ಕೋವಿಡ್‌-19 ಸೋಂಕು ತಡೆಗೆ ಅರಿವು ಮೂಡಿಸಿ


Team Udayavani, Sep 20, 2020, 5:59 PM IST

ಕೋವಿಡ್‌-19 ಸೋಂಕು ತಡೆಗೆ ಅರಿವು ಮೂಡಿಸಿ

ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್‌-19 ಸೋಂಕು ತಡೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಬೇಕು. ಸೋಂಕಿನ ಪರೀಕ್ಷೆ ಮಾಡಿಸಿಕೊಳ್ಳಲು ಸಾರ್ವಜನಿಕರು ಮುಂದೆ ಬರಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸರ್ಕಾರದ ಕಾರ್ಯದರ್ಶಿ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎ.ಬಿ. ಇಬ್ರಾಹಿಂ ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಪಂ ಸಭಾಂಗಣದಲ್ಲಿ ಶನಿವಾರ ಕೋವಿಡ್‌ -19 ಹಾಗೂ ಪ್ರವಾಹ ಪರಿಸ್ಥಿತಿ ಹಾಗೂ ಇಲಾಖಾ ಅಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನೆ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾರ್ವಜನಿಕರು ವೈಯಕ್ತಿಕ ಸ್ವತ್ಛತೆ ಕಾಪಾಡಿಕೊಳ್ಳಬೇಕು. ಕೆಮ್ಮುವಾಗ, ಸೀನುವಾಗ ಕರವಸ್ತ್ರ, ಟಿಶ್ಯೂ ಪೇಪರ್‌ ಬಳಸಬೇಕು. ಕೈ ಸ್ವತ್ಛಗೊಳಿಸುವ ದ್ರಾವಣ ಅಥವಾ ನೀರು ಮತ್ತು ಸೋಪು ಬಳಸಿ ಆಗಾಗ ಕೈ ತೊಳೆದುಕೊಳ್ಳಬೇಕು. ಸಾಮಾಜಿಕ ಸಮೂಹ ಗುಂಪು ಸೇರದಂತೆ ಜನರಲ್ಲಿ ಅರಿವು ಮೂಡಿಸುವಂತೆ ಸಲಹೆ ನೀಡಿದರು.

ಜಿಪಂ ಸಿಇಒ ಶಿಲ್ಪಾ ಶರ್ಮಾ ಮಾತನಾಡಿ, ಲಾಕ್‌ಡೌನ್‌ ವೇಳೆ ಗ್ರಾಮಗಳಿಗೆ ಹಿಂತಿರುಗಿದ ಜನರಿಗೆ ನರೇಗಾದಡಿ ಉದ್ಯೋಗ ನೀಡಲಾಗಿದೆ ಎಂದು ತಿಳಿಸಿದರು.

ಡಿಎಚ್‌ಒ ಮಾತನಾಡಿ, ಜಿಲ್ಲೆಯ ಮುದ್ನಾಳದಲ್ಲಿರುವ ಕೋವಿಡ್‌ ಜಿಲ್ಲಾ ಆಸ್ಪತ್ರೆ 297 ಹಾಸಿಗೆ ಸಾಮರ್ಥ್ಯ ಹೊಂದಿದ್ದು, ಅದರಲ್ಲಿ 132 ಆಕ್ಸಿಜನ್‌ ಹಾಸಿಗೆ, 15 ಹೈ ಡಿಪೆಂಡೆನ್ಸಿ ಯುನಿಟ್‌, 15 ಐಸಿಯು ಹಾಸಿಗೆ, 14 ವೆಂಟಿಲೇಟರ್, ಶೀಘ್ರದಲ್ಲೆ ಲಿಕ್ವಿಡ್‌ ಆಕ್ಸಿಜನ್‌ ಪ್ಲಾಂಟ್‌ನ್ನು ಉದ್ಘಾಟಿಸಲಾಗುವುದು. 140 ಜಂಬೊ ಆಕ್ಸಿಜನ್‌ ಸಿಲಿಂಡರ್ಸ್‌ ಇವೆ. ಜಿಲ್ಲೆಯಲ್ಲಿ ಆಕ್ಸಿಜನ್‌ ಕೊರತೆ ಇಲ್ಲ. ತಜ್ಞ ವೈದ್ಯರಕೊರತೆ ಇದ್ದು, ಶೀಘ್ರದಲ್ಲೇ ಐವರು ವೈದ್ಯರ ನೇಮಕ ಪ್ರಕ್ರಿಯೆ ನಡೆಯುತ್ತಿದೆ ಎಂದು ವಿವರಿಸಿದರು.

ಪ್ರೊಬೇಷnರಿ ಐಎಎಸ್‌ ಅಧಿಕಾರಿ ಅಶ್ವಿ‌ಜಾ, ಅಪರ ಜಿಲ್ಲಾ ಧಿಕಾರಿ ಪ್ರಕಾಶ ರಜಪೂತ, ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ಜಿಪಂ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ಡಾ| ಸೂರ್ಯಪ್ರಕಾಶ ಎಂ.ಕಂದಕೂರ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ನಾರಾಯಣಪ್ಪ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಸಾಜೀದ್‌, ತಹಶೀಲ್ದಾರರು, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-yadagiri

Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

arrested

Mangaluru; ನಕಲಿ ಆಧಾರ್, ದಾಖಲೆ ಸೃಷ್ಟಿಸಿಕೊಡುತ್ತಿದ್ದ ಆರೋಪಿ ಬಂಧನ

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

1-idpp

Actor; ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಟಿ ಡಿಂಪಲ್‌ ಕಪಾಡಿಯಾ

1-kukke

Kukke Subrahmanya: ಕಿರುಷಷ್ಠಿ ರಥೋತ್ಸವ

1-mang

Mangaluru ಧರ್ಮಪ್ರಾಂತ;ವಾರ್ಷಿಕ ಪರಮ ಪವಿತ್ರ ಪ್ರಸಾದದ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.