ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ
Team Udayavani, Sep 18, 2020, 2:11 PM IST
ಉಡುಪಿ: ಇಲ್ಲಿನ ಚಿತ್ತರಂಜನ್ ಸರ್ಕಲ್ ನಲ್ಲಿರುವ ಹಳೆಯ ಬಹು ಮಹಡಿ ಕಟ್ಟಡದ ಭಾಗವೊಂದು ಧರೆಗುರುಳಿ ಬಿದ್ದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಮಹಿಳೆಯೋರ್ವರು ಗಾಯಗೊಂಡಿದ್ದಾರೆ.
ಚಿತ್ತರಂಜನ್ ಸರ್ಕಲ್ ನಲ್ಲಿರುವ ರಾಯಲ್ ಮಹಲ್ ಕಟ್ಟಡವಾಗಿದ್ದು, ಇದು ಉಡುಪಿ ನಗರದ ಹಳೇಯ ಕಟ್ಟಡಗಳಲ್ಲಿ ಒಂದಾಗಿದೆ. ಈ ಹಳೆಯ ಕಟ್ಟಡದಲ್ಲಿ ಹೋಟೆಲ್, ಬೇಕರಿ, ಭಾರತೀಯ ಜನೌಷಧಿ ಕೇಂದ್ರ, ಚಿಪ್ಸ್ ಅಂಗಡಿ ಸೇರಿದಂತೆ ಐದಾರು ಅಂಗಡಿಗಳಿದ್ದವು.
ಕಟ್ಟಡದ ಒಂದು ಪಾರ್ಶ್ವ ಕುಸಿಯುತ್ತಿದ್ದಂತೆ ಜನರು ಕಟ್ಟಡದಿಂದ ದೂರ ಓಡಿದ್ದಾರೆ. ಈ ವೇಳೆ ಓರ್ವ ಮಹಿಳೆ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ದೊಡ್ಡ ಅನಾಹುತವೊಂದು ತಪ್ಪಿದೆ.
ಇದನ್ನೂ ಓದಿ: ಕೋವಿಡ್ ಪಾಸಿಟಿವ್ ಎಂದು ಪತ್ನಿಗೆ ಹೇಳಿ ನಾಪತ್ತೆಯಾಗಿದ್ದ ಪತಿಯ ಅಸಲಿ ಗುಟ್ಟು ಬಯಲು!
ಸ್ಥಳಕ್ಕೆ ಆಗಮಿಸಿದ ಉಡುಪಿ ನಗರಸಭೆ ಆಯುಕ್ತ ಆನಂದ ಸಿ ಕಲ್ಲೋಳಿಕರ್, ಭಾಗಶಃ ಕುಸಿದಿರುವ ಈ ಕಟ್ಟಡವನ್ನು ಸಂಪೂರ್ಣವಾಗಿ ನೆಲಸಮ ಮಾಡುತ್ತೇವೆ. ನಗರದಲ್ಲಿರುವ ಹಳೆಯ, ಜನವಸತಿಗೆ ಯೋಗ್ಯವಲ್ಲದ ಕಟ್ಟಡಗಳನ್ನು ಮಾಲೀಕರಿಗೆ ನೋಟಿಸ್ ನೀಡಿ ತೆರವುಗೊಳಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.