ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಂಕಲ್ಪ
Team Udayavani, Sep 19, 2020, 5:58 PM IST
ಚಿಕ್ಕಬಳ್ಳಾಪುರ: ಕರ್ನಾಟಕವನ್ನು ಡ್ರಗ್ಸ್ ಮುಕ್ತ ಮಾಡಲು ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ದೃಢಸಂಕಲ್ಪ ಮಾಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಿದೆ ಎಂದು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಕಂಬದಹಳ್ಳಿ ಸುರೇಂದ್ರಗೌಡ ಹೇಳಿದರು.
ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಸಾದಲಿ ಶಕ್ತಿ ಕೇಂದ್ರದಲ್ಲಿ ಶಿಡ್ಲಘಟ್ಟ ಭಾರತೀಯ ಜನತಾ ಪಾರ್ಟಿ ಗ್ರಾಮಾಂತರ ಮಂಡಲ ವತಿಯಿಂದ ಪ್ರಧಾನಮಂತ್ರಿ ಹುಟ್ಟು ಹಬ್ಬದ ಅಂಗವಾಗಿ ಹಿರಿಯರು ಮತ್ತು ಅಂಗವಿಕಲರಿಗೆ ಹಣ್ಣುಹಂಪಲು ಮತ್ತು ಸಿಹಿ ಹಂಚಿಕೆ ಮಾಡಿ ಮಾತನಾಡಿದ ಅವರು, ಯುವಕರನ್ನು ಮಾದಕ ವಸ್ತುಗಳಿಂದ ದೂರ ಇಡಲು ಮತ್ತು ರಾಜ್ಯವನ್ನು ಡ್ರಗ್ಸ್ ಮುಕ್ತ ಮಾಡಲು ಎಲ್ಲರು ಸಹಕರಿಸಬೇಕೆಂದು ಮನವಿ ಮಾಡಿದರು. ಗ್ರಾಮಾಂತರ ಮಂಡಲ ವತಿಯಿಂದ ಸಾದಲಿ, ಬಶೆಟ್ಟಹಳ್ಳಿ ಸೇರಿದಂತೆ 6 ಹೋಬಳಿಯಲ್ಲಿ ಅಂಗವಿಕಲರಿಗೆ ಮತ್ತು ಹಿರಿಯರನ್ನು ಗುರುತಿಸಿ 70 ಜನಕ್ಕೆ ಹಣ್ಣು, ಸಿಹಿ ಹಂಚಿಕೆ ಮಾಡುವ ಮೂಲಕ ಪ್ರಧಾನಿ ಮೋದಿ ಅವರ ಹುಟ್ಟು ಹಬ್ಬ ಆಚರಿಸಿದರು.
ಜಿಲ್ಲಾ ಬಿಜೆಪಿ ಉಪಾಧ್ಯಕ್ಷೆ ಸುಜಾತಮ್ಮ, ಹಿರಿಯ ಮುಖಂಡರು ಚಿಕ್ಕದಾಸರಹಳ್ಳಿ ದಾಮೋಧರ್, ಮಂಡಲ ಉಪಾಧ್ಯಕ್ಷ ಅರಿಕೆರೆ ಮುನಿರಾಜು, ಸೀತಬೈರಾರೆಡ್ಡಿ, ಪ್ರಧಾನ ಕಾರ್ಯದರ್ಶಿ ಸದ್ದಹಳ್ಳಿ ರಜನಿಕಾಂತ್ ಬಾಬು, ನಟರಾಜ್, ಮಹಿಳಾ ಮೋರ್ಚಾ ಅಧ್ಯಕ್ಷೆ ಸದ್ದಹಳ್ಳಿ ಕಮಲಾ, ಪ್ರಧಾನ ಕಾರ್ಯದರ್ಶಿ ಕವಿತಾ, ಯುವ ಮೋರ್ಚಾ ಅಧ್ಯಕ್ಷ ಅಂಬರೀಶ್, ರೈತ ಮೋರ್ಚಾ ಅಧ್ಯಕ್ಷ ಬೈರಾರೆಡ್ಡಿ, ಪ್ರಧಾನ ಕಾರ್ಯದರ್ಶಿ ನರೇಂದ್ರ, ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಾದಲಿ ನವೀನ್, ಅಬ್ಲೂಡು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಗುಡಿಹಳ್ಳಿ ಮಂಜುನಾಥ್, ಚೀಮಂಗಲ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಗೊರಮಡುಗು ಡಿಶ್ ಮಂಜುನಾಥ್, ಮರಿಹಳ್ಳಿ ರಾಜು, ಸಾದಲಿ ತಿಪ್ಪಣ್ಣ, ಜಗದೀಶ್‌ಬಾಬು, ಸೊಣಗಾನಹಳ್ಳಿ ಮಂಜುನಾಥ, ನಾಗೇಂದ್ರ ಹಾಗೂ ಸಾದಲಿ ವ್ಯಾಪ್ತಿಯ ನಾಯಕರು, ಮುಖಂಡರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.