ಮಡಿಕೈ ಗ್ರಾಮ ಪಂಚಾಯತ್‌ನ ಅಭಿವೃದ್ಧಿ ದಾಖಲೆ ಬಿಡುಗಡೆ
Team Udayavani, Sep 21, 2020, 6:56 PM IST
ಮಡಿಕೈ ಗ್ರಾಮ ಪಂಚಾಯತ್‌ನ ಅಭಿವೃದ್ಧಿ ದಾಖಲೆಯನ್ನು ಕಂದಾಯ ಸಚಿವ ಇ. ಚಂದ್ರಶೇಖರನ್ ಬಿಡುಗಡೆಗೊಳಿಸಿದರು
ಕಾಸರಗೋಡು: ಮಡಿಕೈ ಗ್ರಾಮ ಪಂಚಾಯತ್‌ನ ಅಭಿವೃದ್ಧಿ ದಾಖಲೆಯನ್ನು ಕಂದಾಯ ಸಚಿವ ಇ. ಚಂದ್ರಶೇಖರನ್ ಬಿಡುಗಡೆಗೊಳಿಸಿದರು.
ಪಂಚಾಯತ್ ಸಭಾಂಗಣದಲ್ಲಿ ಕೋವಿಡ್ ಸಂಹಿತೆ ಪಾಲಿಸುವ ಮೂಲಕ ಸಮಾರಂಭ ಜರಗಿತು. ಈ ಸಂದರ್ಭ ಮಾತನಾಡಿದ ಸಚಿವ ರಾಜ್ಯದಲ್ಲಿ ಹಿಂದೆಂದೂ ನಡೆಯದಷ್ಟು ಅಭಿವೃದ್ಧಿ ಚಟುವಟಿಕೆಗಳು ನಡೆಯುತ್ತಿವೆ. ಕೇಂದ್ರ-ರಾಜ್ಯ ಸರಕಾರಗಳ ಯೋಜನೆಗಳು ಯಥಾಸಮಯದಲ್ಲಿ ಪೂರ್ತಿಗೊಳ್ಳುತ್ತಿವೆ. ಇದಕ್ಕೆ ಮಡಿಕೈ ಗ್ರಾಮ ಪಂಚಾಯತ್ ಉತ್ತಮ ಉದಾಹರಣೆ ಎಂದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ನಡೆಸಿದವರನ್ನು ಅಭಿನಂದಿಸಲಾಯಿತು. ಪಂಚಾಯತ್ ಅಧ್ಯಕ್ಷ ಸಿ.ಪ್ರಭಾಕರನ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಶಶಿಧರನ್, ಸ್ಥಾಯೀ ಸಮಿತಿ ಅಧ್ಯಕ್ಷ ಶಶೀಂದ್ರನ್ ಮಡಿಕೈ ಉಪಸ್ಥಿತರಿದ್ದರು. ಉಪಾಧ್ಯಕ್ಷೆ ಕೆ. ಪ್ರಮೀಳಾ ಸ್ವಾಗತಿಸಿದರು.
ಅಭಿವೃದ್ಧಿಯ ಹೊಳಪಲ್ಲಿ ಮಡಿಕೈ ಎಂಬ ಹೆಸರಲ್ಲಿ ಪ್ರಕಟಗೊಂಡಿರುವ ದಾಖಲೆಯಲ್ಲಿ ಗ್ರಾಮ ಪಂಚಾಯತ್‌ನಲ್ಲಿ ಆಡಳಿತೆ ಸಮಿತಿ 5 ವರ್ಷಗಳಲ್ಲಿ ನಡೆಸಿದ ಅಭಿವೃದ್ಧಿ ಚಟುವಟಿಕೆಗಳು, ಮುಂದೆ ಜಾರಿಗೊಳಿಸುವ ಯೋಜನೆಗಳು ಇತ್ಯಾದಿಗಳ ಬಗ್ಗೆ ಜನತೆಗೆ ಮಾಹಿತಿ ನೀಡಲಾಗಿದೆ. ಈ ದಾಖಲೆಯನ್ನು ಪಂಚಾಯತ್ ಮಟ್ಟದ ಮನೆಮನೆಗೆ ತಲಪಿಸಲಾಗುವುದು ಎಂದು ಆಡಳಿತೆ ಸಮಿತಿ ಪದಾಧಿಕಾರಿಗಳು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.