ಅರಬ್ ನಾಡಿನಲ್ಲಿ ಸ್ಟೊಯ್ನ್ಸ್ ಬಿರುಗಾಳಿ ; ಪಂಜಾಬ್ ಗೆಲುವಿಗೆ 158 ಗುರಿ
Team Udayavani, Sep 20, 2020, 9:24 PM IST
ದುಬೈ: ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಡೆಲ್ಲಿ ಕ್ಯಾಪಿಟಲ್ಸ್ 8 ವಿಕೆಟ್ ನಷ್ಟಕ್ಕೆ 157 ರನ್ ಗಳಿಸಿದೆ.
ಆರಂಭಿಕರಾಗಿ ಕಣಕ್ಕಿಳಿದ ಶಿಖರ್ ಧವನ್ ಮತ್ತು ಪೃಥ್ವಿ ಶಾ ಉತ್ತಮ ಆಟವಾಡುವ ಭರವಸೆ ನೀಡಿದ್ದರು. ಆದರೇ ರನ್ ಗಳಿಸುವ ಭರದಲ್ಲಿ ಶಿಖರ್ ಧವನ್ ರನೌಟ್ ಆಗಿ ಶೂನ್ಯಕ್ಕೆ ನಿರ್ಗಮಿಸಿದರು. ಪೃಥ್ವಿ ಶಾ (5) ಕೂಡ ಶಮಿ ಎಸೆತದಲ್ಲಿ ಜೋರ್ಡನ್ ಗೆ ಕ್ಯಾಚ್ ಕೊಟ್ಟು ಪೆವಿಲಿಯನ್ ಹಾದಿ ಹಿಡಿದರು.
ಶಿಮ್ರಾನ್ ಹೆಟ್ಮೇಯರ್(7) ಕೂಡ ಒಂದಂಕಿ ದಾಟುವ ಮೊದಲೇ ಶಮಿ ಬೌಲಿಂಗ್ ನಲ್ಲಿ ಮಯಾಂಕ್ ಕೈಗೆ ಚೆಂಡಿತ್ತರು. ಡೆಲ್ಲಿ ತಂಡ ಕೇವಲ 4 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು ಒತ್ತಡಕ್ಕೆ ಸಿಲುಕಿತ್ತು.
ನಂತರ ಬಂದ ನಾಯಕ ಶ್ರೇಯಸ್ ಅಯ್ಯರ್ ಮತ್ತು ರಿಷಬ್ ಪಂತ್ ತಂಡಕ್ಕೆ ಅಲ್ಪ ಚೇತರಿಕೆ ನೀಡಿದರು.
ಆದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕುವ ಕನಸು ಕಾಣುತ್ತಿದ್ದ ಕಿಂಗ್ಸ್ ಪಂಜಾಬ್ ಬೌಲರ್ ಗಳಿಗೆ ಮರಳುನಾಡಿನಲ್ಲಿ ಬಿರುಗಾಳಿಯಂತೆ ಕಾಡಿದವರು ಆಸೀಸ್ ಆಲ್ ರೌಂಡರ್ ಮಾರ್ಕಸ್ ಸ್ಟೊಯ್ನ್ಸ್.
ಕೇವಲ 21 ಎಸೆತಗಳಲ್ಲಿ ಭರ್ಜರಿ 53 ರನ್ ಸಿಡಿಸಿದ ಸ್ಟೊಯ್ನ್ಸ್ ಪಂಜಾಬ್ ವಿರುದ್ಧ ತನ್ನ ತಂಡ ಸ್ಪರ್ಧಾತ್ಮಕ ಮೊತ್ತ ಕಲೆಹಾಕುವಲ್ಲಿ ಭರ್ಜರಿ ಪಾತ್ರವನ್ನು ವಹಿಸಿದರು.
ಇದನ್ನೂ ಓದಿ: IPL-2020ಯ ಮೊದಲ ಸೂಪರ್ ಓವರ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್
ಈ ಸ್ಪೋಟಕ ಇನ್ನಿಂಗ್ಸ್ ನಲ್ಲಿ ಸ್ಟೊಯ್ನ್ಸ್ 3 ಭರ್ಜರಿ ಸಿಕ್ಸರ್ ಹಾಗೂ 7 ಬೌಂಡರಿಗಳನ್ನು ಸಿಡಿಸಿದರು. ಕ್ರಿಸ್ ಜೋರ್ಡಾನ್ ಅವರ ಒಂದೇ ಓವರ್ ನಲ್ಲಿ ಸ್ಟೊಯ್ನ್ಸ್ 25 ರನ್ ಸಿಡಿಸಿದ್ದು ಅವರ ಇಂದಿನ ಬ್ಯಾಟಿಂಗ್ ಪರಾಕ್ರಮಕ್ಕೆ ಸಾಕ್ಷಿಯಾಗಿತ್ತು.
19.5ನೇ ಓವರ್ ನಲ್ಲಿ ರನೌಟಾಗುವ ಮೊದಲು ಸ್ಟೊಯ್ನ್ಸ್ ಅವರು 53 ರನ್ ಬಾರಿಸಿ ತನ್ನ ತಂಡವನ್ನು ಸುರಕ್ಷಿತ ಸ್ಥಿತಿಯಲ್ಲಿ ಇರಿಸಿದ್ದರು. ಅವರ ಜೊತೆಗಾರರಾಗಿದ್ದ ರಬಾಡ ಅವರು ಒಂದೇ ಒಂದು ಎಸೆತ ಎದುರಿಸದೇ ಸ್ಟೊಯ್ನ್ಸ ಬಿರುಗಾಳಿಗೆ ಮೂಕಪ್ರೇಕ್ಷಕರಾಗಿದ್ದರು!
ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ಸ್ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ಗಳ ನಷ್ಟಕ್ಕೆ 157 ರನ್ ಗಳನ್ನು ಕಲೆಹಾಕಿತು.
ಸ್ಟೊಯ್ನ್ಸ್ ಹೊರತುಪಡಿಸಿ ಡೆಲ್ಲಿ ಕ್ಯಾಪಿಟಲ್ಸ್ ಪರ ಶ್ರೇಯಸ್ ಅಯ್ಯರ್ (39), ರಿಷಭ್ ಪಂತ್ (31) ಉತ್ತಮ ಬ್ಯಾಟಿಂಗ್ ನಡೆಸಿದರು. ಕಿಂಗ್ಸ್ ಪಂಜಾಬ್ ಪರ ಮಹಮ್ಮದ್ ಶಮಿ 3 ವಿಕೆಟ್ ಪಡೆದು ಮಿಂಚಿದರೆ, ಶೆಲ್ಡನ್ ಕಾಟ್ರೆಲ್ 2 ವಿಕೆಟ್ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ODI: ಶ್ರೀಲಂಕಾ ಬ್ಯಾಟಿಂಗ್ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Sydney: ಆಸ್ಟ್ರೇಲಿಯಾ ಪ್ರೇಕ್ಷಕರಿಗೆ ಸ್ಯಾಂಡ್‌ಪೇಪರ್ ಕೇಸ್ ನೆನಪು ಮಾಡಿದ ವಿರಾಟ್|Video
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.