ಅನಧಿಕೃತ ನಳ್ಳಿಗಳಿಗೆ ಕಡಿವಾಣ ಯಾವಾಗ? ಪಟ್ಟಣ ಪಂಚಾಯತ್‌ ಆದಾಯಕ್ಕೆ ಬೀಳುತ್ತಿದೆ ಕತ್ತರಿ


Team Udayavani, Sep 17, 2020, 6:30 PM IST

ಅನಧಿಕೃತ ನಳ್ಳಿಗಳಿಗೆ ಕಡಿವಾಣ ಯಾವಾಗ? ಪಟ್ಟಣ ಪಂಚಾಯತ್‌ ಆದಾಯಕ್ಕೆ ಬೀಳುತ್ತಿದೆ ಕತ್ತರಿ

ನರೇಗಲ್ಲ: ನೀರಿನ ಸಮಸ್ಯೆ ನೀಗಿಸಲು ಪಟ್ಟಣ ಪಂಚಾಯತ್‌ ಅಧಿಕಾರಿಗಳು ಹೈರಾಣಾಗುತ್ತಿರುವ ಹಿನ್ನೆಲೆಯಲ್ಲಿ ಪಟ್ಟಣದ ಜನತೆ ಕೈಚಳಕ ತೋರಿ ಅನಧಿಕೃತ ನಳ ಅಳವಡಿಸಿಕೊಂಡಿದ್ದಾರೆ.

ಪಟ್ಟಣದ 17 ವಾರ್ಡ್‌ಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಲು ಜಿಲ್ಲಾಡಳಿತ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಪಟ್ಟಣಕ್ಕೆ ಪ್ರತಿದಿನ ನಾಲ್ಕೈದು ತಾಸು ನೀರು ಸರಬರಾಜು ಮಾಡುತ್ತಿದೆ. ಪ.ಪಂ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 17 ಕೊಳವೆ ಬಾವಿಗಳಲ್ಲಿನ ನೀರು ಕೋಡಿಕೊಪ್ಪ, ಮಲ್ಲಾಪುರ, ದ್ಯಾಂಪುರ, ಕೋಚಲಾಪುರ, ತೋಟಗಂಟಿ ಗ್ರಾಮಗಳಿಗೆ ನಿತ್ಯ ನೀರು ಸರಬರಾಜು ಮಾಡಲಾಗುತ್ತಿದೆ. ಪಟ್ಟಣದಲ್ಲಿ ಇನ್ನೂಳಿದ 12 ವಾರ್ಡ್‌ಗಳಿಗೆ ಐದು ದಿನಕ್ಕೊಮ್ಮೆ ನೀರು ಬಿಡಲಾಗುತ್ತಿದೆ.

ಪ.ಪಂ ವ್ಯಾಪ್ತಿಯಲ್ಲಿ ಅಧಿಕೃತವಾಗಿ 1,349 ನಳಗಳನ್ನು ಅಳವಡಿಸಲಾಗಿದೆ. ಅನಧಿಕೃತವಾಗಿ 1300ಕ್ಕೂ ಅಧಿಕ ನಳಗಳು ಅಳವಡಿಕೆಯಾಗಿವೆ. ಆದರೂ ಯಾವುದೆ ಕ್ರಮಕೈಗೊಂಡಿಲ್ಲ. ಅನಧಿಕೃತ ನಳಗಳಲ್ಲಿ ಮತ್ತು ಅಧಿಕೃತ ನಳಗಳಿಗೆ ವಿದ್ಯುತ್‌ ಮೋಟರ್‌ ಬಳಕೆಯಿಂದ ಮಧ್ಯಮ ವರ್ಗದವರಿಗೆ ಸರಿಯಾಗಿ ನೀರು ಪೂರೈಕೆಯಾಗುತ್ತಿಲ್ಲ.

ಇದನ್ನೂ ಓದಿ: ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಆರೋಗ್ಯ ಸ್ಥಿತಿ ಗಂಭೀರ

ಪಟ್ಟಣದ ಎಲ್ಲ ವಾರ್ಡ್‌ಗಳಲ್ಲಿರುವ ಮನೆಗಳಿಗೆ ಬಹುತೇಕ ಅನಧಿಕೃತ ನಳಗಳು ಪತ್ತೆಯಾಗಿದ್ದು, ಇವುಗಳಿಗೆ ಕಡಿವಾಣ ಹಾಕಲು ಪ.ಪಂ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಪಪಂ ಆದಾಯಕ್ಕೆ ಕತ್ತರಿ ಬೀಳುತ್ತಿದೆ.

ಕ್ರಮಕ್ಕೆ ಜನರ ಒತ್ತಾಯ
ಅನೇಕರು ಅನಧಿಕೃತ ನಳ ಬಳಕೆ ಮಾಡುವುದರಿಂದ ನಿಯಮಿತವಾಗಿ ಕರ ಪಾವತಿಸುವ ನಮಗೆ ಕಡಿಯುವ ನೀರು ಸರಿಯಾಗಿ ಬರುವುದಿಲ್ಲ. ನೀರು ಬಿಡುವ ಅವಧಿಯಲ್ಲೂ ಕಾಯುತ್ತ ಕುಳಿತುಕೊಳ್ಳುವ ಪರಿಸ್ಥಿತಿ ಬಂದಿದೆ. ಅನಧಿಕೃತ ನಳಗಳಿಂದ ಲಕ್ಷಾಂತರ ಲೀಟರ್‌ ನೀರು ನಷ್ಟವಾಗುತ್ತದೆ. ಕೂಡಲೇ ಪ.ಪಂ ಅಧಿಕಾರಿಗಳು ಅನಧಿಕೃತ ಹಾಗೂ ವಿದ್ಯುತ್‌ ಮೋಟರ್‌ ಬಳಕೆ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಎಂದು ಪಟ್ಟಣದ ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ.

ಪಟ್ಟಣ ಸೇರಿದಂತೆ ಮಜರೆ ಗ್ರಾಮಗಳಲ್ಲಿ ಅನಧಿಕೃತ ನಳ ಸಂಪರ್ಕ ಹೊಂದಿರುವವರಿಗೆ ಈಗಾಗಲೇ ಪಪಂ ವತಿಯಿಂದ ನೋಟಿಸ್‌ ನೀಡಲಾಗುತ್ತಿದೆ. ಅವರಲ್ಲಿ ಈಗಾಗಲೇ ಕೆಲವರು ಬಂದು ಹಣ ಪಾವತಿಸಿ ಅಧಿಕೃತಪಡಿಸಿಕೊಳ್ಳುತ್ತಿದ್ದಾರೆ. ನೋಟಿಸ್‌ ನೀಡಿದ ಏಳು ದಿನದ ಒಳಗಾಗಿ ಅನಧಿಕೃತವಿರುವ ನಳಗಳನ್ನು ಅಧಿಕೃತ ಪಡಿಸಿಕೊಳ್ಳದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು.
– ಎಂ.ಎ. ನೂರುಲ್ಲಾಖಾನ್‌, ಪಪಂ ಪ್ರಭಾರಿ ಮುಖ್ಯಾಧಿಕಾರಿ

ಟಾಪ್ ನ್ಯೂಸ್

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.