100 ಕೋಟಿ ರೂ. ಅನುದಾನದಲ್ಲಿ ಅಭಿವೃದ್ಧಿ ಕಾರ್ಯ
Team Udayavani, Sep 18, 2020, 7:40 PM IST
ಹೊಳಲ್ಕೆರೆ: ಪ್ರಧಾನಿ ಮೋದಿಯವರ ಜನ್ಮದಿನದ ಅಂಗವಾಗಿ ತಾಲೂಕಿನಲ್ಲಿ 100 ಕೋಟಿ ರೂ. ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಂ. ಚಂದ್ರಪ್ಪ ಹೇಳಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಪಟ್ಟಣದಲ್ಲಿ 70 ಮನೆಗಳ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರುಮಾತನಾಡಿದರು. ಭಾರತವನ್ನು ವಿಶ್ವದ ಹಿರಿಯಣ್ಣನ ಸ್ಥಾನಕ್ಕೇರಿಸಿದ ಪ್ರಧಾನಿ ಮೋದಿಯವರು ಪ್ರಪಂಚದ ಸಮರ್ಥ ನಾಯಕರಾಗಿದ್ದಾರೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಪ್ರಪಂಚಕ್ಕೆ ಸಾರಿ ಭಾರತವನ್ನು ಆಗ್ರಗಣ್ಯ ಸ್ಥಾನಕ್ಕೇರಿಸಿದ ಮಹಾನ್ ಸಾಧಕರು. ರಾಜನೀತಿ ತಜ್ಞರಾಗಿರುವ ಮೋದಿಯವರು ಸಾಮಾನ್ಯ ವ್ಯಕ್ತಿಯಲ್ಲ, ಅವರೊಂದು ಶಕ್ತಿಯಾಗಿದ್ದಾರೆ. ದಕ್ಷ ಆಡಳಿತಗಾರ,ಸಮರ್ಥ ನಾಯಕ, ಸ್ಪಂದನ ಶೀಲ ಹಾಗೂ ವಿಶೇಷ ವ್ಯಕ್ತಿತ್ವ ಹೊಂದಿರುವ ದಣಿವರಿಯದ ನಾಯಕ ಮೋದಿಯವರು ದೇಶವನ್ನು ಪ್ರಗತಿಪರ ಚಿಂತನೆ, ವಿಶಿಷ್ಟ ರಾಜನೀತಿ, ಆರ್ಥಿಕ, ಸಾಮಾಜಿಕ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಿದ ಹೆಗ್ಗಳಿಕೆ ಹೊಂದಿದ್ದಾರೆ ಎಂದರು.
ಗಾಂಧಿ ಜಯಂತಿ ತನಕ ಪ್ರತಿ ನಿತ್ಯ ಒಂದಿಲ್ಲೊಂದು ಕಾರ್ಯಕ್ರಮಗಳು ನಡೆಯಲಿವೆ ಎಂದ ಶಾಸಕರು, ಆಕಾರ್ಯಕ್ರಮಗಳ ವಿವರ ನೀಡಿದರು.ಬಿಜೆಪಿ ಮೋರ್ಚಾ ಅಧ್ಯಕ್ಷ ಎಂ.ಬಿ. ಸಿದ್ದೇಶ್, ಪಪಂ ಸದಸ್ಯರಾದ ಎಚ್.ಆರ್. ನಾಗರತ್ನ ವೇದಮೂರ್ತಿ, ಕೆ.ಸಿ. ರಮೇಶ್, ಪಿ.ಆರ್. ಮಲ್ಲಿಕಾರ್ಜುನ, ಡಿ.ಎಸ್. ವಿಜಯ್, ಪಿ.ಎಚ್. ಮುರುಗೇಶ್, ಅಶೋಕ್, ಮುಖಂಡರಾದ ಗುಂಜಿಗನೂರು ಇಂದ್ರಪ್ಪ, ಕೆ.ಆರ್. ರಾಜಪ್ಪ, ಎಸ್.ಬಿ. ಶಿವರುದ್ರಪ್ಪ, ಬಂಗಿ ಲೋಕೇಶ್, ಕೆ.ಎಸ್. ಸಿದ್ದಪ್ಪ, ಇಂಜಿನಿಯರ್ ವೀರೇಶ್ ಬಾಬು, ನಗರಾಧ್ಯಕ್ಷಪ್ರವೀಣ್ , ಬಸವರಾಜ್, ವಕೀಲರಾದಫಣಿಯಪ್ಪ, ಪ್ರಶಾಂತ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.