ಮೆಗ್ಗಾನ್‌ನಲ್ಲಿ ಖಾಸಗಿ ವೈದ್ಯರ ಸೇವೆ ಬಳಕೆ
Team Udayavani, Sep 18, 2020, 8:06 PM IST
ಶಿವಮೊಗ್ಗ: ಕೋವಿಡ್ ಪೀಡಿತರಿಗೆ ಚಿಕಿತ್ಸೆ ನೀಡಲು ಮೆಗ್ಗಾನ್ ಆಸ್ಪತ್ರೆಯಲ್ಲಿ ಖಾಸಗಿ ವೈದ್ಯರ ಸೇವೆಯನ್ನು ಮುಂದಿನ ದಿನಗಳಲ್ಲಿ ಕಡ್ಡಾಯವಾಗಿ ಬಳಸಿಕೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದರು.
ಗುರುವಾರ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಕಲ್ಪಿಸಲಾಗಿರುವ ಹೊಸ ಮೂಲ ಸೌಲಭ್ಯಗಳ ಪರಿಶೀಲನೆ ನಡೆಸಿದ ಬಳಿಕ ವೈದ್ಯಾಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಪ್ರತಿದಿನ ಕೋವಿಡ್ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮೆಗ್ಗಾನ್ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಮೆಗ್ಗಾನ್‌ನಲ್ಲಿ 390 ಆಕ್ಸಿಜನ್ ಬೆಡ್‌ಗಳು ಲಭ್ಯವಿದ್ದು, ಪ್ರಸ್ತುತ ಇರುವ ವೈದ್ಯಕೀಯ ಸಿಬ್ಬಂದಿ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಖಾಸಗಿ ವೈದ್ಯರ ಸೇವೆಯನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ. ಅಗತ್ಯ ಬಿದ್ದರೆ ಮುಂದಿನ ದಿನಗಳಲ್ಲಿ ಖಾಸಗಿ ನರ್ಸಿಂಗ್ ಹೋಂಗಳನ್ನು ಸಹ ಕೋವಿಡ್ ಚಿಕಿತ್ಸೆಗೆ ಬಳಸಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಎಚ್ಚರಿಕೆ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮಾತನಾಡಿ, ಪ್ರಸ್ತುತ ನಾಲ್ಕು ಮಂದಿ ಖಾಸಗಿ ವೈದ್ಯರ ಸೇವೆಯನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಕಳೆದ ಒಂದು ವಾರದಿಂದ ಬಳಸಿಕೊಳ್ಳಲಾಗುತ್ತಿದೆ. ಆದರೆ ಕೆಲವು ವೈದ್ಯರು ಸೇವೆ ನೀಡಲು ಹಿಂದೇಟು ಹಾಕುತ್ತಿದ್ದು, ಅಂತಹ ವೈದ್ಯರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು.
ಐಎಂಎ ಅಧ್ಯಕ್ಷ ಡಾ| ಪರಶುರಾಮ ಮಾತನಾಡಿ, ಖಾಸಗಿ ವೈದ್ಯರು ಮೆಗ್ಗಾನ್‌ನಲ್ಲಿ ಸೇವೆ ಸಲ್ಲಿಸಲು ಸಿದ್ಧರಿದ್ದಾರೆ. ಅವರಿಗೆ ಕೆಲವು ಸೌಲಭ್ಯಗಳನ್ನು ಒದಗಿಸಿ ಕೊಡಬೇಕು.ಕೋವಿಡ್ ಪಾಸಿಟಿವ್ ವ್ಯಕ್ತಿಗಳ ಚಿಕಿತ್ಸೆ ಪ್ರೊಟೊಕಾಲ್ ಬಗ್ಗೆ ತರಬೇತಿ ನೀಡಬೇಕು. ಅವರಿಗೆ ಒಂದು ವಾರ ಸೇವೆ ಸಲ್ಲಿಸಿದ ಬಳಿಕ ಕ್ವಾರಂಟೈನ್ ವ್ಯವಸ್ಥೆ ಮಾಡಬೇಕು. ಸರ್ಕಾರಿ ವೈದ್ಯರಿಗೆ ಅನ್ವಯವಾಗುವ ವಿಮಾ ಸೌಲಭ್ಯವನ್ನು ಅವರಿಗೂ ಕಲ್ಪಿಸಬೇಕು. ಅವರಿಗೆ ಸೂಕ್ತ ಗೌರವಧನ ಹಾಗೂ ಕೋವಿಡ್ ಪಾಸಿಟಿವ್ ಆದರೆ ಸೂಕ್ತ ವೈದ್ಯಕೀಯ ಸೌಲಭ್ಯ ಒದಗಿಸಬೇಕು ಎಂದು ಮನವಿ ಮಾಡಿದರು.
ಪ್ರಶಂಸೆ: ಮೆಗ್ಗಾನ್ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಲು ಎಲ್ಲಾ ಖಾಸಗಿ ವೈದ್ಯರುಸಿದ್ಧರಿದ್ದು, ಈಗಾಗಲೇ ವೈದ್ಯರ ಪಟ್ಟಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಲಾಗಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಕಳೆದ ಒಂದು ವಾರ ಸೇವೆ ಸಲ್ಲಿಸಿರುವ ಡಾ| ಶ್ರೀಕಾಂತ್ ಹೆಗಡೆ ಅವರು ಮೆಗ್ಗಾನ್ ಆಸ್ಪತ್ರೆಯಲ್ಲಿ ಲಭ್ಯವಿರುವ ಸೌಲಭ್ಯಗಳು, ರೋಗಿಗಳಿಗೆ ವ್ಯವಸ್ಥಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ ಎಂದು ಡಾ| ಧನಂಜಯ ಸರ್ಜಿ ಅವರು ಸಭೆಗೆ ತಿಳಿಸಿದರು.
ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಬೆಡ್ ಲಭ್ಯತೆ: ಪ್ರಸ್ತುತ ಶಿಕಾರಿಪುರ, ಸಾಗರ ಹಾಗೂ ಭದ್ರಾವತಿ ತಾಲೂಕು ಆಸ್ಪತ್ರೆಗಳಲ್ಲಿ ತಲಾ 50 ಆಕ್ಸಿಜನ್ ಬೆಡ್‌ಗಳು ಲಭ್ಯವಿವೆ. ಆಯಾ ತಾಲೂಕುಗಳ ಕೊರೊನಾ ಪೀಡಿತರಿಗೆ ಅಲ್ಲಿಯೇ ಚಿಕಿತ್ಸೆ ಒದಗಿಸಬೇಕು. ಅಗತ್ಯ ಬಿದ್ದರೆ ಮಾತ್ರ ಮೆಗ್ಗಾನ್ ಆಸ್ಪತ್ರೆಗೆ ಅಲ್ಲಿನ ವೈದ್ಯರು ಶಿಫಾರಸು ಮಾಡಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು. ಮೆಗ್ಗಾನ್ ನಿರ್ದೇಶಕ ಡಾ| ಸಿದ್ಧಪ್ಪ, ಡಾ| ಶ್ರೀಧರ್, ಆಡಳಿತ ಮಂಡಳಿ
ಸದಸ್ಯರಾದ ಡಾ| ಗೌತಮ್, ದಿನಕರ ಶೆಟ್ಟಿ, ಡಾ| ವಾಣಿ ಕೋರಿ, ಐಎಂಎ ಕಾರ್ಯದರ್ಶಿ ಡಾ| ಶಂಭುಲಿಂಗ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.