70 ಮಾದರಿ ಸಮಾಜಸೇವೆ
Team Udayavani, Sep 18, 2020, 4:16 PM IST
ಚಿಕ್ಕಬಳ್ಳಾಪುರ: ಪ್ರಧಾನಿ ಮೋದಿ ಅವರ 70ನೇ ವರ್ಷದ ನೆನಪಿಗಾಗಿ ಜಿಲ್ಲೆಯಲ್ಲಿ 70 ಮಾದರಿಯ ಸಮಾಜ ಸೇವೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರಾಮಲಿಂಗಪ್ಪ ತಿಳಿಸಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಹೆಸರಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳುವಿವಿಧ ಸಮಾಜಮುಖೀ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಶುಭ ಕೋರಿದ್ದಾರೆ ಎಂದರು.
ವರ್ಚುಯಲ್ ಸಮಾವೇಶ: ಜಿಲ್ಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆಗಳನ್ನು ಜನರಿಗೆ ಮಾಡಿಕೊಡುವ ಜೊತೆಗೆ ವರ್ಚುಯಲ್ ಸಮಾವೇಶಗಳನ್ನು ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಮತ್ತು ತರಬೇತಿ ಸಹ ನೀಡಲಾಗುತ್ತದೆ ಎಂದರು.
ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಜಿಲ್ಲಾಧ್ಯಕ್ಷರು, ರಾಜ್ಯದಲ್ಲಿ ಕೋವಿಡ್-19 ಸೋಂಕು ಹರಡಿರುವ ಹಿನ್ನೆಲೆಯಲ್ಲಿ ಸ್ಥಳೀಯ ಸಂಸ್ಥೆಗಳಿಗೆ ನಾಮ ನಿರ್ದೇಶನ ಮತ್ತು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಅಧ್ಯಕ್ಷರನ್ನು ನೇಮಕ ಮಾಡಲು ವಿಳಂಬವಾಗಿದೆ ಎಂದರು. ಬಿಜೆಪಿ ಉಪಾಧ್ಯಕ್ಷ ಸಂದೀಪರೆಡ್ಡಿ, ಪ್ರಧಾನ ಕಾರ್ಯದರ್ಶಿ ಮರಳುಕುಂಟೆ ಕೃಷ್ಣಮೂರ್ತಿ, ಅಶೋಕ್, ಲಕ್ಷ್ಮೀಪತಿ, ಮಧುಚಂದ್ರ ಮತ್ತಿತರರು ಉಪಸ್ಥಿತರಿದ್ದರು.
ಬಿಜೆಪಿ ಕಾರ್ಯಕರ್ತರಿಂದ ಕಲ್ಯಾಣಿ ಸ್ವಚ್ಛತೆ : ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರಮೋದಿ ಅವರ 70ನೇ ಹುಟ್ಟುಹಬ್ಬದ ಅಂಗವಾಗಿ ಚಿಕ್ಕಬಳ್ಳಾಪುರ ನಗರದ 15ನೇ ವಾರ್ಡ್‌ನ ಭಾರತಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಶ್ರಮಧಾನದ ಮೂಲಕ ಕಲ್ಯಾಣಿ ಸ್ವಚ್ಛಗೊಳಿಸಿದರು.
ಬಿಜೆಪಿಯ ಮಾಜಿ ನಗರ ಅಧ್ಯಕ್ಷ ಮಂಜುನಾಥ (ಎಂಎಲ್‌ಎ) ಮಾತನಾಡಿ, ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎಲ್ಲಾ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ. ಕೋವಿಡ್ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡಿದೆ. ನಗರದ 15ನೇ ವಾರ್ಡ್‌ನ ಅಭಿವೃದ್ಧಿಗಾಗಿ ಸಮಿತಿ ರಚಿಸಲಾಗಿದೆ ಎಂದರು.
“”ಸಬ್ ಕಾ ಸಾಥ್ ಸಬ್ ಕಾ ವಿಕಾಸ್” ಘೋಷಣೆ ಮೂಲಕ ಸರ್ವರ ಕಲ್ಯಾಣಕ್ಕಾಗಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿರುವ ಪ್ರಧಾನಿ ಮೋದಿ ಅವರು ವಿಶ್ವವೇ ಭಾರತದತ್ತ ನೋಡುವಂತಹ ಸಾಧನೆ ಮಾಡಿದ್ದಾರೆ ಎಂದರು. ನಗರಸಭಾ ಮಾಜಿ ಸದಸ್ಯ ಮಹಾಕಾಳಿ ಬಾಬು, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಅಭಿಲಾಷ್‌ಗೌಡ, ಕಿರಣ್, ಮುಖಂಡರಾದ ಲಕ್ಷ್ಮೀನಾರಾಯಣಗುಪ್ತ ಮತ್ತಿತರರು ಉಪಸ್ಥಿತರಿದ್ದರು.
ರಾಜಕೀಯ ಚಾಣಕ್ಷತೆ, ಉತ್ತಮ ಬಾಂಧವ್ಯ : ಗುಡಿಬಂಡೆ: ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ರಾಜತಾಂತ್ರಿಕತೆ ನಡೆಯಿಂದ ಇಡೀ ವಿಶ್ವವೇ ಇಂದು ಭಾರತದತ್ತ ತಿರುಗಿ ನೋಡುವಂತೆ ಮಾಡಿದ್ದಾರೆ ಎಂದು ಬಿಜೆಪಿ ಜಿಲ್ಲಾ ಮುಖಂಡ ಜಿ.ಎಸ್.ನಾಗರಾಜು ಹೇಳಿದರು. ಪಟ್ಟಣದಲ್ಲಿ ಬಿಜೆಪಿ ತಾಲೂಕು ಘಟಕದಿಂದ ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಡ್ರಗ್ಸ್ ಮುಕ್ತ ಕರ್ನಾಟಕ್ಕಾಗಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೋದಿಯವರ ರಾಜಕೀಯ ಚಾಣಕ್ಷತನದಿಂದ ಎಲ್ಲಾ ದೇಶಗಳ ನಡುವೆ ಉತ್ತಮ ಬಾಂಧವ್ಯ ಹೊಂದಿ ಗಮನ ಸೆಳೆದಿದ್ದಾರೆ ಎಂದರು.
ಪಟ್ಟಣದ ಮುಖ್ಯರಸ್ತೆಯಲ್ಲಿ ಬಿಜೆಪಿ ಪಕ್ಷದ ವತಿಯಿಂದ ಡ್ರಗ್ಸ್ ಮುಕ್ತ ಕರ್ನಾಟಕ್ಕಾಗಿ ಅಭಿಯಾನ ಹಾಗೂ ನಶೆ ಮುಕ್ತ ಜೀವನ ಸುಖ ಮಯ ಜೀವನ ಎಂಬ ಘೋಷಣೆಯೊಂದಿಗೆ ಜಾಗೃತಿ ಜಾಥಾ ನಡೆಸಿ, ತಾಲೂಕು ಕಚೇರಿ ಮುಂಭಾಗ ಮಾನವ ಸರಪಳಿ ನಿರ್ಮಿಸಿ ಪ್ರತಿಜ್ಞಾ ವಿಧಿಯನ್ನು ಪಕ್ಷದ ತಾಲೂಕು ಅಧ್ಯಕ್ಷ ಗಂಗರೆಡ್ಡಿ ಬೋಧಿಸಿದರು. ಬಿಜೆಪಿ ಪಕ್ಷದ ಮುಖಂಡರಾದ ತಿಮ್ಮಾರೆಡ್ಡಿ, ಪದ್ಮಾವತಮ್ಮ, ರಾಜಗೋಪಾಲ, ನಾಗಭೂಷಣ್, ಮದನ್ ಮೋಹನ್ ರೆಡ್ಡಿ, ವರ‌್ಲಕೊಂಡ ಮಂಜುನಾಥ, ನಂದೀಶ್, ವೆಂಕಟೇಶ್, ಅಮರೇಶ್, ಪೃಥ್ವಿ, ಶ್ರೀನಿವಾಸ್, ಶಿವಪ್ಪ, ಬಾಲಾಜಿ, ಜಿ.ಎಸ್.ನವೀನ್, ಬಾಬು, ನರಸಿಂಹಮೂರ್ತಿ, ಹರೀಶ್ ರೆಡ್ಡಿ, ನಡಿಪನ್ನ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.