ಭಾರಿ ಮಳೆಗೆ ಭದ್ರಾವತಿಯ ಹೊಸ ಸೇತುವೆ ಮುಳುಗಡೆ: ವಾಹನ ಸಂಚಾರ ಬಂದ್
Team Udayavani, Sep 20, 2020, 6:46 PM IST
ಶಿವಮೊಗ್ಗ: ಭದ್ರಾವತಿ ನಗರದ ಹೊಸ ಸೇತುವೆ ಈ ಬಾರಿಯೂ ಮುಳುಗಡೆಯಾಗಿದ್ದು ಸಂಚಾರ ಬಂದ್ ಮಾಡಲಾಗಿದೆ. ಭದ್ರಾ ಜಲಾನಯನ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿದ್ದು ಅಧಿಕ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದೆ. ಭಾನುವಾರ ಬೆಳಗ್ಗೆ 8ಕ್ಕೆ 9 ಸಾವಿರ ಕ್ಯೂಸೆಕ್ಸ್ ಇದ್ದ ಒಳಹರಿವು 10 ಗಂಟೆ ವೇಳೆಗೆ 40 ಸಾವಿರ ಕ್ಯೂಸೆಕ್ಸ್ ದಾಟಿತ್ತು. ಸಂಜೆ 4 ಗಂಟೆ ವೇಳೆಗೆ 68556 ಕ್ಯೂಸೆಕ್ಸ್ ಒಳಹರಿವು ಇದ್ದ ಕಾರಣ ನದಿಗೆ 60900 ಕ್ಯೂಸೆಕ್ಸ್ ನೀರು ಹೊರಬಿಡಲಾಗುತ್ತಿದೆ.
ಸುಮಾರು 45 ಸಾವಿರ ಕ್ಯೂಸೆಕ್ಸ್ ನೀರು ಬಿಟ್ಟರೂ ಸಾಕು ಕೆಎಸ್‌ಆರ್‌ಟಿಸಿ ನಿಲ್ದಾಣದ ಪಕ್ಕದ ಹೊಸ ಸೇತುವೆ ಮೇಲೆ ನೀರು ಹರಿಯುತ್ತದೆ. ಭದ್ರಾವತಿ ಜನರ ಪ್ರಮುಖ ಸಂಪರ್ಕ ಸೇತುವಾಗಿರುವ ಈ ಸೇತುವೆ ಪ್ರತಿ ಬಾರಿಯೂ ಮುಳುಗಡೆಯಾಗುತ್ತಿದ್ದು ಕಟ್ಟಿದ್ದ ಎಂಜಿನಿಯರ್ ಬಗ್ಗೆ ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ. 100 ವರ್ಷ ಪೂರೈಸಿರುವ ಹಳೇ ಸೇತುವೆ ಈವರೆಗೂ ಸಂಚಾರಕ್ಕೆ ತೊಂದರೆ ಉಂಟು ಮಾಡಿಲ್ಲ. 1ಲಕ್ಷ ಕ್ಯೂಸೆಕ್ಸ್ ನೀರು ಬಿಟ್ಟರೂ ಮುಳುಗಡೆಯಾಗದಷ್ಟು ವ್ಯವಸ್ಥಿತವಾಗಿ ನಿರ್ಮಾಣ ಮಾಡಲಾಗಿದೆ.ಆದರೆ ಹೊಸ ಸೇತುವೆ ಕೇವಲ 45 ಸಾವಿರ ಕ್ಯೂಸೆಕ್ಸ್ ನೀರು ಬಿಟ್ಟರೂ ಸೇತುವೆಯ ಮೇಲೆ ಹರಿಯಲು ಆರಂಭವಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.