ನೆರೆ ಎದುರಿಸಲು ಸನ್ನದ್ಧರಾಗಿ
Team Udayavani, Sep 19, 2020, 7:24 PM IST
ಬೀದರ: ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಅವಾಂತರಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿ, ಸಿಬ್ಬಂದಿಗಳು ಕೇಂದ್ರ ಸ್ಥಾನದಲ್ಲಿದ್ದು ಜನರ ಸಮಸ್ಯೆಗೆ ಸ್ಪಂದಿಸಬೇಕು ಮತ್ತು ಮಳೆಯಿಂದಾಗುವ ಸಮಸ್ಯೆ ಎದುರಿಸಲು ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ಆರ್. ರಾಮಚಂದ್ರನ್ ಸೂಚಿಸಿದ್ದಾರೆ.
ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆ ಬೀದರ ನಗರ ಸೇರಿ ಇಡೀ ಜಿಲ್ಲೆಯ ಚಿತ್ರಣವನ್ನೇ ಬದಲಿಸಿದೆ. ಭಾಲ್ಕಿ ತಾಲೂಕಿನಲ್ಲಿ ಇಬ್ಬರು ಮತ್ತು ಬೀದರನಲ್ಲಿ ಒಬ್ಬರು ಸೇರಿ ಜಿಲ್ಲೆಯಲ್ಲಿ ಈವರೆಗೆ ಮೂವರು ಬಲಿಯಾಗಿದ್ದಾರೆ. ಬೆಳೆ ಹಾನಿ, ಜತೆಗೆ ಮರ, ಕಂಬಗಳು ನೆಲಕ್ಕುರುಳಿವೆ. ಮಳೆಯಿಂದ ಮೃತಪಟ್ಟ ಜಾನುವಾರುಗಳು, ಬಿದ್ದ ಮನೆಗಳು, ಹಾಳಾದ ಸೇತುವೆಗಳು, ಬೆಳೆ ಹಾಳಾದ ಜಮೀನಿನ ನಿಖರ ಮಾಹಿತಿಗಾಗಿ ಜಂಟಿ ಸಮೀಕ್ಷೆ ಪ್ರಗತಿಯಲ್ಲಿದೆ ಎಂದು “ಉದಯವಾಣಿ’ಗೆ ತಿಳಿಸಿದರು.
ಮಹಾರಾಷ್ಟ್ರದ ಲಾತೂರ ಮತ್ತುಉಸ್ಮಾನಾಬಾದ್ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತೇರನಾ,ಧನೆಗಾಂವ ಮತ್ತು ಇನ್ನಿತರ ನೀರಾವರಿಅಣೆಕಟ್ಟೆಗಳು ಬಹುತೇಕ ಭರ್ತಿ ಆಗಿರುವುದರಿಂದ ಮಾಂಜ್ರಾ ನದಿಗೆ ನೀರು ಬಿಡಲಾಗಿದೆ. ಹಾಗೂ ಮುಂದೆ ಮಳೆ ಕಡಿಮೆಯಾಗದೇ ಸದರಿ ಜಲಾಶಯಗಳಲ್ಲಿನ ಒಳಹರಿವು ಹೆಚ್ಚಾಗುವ ಸಾಧ್ಯತೆ ಇದ್ದಲ್ಲಿ ಇನ್ನಷ್ಟು ನೀರು ನದಿಗೆ ಹರಿಸಲಾಗುವುದು ಎಂದುಮುನ್ಸೂಚನೆ ನೀಡಲಾಗಿದೆ. ಆದ್ದರಿಂದ ಮಾಂಜ್ರಾ ನದಿ ಪಾತ್ರದ ಗ್ರಾಮಗಳ ಗ್ರಾಮಸ್ಥರು ನದಿಗೆ ಇಳಿಯದಂತೆ ಹಾಗೂ ಜಾನುವಾರುಗಳು ನದಿ ದಡದತ್ತ ಹೋಗದಂತೆ ನೋಡಿಕೊಳ್ಳಬೇಕು. – ಆರ್. ರಾಮಚಂದ್ರನ್, ಡಿಸಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.