ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಾನಸಿಕ ಚಿಕಿತ್ಸೆ
Team Udayavani, Sep 19, 2020, 4:37 PM IST
ಮಂಡ್ಯ: ಮಾನಸಿಕ ರೋಗಿಗಳಿಗೆ ಮೊದಲು ನೆನಪಾಗುವುದು ಬೆಂಗಳೂರಿನ ನಿಮ್ಹಾನ್ಸ್. ಆದರೆ, ಬದಲಾದ ಸನ್ನಿವೇಶದಲ್ಲಿ ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯಕೇಂದ್ರಗಳಲ್ಲೂ ಮಾನಸಿಕ ರೋಗಕ್ಕೆ ಚಿಕಿತ್ಸೆ ಸಿಗಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಪಿ.ಮಂಚೇಗೌಡ ತಿಳಿಸಿದರು.
ನಗರದ ರೋಟರಿ ಶಾಲೆಯ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಸೇವೆ ಗಳು, ಜಿಲ್ಲಾ ಆರೋಗ್ಯ ಸಂಘದಿಂದ ನಡೆದ ಜಿಲ್ಲೆಯ ವಿವಿಧ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳಿಗೆ ಮಾನಸಿಕ ಆರೋಗ್ಯ ಮತ್ತು ಚಿಕಿತ್ಸೆಕುರಿತು ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಚಿಕಿತ್ಸೆ ತರಬೇತಿ: ಮಾನಸಿಕ ಕಾಯಿಲೆ ಇರುವ ವ್ಯಕ್ತಿಗಳನ್ನು ಮೊದಲೇ ಗುರುತಿಸಿ, ಅವರು ಆತ್ಮಹತ್ಯೆಗೆ ಶರಣಾಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಚಿಕಿತ್ಸೆ ನೀಡುವ ತರಬೇತಿ ಕಾರ್ಯಕ್ರಮಗಳು ಸಹಾಯಕವಾಗಲಿವೆ. ಮನಸ್ಸಿನ ಒತ್ತಡ ಕಡಿಮೆ ಮಾಡಲು ಮಾನಸಿಕ ಆರೋಗ್ಯದ ಚಿಕಿತ್ಸೆ, ಆಪ್ತ ಸಮಾಲೋಚನೆ ಮೂಲಕ ಸಂಪರ್ಕಿಸಿ, ಮಾನಸಿಕ ವಾಗಿ ತೊಳಲಾಡುವವರನ್ನು ಗುರುತಿಸಿ ಸೂಕ್ತ ಚಿಕಿತ್ಸೆ ಕೊಡಿಸಿದಲ್ಲಿ ಅದರಿಂದ ಹೊರಬಹದು ಎಂದು ಸಲಹೆ ನೀಡಿದರು.
ಕಳೆದ ನಾಲ್ಕು ವರ್ಷಗಳಲ್ಲಿ ಇದ್ದಂತ ಆತ್ಮಹತ್ಯೆ ಪ್ರಕರಣಗಳು ಜಿಲ್ಲೆಯಲ್ಲಿ ಕಡಿಮೆಯಾಗಿವೆ. ರೈತಆತ್ಮಹತ್ಯೆ, ಮಾನಸಿಕ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ಇದಕ್ಕೆ ಆರೋಗ್ಯ ಇಲಾಖೆ ಇಂಥ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಆಪ್ತ ಸಮಾಲೋಚನೆಯಲ್ಲಿ ತೊಡಗಿರುವುದೇ ಕಾರಣವಾಗಿದೆ ಎಂದು ಹೇಳಿದರು.
ಎಲ್ಲ ರೀತಿಯ ಸೌಲಭ್ಯ: ಒತ್ತಡದಲ್ಲಿ ಎಲ್ಲರೂ ಕೆಲಸಮಾಡುತ್ತಿರುತ್ತಾರೆ. ಒತ್ತಡವನ್ನು ಕಡಮೆ ಮಾಡಿ ಕೊಳ್ಳುವ ಮೂಲಕ ಮನಸ್ಸನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು. ಆರೋಗ್ಯ ಇ-ಸಂಜೀವಿನಿ ಅÂಪ್ ನಲ್ಲಿ ಹೆಸರುಗಳನ್ನು ನೋಂದಾಯಿಸಿಕೊಂಡಲ್ಲಿ ಮನೆ ಬಾಗಿಲಿಗೆ ವೈದ್ಯೋಪಚಾರ ದೊರೆಯುತ್ತದೆ.ಇದರಲ್ಲಿ ರೋಗಿಗಳಿಗೆ ಚಿಕಿತ್ಸೆ ಪಡೆಯಲು ಒಳ್ಳೆಯ ಕಾರ್ಯಕ್ರಮವಾಗಿದೆ. ಇಲ್ಲಿ ಎಲ್ಲ ರೀತಿಯ ಸೌಲಭ್ಯಗಳೂ ದೊರೆಯುತ್ತವೆ ಎಂದು ತಿಳಿಸಿದರು.
ಜಿಲ್ಲಾಮಾನಸಿಕಆರೋಗ್ಯಕಾರ್ಯಕ್ರಮಾಧಿಕಾರಿಡಾ.ಕೆ.ಪಿ.ಅಶ್ವತ್ಥ್, ಸಂಪನ್ಮೂಲ ವ್ಯಕ್ತಿ ಡಾ.ಶಶಾಂಕ್, ಹಿರಿಯ ವೈದ್ಯಾಧಿಕಾರಿ ಡಾ.ಕೆ.ಎಂ.ಶಿವಕುಮಾರ್, ಮಹಮದ್ ಸುಹೇಲ್, ಗೋವಿಂದರಾಜು, ಚಿಕ್ಕರಸೇಗೌಡ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.