ವಿಜಯೇಂದ್ರ ಸೂಪರ್ ಸಿಎಂ ಅಲ್ಲ, ಕುಮಾರಸ್ವಾಮಿ ಭೇಟಿ ಬಗ್ಗೆ ಊಹಾಪೋಹ ಬೇಡ: ಬಿಎಸ್ ವೈ
Team Udayavani, Sep 18, 2020, 10:47 AM IST
ಹೊಸದಿಲ್ಲಿ: ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಕುರಿತು ಚರ್ಚಿಸಲು ತಾವು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ಹಲವು ಸಚಿವರನ್ನು ಭೇಟಿ ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.
ಹೊಸದಿಲ್ಲಿಯ ಕರ್ನಾಟಕ ಭವನ-1 ಕಾವೇರಿ ಕಟ್ಟಡದ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದರು.
ತಮ್ಮ ಪುತ್ರ ಬಿ ವೈ ವಿಜಯೇಂದ್ರ ಅವರನ್ನು ಸೂಪರ್ ಸಿ ಎಂ ಎಂದು ಬಣ್ಣಿಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆರೋಪವನ್ನು ತಳ್ಳಿ ಹಾಕಿದ ಸಿಎಂ, ವಿಜಯೇಂದ್ರ ಅವರು ಭಾರತೀಯ ಜನತಾ ಪಕ್ಷದ ರಾಜ್ಯ ಘಟಕದಲ್ಲಿ ಉಪಾಧ್ಯಕ್ಷರಾಗಿ ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸುವಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆಯೇ ಹೊರತು, ರಾಜ್ಯ ಸರ್ಕಾರದ ಯಾವುದೇ ಚಟುವಟಿಕೆಗಳಲ್ಲಿ ಹಸ್ತಕ್ಷೇಪ ಮಾಡುತಿಲ್ಲ ಎಂದರು.
ಜಾತ್ಯಾತೀತ ಜನತಾ ದಳದ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹಾಗೂ ತಮ್ಮ ನಡುವಿನ ಇತ್ತೀಚಿನ ಭೇಟಿ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ, ಕುಮಾರಸ್ವಾಮಿ ಅವರು ಪ್ರತಿಪಕ್ಷದ ನಾಯಕರಲ್ಲೊಬ್ಬರು. ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚಿಸಲು ಆಗಮಿಸಿದ್ದರು. ಇಂತಹ ವಿಷಯಗಳಲ್ಲಿ ಅನಗತ್ಯ ಊಹಾಪೋಹ ಬೇಡ ಎಂದು ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
MUST WATCH
ಹೊಸ ಸೇರ್ಪಡೆ
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.