ಕರ್ನಾಟಕದ ಕೆಲವೆಡೆ ಇಂದು ಭಾರೀ ಮಳೆ
ಮುಂದಿನ ವಾರದಿಂದ ಮುಂಗಾರು ಇಳಿಮುಖ
Team Udayavani, Sep 19, 2020, 12:52 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಕರ್ನಾಟಕದ ಕೆಲವು ಭಾಗ ಸೇರಿದಂತೆ, ಮಹಾರಾಷ್ಟ್ರ, ಕೇರಳ, ಗೋವಾದ ಹಲವೆಡೆ ಶನಿವಾರ, ಭಾನುವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ಮುನ್ಸೂಚನೆ ನೀಡಿದೆ.
ದೇಶದಲ್ಲಿ ಮುಂದಿನವಾರದಿಂದ ಮಳೆಗಾಲ ಇಳಿಮುಖ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆ ಇದೆ. ಮುಂದಿನ ವಾರದ ಅಂತ್ಯದಲ್ಲಿ ಪಶ್ಚಿಮ ರಾಜಸ್ಥಾನದಿಂದ ನೈಋತ್ಯ ಮಾನ್ಸೂನ್ ಇಳಿಮುಖ ಕಾಣಲಿದೆ. ಉತ್ತರ ಭಾರತದ ಬಯಲು ಪ್ರದೇಶಗಳಲ್ಲಿ ಈಗಾಗಲೇ ತಾಪಮಾನ ಏರಿಕೆ ಕಂಡುಬಂದಿದೆ ಎಂದು ತಿಳಿಸಿದೆ.
ಪ್ರಸಕ್ತ ಮಾನ್ಸೂನ್ ಋತುವಿನಲ್ಲಿ ದೇಶದಲ್ಲಿ ವಾಡಿಕೆಗಿಂತ ಶೇ.7ರಷ್ಟು ಹೆಚ್ಚು ಮಳೆಯಾಗಿದೆ. ಕರ್ನಾಟಕ, ಆಂಧ್ರ, ತಮಿಳುನಾಡು, ಅಂಡಮಾನ್ ಮತ್ತು ನಿಕೋಬಾರ್, ಲಕ್ಷದ್ವೀಪಗಳಲ್ಲಿ ಶೇ.28ರಷ್ಟು ಹೆಚ್ಚು ಮಳೆಯಾಗಿದೆ. ರಾಜಸ್ಥಾನ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರ್ಯಾಣ, ದಿಲ್ಲಿ, ಲಡಾಖ್ನಲ್ಲಿ ವಾಡಿಕೆಗಿಂತ ಶೇ.15ರಷ್ಟು ಕಡಿಮೆ ಮಳೆಯಾಗಿದೆ ಎಂದು
ಇಲಾಖೆ ಹೇಳಿದೆ.
ಕೊಚ್ಚಿ ಹೋದ ಸೇತುವೆ: ಈ ನಡುವೆ, 1.42 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಸೇತುವೆಯೊಂದು ಉದ್ಘಾಟನೆಗೂ ಮುನ್ನವೇ ಕೊಚ್ಚಿಹೋದ ಘಟನೆ ಬಿಹಾರದಲ್ಲಿ ಶುಕ್ರವಾರ ನಡೆದಿದೆ. ಕಿಶನ್ಗಂಜ್ ಜಿಲ್ಲೆಯಲ್ಲಿ ಕಂಕಾಯಿ ನದಿಗೆ ನಿರ್ಮಿಸಲಾಗಿದ್ದ ಈ ಸೇತುವೆಯನ್ನು ಚುನಾವಣಾ ನೀತಿ ಸಂಹಿತೆ ಜಾರಿಗೆ ಮುನ್ನ ಲೋಕಾರ್ಪಣೆ ಮಾಡಲು ನಿರ್ಧರಿಸ ಲಾಗಿತ್ತು. ಆದರೆ, ಭಾರೀ ಮಳೆಯಿಂದಾಗಿ ಸೇತುವೆ ಕೊಚ್ಚಿ ಹೋಗಿದ್ದು, ಅದನ್ನು ನಿರ್ಮಿಸಿದ ಸಂಸ್ಥೆ ವಿರುದ್ಧ ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ
Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.