ಎಚ್ಚರಿಕೆ ತಪ್ಪಿದರೆ ಅಪಾಯ
Team Udayavani, Sep 18, 2020, 6:05 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕೋವಿಡ್ 19, ಪ್ರಾರಂಭದ ಹಂತಕ್ಕಿಂತ ಅರ್ಧ ವರ್ಷದ ಬಳಿಕ ಇದೀಗ ಮತ್ತೆ ಬೆಚ್ಚಿ ಬೀಳಿಸುತ್ತಿದ್ದು ಜನಪ್ರತಿನಿಧಿಗಳು ಅಧಿಕಾರಿ ವರ್ಗಕ್ಕೂ ಹಬ್ಬುತ್ತಿರುವುದು ಮತ್ತು ಸಾವಿನ ಸಂಖ್ಯೆಯೂ ಹೆಚ್ಚಳವಾಗುತ್ತಿರುವುದು ಎಚ್ಚರಿಕೆಯ ಗಂಟೆ.
ಸಾರ್ವಜನಿಕ ಜೀವನದಲ್ಲಿರುವವರು ಜನಸಾಮಾನ್ಯರ ನಡುವೆ ಇರಬೇಕಾದ ಅನಿವಾರ್ಯತೆ ಇದೆ.
ಅಧಿಕಾರಿ ವರ್ಗವೂ ನಿರಂತರವಾಗಿ ಕಚೇರಿಗಳಲ್ಲಿದ್ದು ಕೆಲಸ ಕಾರ್ಯಗಳಲ್ಲಿ ತೊಡಗಬೇಕಾಗಿರುತ್ತದೆ. ಆದರೆ, ಸ್ವಲ್ಪ ಎಚ್ಚರ ತಪ್ಪಿದರೂ ಸಂಕಷ್ಟಕ್ಕೆ ಸಿಲುಕಬೇಕಾಗುತ್ತದೆ.
ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಕೋವಿಡ್ 19 ಸೋಂಕು ತಾಕಿದರೆ ಅವರನ್ನು ನೂರಾರು ಜನರು ನಿತ್ಯ ಸಂಪರ್ಕ ಮಾಡುವುದರಿಂದ ಎಲ್ಲರೂ ಪರೀಕ್ಷೆಗೆ ಒಳಪಡುವ ಹಾಗೂ ಕ್ವಾರಂಟೈನ್‌ಗೆ ಒಳಗಾಗಬೇಕಾಗುತ್ತದೆ.
ಆ ಪೈಕಿ ಕೆಲಸದ ಅನಿವಾರ್ಯತೆಯಿಂದ ಎಷ್ಟೋ ಮಂದಿ ಪರೀಕ್ಷೆಗೆ ಒಳಗಾಗುತ್ತಿಲ್ಲ. ಇದು ಸಮಸ್ಯೆಗೆ ಕಾರಣವಾಗುತ್ತಿರಬಹುದು.
ರಾಜ್ಯದ ಮಟ್ಟಿಗೆ ಹೇಳಬೇಕಾದರೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಸೋಂಕು ದೃಢಪಟ್ಟು ಚಿಕಿತ್ಸೆಯ ಅನಂತರ ಗುಣಮುಖರಾಗಿದ್ದಾರೆ.
ಇದರ ನಡುವೆಯೇ ಕೆ.ಎಸ್. ಈಶ್ವರಪ್ಪ, ಶ್ರೀರಾಮುಲು, ಡಾ| ಸುಧಾಕರ್, ಶಶಿಕಲಾ ಜೊಲ್ಲೆ, ಗೋಪಾಲಯ್ಯ, ಬೈರತಿ ಬಸವರಾಜ್ ಸಹಿತ ಸಂಪುಟದ ಹಲವಾರು ಸಚಿವರಿಗೆ ಕೋವಿಡ್ 19 ಸೋಂಕು ದೃಢಪಟ್ಟು ಚೇತರಿಸಿಕೊಂಡಿದ್ದಾರೆ. ಸಾಕಷ್ಟು ಶಾಸಕರಿಗೂ ಕೋವಿಡ್ 19 ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ.
ಕೋವಿಡ್ 19 ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ದೈನಂದಿನ ಕೆಲಸದ ನಡುವೆಯೂ ಎಚ್ಚರಿಕೆ ತಪ್ಪುವಂತಿಲ್ಲ. ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡ ಸೇರಿ ಪ್ರಮುಖ ಸ್ಥಳಗಳಲ್ಲಿ ಕೆಲಸ ಮಾಡುವ ಅಧಿಕಾರಿ ಸಿಬಂದಿ ಜಾಗರೂಕತೆಯಿಂದ ಇದ್ದು ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಮಾಡುವುದರ ಜತೆಗೆ ತಮ್ಮನ್ನು ಭೇಟಿ ಮಾಡಲು ಬರುವವರೂ ಕಡ್ಡಾಯವಾಗಿ ಪಾಲನೆ ಮಾಡುತ್ತಿದ್ದಾರೆಯೇ ಎಂಬುದನ್ನು ಗಮನಿಸಬೇಕು. ಉಲ್ಲಂಘನೆಯಾಗುತ್ತಿದ್ದರೆ ಕಠಿನವಾಗಿಯೇ ವರ್ತಿಸಬೇಕಾಗಿದೆ. ಇಲ್ಲದಿದ್ದರೆ ಸಮೂಹಕ್ಕೆ ಸೋಂಕು ವ್ಯಾಪಕವಾಗಿ ಹಬ್ಬಿ ಮತ್ತಷ್ಟು ತಿಂಗಳು ರಾಜ್ಯವನ್ನು ಕಾಡುವ ಅಪಾಯ ಇದ್ದೇ ಇದೆ.
ನಾವೆಲ್ಲರೂ ಆಯ್ಕೆ ಮಾಡಿ ಕಳುಹಿಸಿರುವ ಜನಪ್ರತಿನಿಧಿಗಳು ವಿಧಾನ ಮಂಡಲ, ಸಂಸತ್‌ಗಳಲ್ಲಿ ನಮ್ಮನ್ನು ಪ್ರತಿನಿಧಿಸುತ್ತಾರೆ. ಅವರು ತಮ್ಮನ್ನು ತಾವು ಕೋವಿಡ್ 19 ಸೋಂಕಿದ ಕಾಪಾಡಿಕೊಳ್ಳುವುದರಲ್ಲಿ ಎಲ್ಲರ ಹಿತ ಅಡಗಿದೆ. ಜತೆಗೆ, ಅವರು ಎಲ್ಲರಿಗೂ ಮಾದರಿಯಾಗಿ ” ಕೋವಿಡ್ 19′ ವಿರುದ್ಧದ ಹೋರಾಟದಲ್ಲಿ ಕಾಣಿಸಿಕೊಳ್ಳುವ ಅನಿವಾರ್ಯತೆಯೂ ಇದೆ.
ಜನರ ಜತೆ ಬೆರೆಯುವುದು ಅನಿವಾರ್ಯ. ಆದರೆ ಆರೋಗ್ಯ ವಿಚಾರದಲ್ಲಿ ಕಟ್ಟುಪಾಡುಗಳನ್ನು ವಿಧಿಸಿಕೊಳ್ಳುವ ಅನಿವಾರ್ಯತೆ ಇದೆ.
ಆ ನಿಟ್ಟಿನಲ್ಲಿ ಸೆ.21ರಿಂದ ಆರಂಭವಾಗುವ ವಿಧಾನಮಂಡಲ ಅಧಿವೇಶನಕ್ಕೆ ಬರುವ ಸಚಿವರು-ಶಾಸಕರು, ಅಧಿಕಾರಿ-ಸಿಬಂದಿಯಾದಿಯಾಗಿ ಎಲ್ಲರೂ ಕೋವಿಡ್ 19 ಪರೀಕ್ಷೆಗೆ ಒಳಪಟ್ಟು ವರದಿ ಸಮೇತ ಪ್ರವೇಶ ಮಾಡಬೇಕು ಎಂಬ ನಿಯಮ ರೂಪಿಸಿರುವುದು ಶ್ಲಾಘನೀಯ. ಇದರಿಂದಾಗಿ ಸೋಂಕಿತ ಪ್ರಕರಣಗಳು ಪತ್ತೆಯಾಗುತ್ತವೆ ಜತೆಗೆ ಸೋಂಕಿತರಿಂದ ಇತರರಿಗೆ ಹರಡುವುದು ತಪ್ಪುತ್ತದೆ.
ಕೋವಿಡ್ 19 ಸೋಂಕಿನೊಂದಿಗೆ ಬದುಕಬೇಕು ನಿಜ. ಆದರೆ ನಿಯಂತ್ರಣ ಕ್ರಮಗಳು ಆವಶ್ಯಕ. ಜನಪ್ರತಿನಿಧಿಗಳು ಹಾಗೂ ಅಧಿಕಾರಿ ವರ್ಗ ಎಚ್ಚರಿಕೆ ವಹಿಸಿ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಿ ಕೋವಿಡ್ 19 ಸೋಂಕನ್ನು ಹಿಮ್ಮೆಟ್ಟಿಸಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ
Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ
Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.