸುರಿಯುತ್ತಿರುವ ಕಾರಣ, ಇಡೀ ಉದ್ಯಾನ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ.
ಈ ಉದ್ಯಾನದಲ್ಲಿರುವ ವಿವಿಧ ಜಾತಿಯ ಗಿಡಗಳು ಪ್ರತಿದಿನ ಹೂ ಬಿಡುತ್ತಿದ್ದು, ದೇವಾಲಯಕ್ಕೆ ಮೆರಗು ನೀಡುತ್ತಿವೆ. ಇದು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಮುಂಜಾನೆ ಮತ್ತು ಮುಸ್ಸಂಜೆ ದೇವಾಲಯಕ್ಕೆ ವಾಯವಿಹಾರಕ್ಕೆ ಆಗಮಿಸುವ ನೂರಾರು ಮಂದಿಯ ಮನಸ್ಸಿಗೆ ಮುದ ನೀಡುತ್ತಿದೆ.
ಶನಿವಾರ, ಭಾನುವಾರ ಹೆಚ್ಚು:
ದೇವಾಲಯದ ವೀಕಣೆಗೆ ಪ್ರವಾಸಿಗರು ಬೇರೆ ದಿನಗಳಲ್ಲಿ 100 ರಿಂದ 500 ಮಂದಿ ಆಗಮಿಸಿದರೆ, ಶನಿವಾರ ಮತ್ತು ಭಾನುವಾರ 2000ವರೆಗೂ ಆಗಮಿಸುತ್ತಾರೆ. ದೇವಾಲಯವನ್ನೇ ನಂಬಿ ಜೀವನ ನಡೆಸುತ್ತಿರುವ ಮಾರ್ಗದರ್ಶಕರಿಗೂ ಈಗ ಅಷ್ಟಿಷ್ಟು ಹಣ ಕೈಸೇರುತಿದ್ದು, ಜೀವನ ಸುಧಾ ರಿಸುತ್ತಿದೆ.
ವ್ಯಾಪಾರ ಚುರುಕು: ಹೊಯ್ಸಳೇಶ್ವರ ದೇವಾಲಯವನ್ನೇನಂಬಿಬದುಕುಸಾಗಿಸುತ್ತಿದ್ದ ಛಾಯಾಚಿತ್ರ ಮಾರಾಟಗಾರರು, ಬೀದಿಬದಿ ವ್ಯಾಪಾರಿಗಳು, ಹೋಟೆಲ್ ಉದ್ಯಮ ಕೊರೊನಾದಿಂದ ಮುಚ್ಚಲ್ಪಟ್ಟಿದ್ದವು. ಪ್ರವಾಸಿಗರ ಆಗಮನದಿಂದ ನಿಧಾನವಾಗಿ ಎಲ್ಲವೂ ಚೇತರಿಕೆಕಾಣುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.