ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ: ಡಾ| ಅಜಯಸಿಂಗ್‌


Team Udayavani, Sep 18, 2020, 7:02 PM IST

ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ: ಡಾ| ಅಜಯಸಿಂಗ್‌

ಜೇವರ್ಗಿ: ಹೈದರಾಬಾದ-ಕರ್ನಾಟಕ ಅಭಿವೃದ್ಧಿ ಮಂಡಳಿಯನ್ನು ಕೇವಲ ಕಲ್ಯಾಣ ಕರ್ನಾಟಕ ಎಂದು ಮರು ನಾಮಕರಣ ಮಾಡಿದೆ. ಆದರೆ, ರಾಜ್ಯ ಬಿಜೆಪಿ ಸರ್ಕಾರ ಈ ಭಾಗದ ಅಭಿವೃದ್ಧಿಗೆ ನಯಾಪೈಸೆ ಅನುದಾನ ನೀಡದೇ ನಿರ್ಲಕ್ಷ್ಯ ವಹಿಸಿದೆ. ಕಲ್ಯಾಣ ಕರ್ನಾಟಕಕ್ಕೆ ಬಿಜೆಪಿ ಕೊಡುಗೆ ಶೂನ್ಯ ಎಂದು ಶಾಸಕ ಡಾ| ಅಜಯಸಿಂಗ್‌ ಆರೋಪಿಸಿದರು.

ಪಟ್ಟಣದ ಮಿನಿ ವಿಧಾನಸೌಧ ಕಚೇರಿಯಲ್ಲಿ ಬೆಳೆಹಾನಿ ಕುರಿತು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಕೇವಲ ಹೆಸರು ಬದಲಿಸಿದರೇ ಸಾಲದು ಅದರ ಜೊತೆ ಪ್ರತಿ ವರ್ಷ 2500 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ಹಿಂದುಳಿದ ಭಾಗದ ಸಮಗ್ರ ಅಭಿವೃದ್ಧಿಗೆ ಮುಂದಾಗಬೇಕು. ಕಳೆದ 2013ರಲ್ಲಿ ಯುಪಿಎಸರ್ಕಾರ ಈ ಭಾಗದ ಅಭಿವೃದ್ಧಿಗಾಗಿ 371 (ಜೆ)  ಕಲಂ ಜಾರಿಗೆ ತಂದಿದ್ದು ಅಲ್ಲದೇ ಅಂದಿನ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಹೈದರಾಬಾದ-ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 1,000 ಕೋಟಿ ರೂ. ಇದ್ದ ಅನುದಾನವನ್ನು 1,500 ಕೋಟಿಗೆ ಹೆಚ್ಚಿಸಿತ್ತು. ರಾಜ್ಯ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಈ ಭಾಗದ ಸರ್ವ ಪಕ್ಷದ ಮುಖಂಡರು, ಶಾಸಕರು, ಸಂಸದರು, ಜನಪ್ರತಿನಿಧಿ ಗಳು ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿ ಮಾಡಿ ಕೆಕೆಆರ್‌ಡಿಬಿಗೆ 2,500 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿತ್ತು. ಆದರೆ ಇಲ್ಲಿಯವರೆಗೂ ಈ ಭಾಗಕ್ಕೆ ನಯಾಪೈಸೆ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು.

ಈ ಭಾರಿ ತಾಲೂಕಿನಲ್ಲಿ ತೊಗರಿ 51,000 ಹೆಕ್ಟೇರ್‌, ಹತ್ತಿ-56,000, ಭತ್ತ-4,238, ಮೆಕ್ಕೆಜೋಳ-135, ಸಜ್ಜೆ-140, ಹೆಸರು-310ಹೆಕ್ಟೇರ್‌ ಬಿತ್ತನೆ ಮಾಡಲಾಗಿದೆ. ಅತೀವೃಷ್ಟಿಯಿಂದ ಜೇವರ್ಗಿ ತಾಲೂಕನ್ನು ಪ್ರವಾಹ ಪೀಡಿತ ಎಂದು ಘೋಷಣೆ ಮಾಡಲಾಗಿದ್ದು, ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಈ ಹಿಂದೆ ಮಾಡಿದ ಸಮೀಕ್ಷೆ ಪ್ರಕಾರ ನೇದಲಗಿ ಹಾಗೂ ಹರವಾಳ ಭಾಗದಲ್ಲಿ 210 ಹೆಕ್ಟೇರ್‌ ಬೆಳೆಹಾನಿಯಾಗಿದೆ. ತಾಲೂಕಿನಲ್ಲಿ ಪ್ರತಿಶತ ವಾಡಿಕೆಗಿಂತ ಶೇ.24 ಹೆಚ್ಚು ಮಳೆಯಾಗಿದ್ದು, ಬೆಳೆಹಾನಿಯಾದ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಿ ಪರಿಹಾರಕ್ಕಾಗಿ ಒತ್ತಾಯ ಮಾಡಲಾಗುವುದು ಎಂದು ಹೇಳಿದರು.

ತಾಲೂಕಿನ ಯಾಳವಾರ ಬಳಿ ಜಿಲ್ಲಾಡಳಿತ ಹಾಗೂ ಧರ್ಮಸಿಂಗ್‌ ಫೌಂಡೇಶನ್‌ ವತಿಯಿಂದ ಸ್ಥಾಪಿಸಲಾಗಿರುವ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಇಲ್ಲಿವರೆಗೆ ಒಟ್ಟು 103 ಜನ ಸೋಂಕಿತರು ದಾಖಲಾಗಿದ್ದು, ಅದರಲ್ಲಿ ಒಟ್ಟು 83 ಜನ ಗುಣಮುಖರಾಗಿದ್ದಾರೆ. ಉಳಿದ 20 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್‌ ಸಿದರಾಯ ಭೋಸಗಿ, ತಾಲೂಕು ಆರೋಗ್ಯಾಧಿ ಕಾರಿ ಡಾ| ಸಿದ್ದು ಪಾಟೀಲ ಸೇರಿದಂತೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.