ಬೆಳ್ಳಿತೆರೆಯಿಂದ ಕಿರುತೆರೆಗೆ ಹರಡಿದ ಮಾದಕ ಜಾಲ
ಲೂಸ್ ಮಾದ, ಪ್ರೇಮಾ ಸಹೋದರ ಅಯ್ಯಪ್ಪ ವಿಚಾರಣೆ
Team Udayavani, Sep 22, 2020, 5:45 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ನಟ ಲೂಸ್ ಮಾದ ಖ್ಯಾತಿಯ ಯೋಗೀಶ್ ಮತ್ತು ಕ್ರಿಕೆಟಿಗ, ನಟಿ ಪ್ರೇಮಾ ಅವರ ಸಹೋದರ ಅಯ್ಯಪ್ಪ ಸೇರಿ ನಾಲ್ವರನ್ನು ಆಂತರಿಕ ಭದ್ರತಾ ದಳದ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.
ಇದರೊಂದಿಗೆ ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣ ಭೇದಿಸಲು ರಾಜ್ಯ ಆಂತರಿಕ ಭದ್ರತಾ ದಳ (ಐಎಸ್‌ಡಿ) ಕೂಡ ಅಖಾಡಕ್ಕಿಳಿದಂತಾಗಿದೆ. ಈಗ ಸ್ಯಾಂಡಲ್‌ವುಡ್ ಡ್ರಗ್ಸ್ ಹಗರಣದ ಜಾಲ ಬೆಳ್ಳಿತೆರೆ ಮಾತ್ರವಲ್ಲದೆ ಕಿರುತೆರೆಯನ್ನೂ ಆವರಿ ಸಿರುವುದು ಖಚಿತವಾಗಿದ್ದು, ಹಲವು ಕಿರುತೆರೆ ನಟಿಯರಿಗೆ ವಿಚಾರಣೆಗೆ ನೋಟಿಸ್ ನೀಡಲಾಗಿದೆ.
ಡ್ರಗ್ಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ ನಾವೂ ರಾಜ್ಯಾದ್ಯಂತ ಕಾರ್ಯಾಚರಣೆ ನಡೆಸುತ್ತಿದ್ದೇವೆ. ಈ ಪ್ರಕರಣದಲ್ಲಿ ಹಲವು ನಟರು ಮತ್ತಿತರರನ್ನು ವಿಚಾರಣೆಗೆ ಒಳಪಡಿಸುತ್ತಿದ್ದೇವೆ ಎಂದು ಐಎಸ್‌ಡಿ ಮುಖ್ಯಸ್ಥ ಭಾಸ್ಕರ ರಾವ್ ತಿಳಿಸಿದ್ದಾರೆ.
ನಟ ಯೋಗೀಶ್ ವಿಚಾರಣೆ
ನಟ ಯೋಗೀಶ್ ಮತ್ತು ಖಾಸಗಿ ವಾಹಿನಿಯ ಸಿಬಂದಿ ಯೊಬ್ಬರನ್ನು ಸೋಮವಾರ ವಿಚಾರಣೆ ನಡೆಸ ಲಾಗಿದೆ ಎಂದು ತಿಳಿದು ಬಂದಿದೆ. ಕೆಲವು ವರ್ಷ ಗಳ ಹಿಂದೆ ಸಿನೆಮಾಗಳಲ್ಲಿ ಅವಕಾಶ ಕಡಿಮೆ ಯಾಗಿದ್ದಾಗ ಕೆಲವು ದುಶ್ಚಟಗಳ ದಾಸನಾಗಿದ್ದೆ. ಆದರೆ ಡ್ರಗ್ಸ್ ಮಾರಾಟ ವ್ಯಕ್ತಿಗಳ ಜತೆ ಸಂಪರ್ಕ ಹೊಂದಿಲ್ಲ. ಮುಖ್ಯವಾಗಿ ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣಕ್ಕೂ ತನಗೂ ಸಂಬಂಧವಿಲ್ಲ ಎಂದು ವಿಚಾರಣೆ ಸಂದರ್ಭದಲ್ಲಿ ನಟ ಯೋಗೀಶ್ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮತ್ತೂಂದೆಡೆ ನಟ ಯೋಗೀಶ್ ಮತ್ತು ಸ್ಯಾಂಡಲ್‌ವುಡ್ ಪ್ರಕರಣದ ಎರಡನೇ ಆರೋಪಿ ರಾಗಿಣಿ ಸ್ನೇಹಿತರಾಗಿದ್ದು, ಇಬ್ಬರು ಜತೆಯಾಗಿ ಕೆಲವು ಪಾರ್ಟಿಗಳಿಗೆ ಹೋಗಿದ್ದಾರೆ ಎಂದು ಹೇಳಲಾಗಿತ್ತು.
ಕಿರುತೆರೆ ಕಲಾವಿದರಾದ ಅಭಿಷೇಕ್ ಮತ್ತು ಗೀತಾ ಎಂಬವ ರಿಗೂ ನೋಟಿಸ್ ಜಾರಿ ಮಾಡಲಾಗಿದ್ದು, ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಸೆ. 19ರಂದು ನಟಿ ಪ್ರೇಮಾ ಅವರ ಸಹೋದರ, ಕ್ರಿಕೆಟಿಗ ಅಯ್ಯಪ್ಪ ಮತ್ತು ಕೊಡಗು ಮೂಲದ ಕಿರುತೆರೆ ನಟಿಯೊಬ್ಬರನ್ನು ಐಎಸ್‌ಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಇಬ್ಬರನ್ನೂ ಶನಿವಾರ ಬೆಳಗ್ಗಿನಿಂದ ಸಂಜೆವರೆಗೂ ವಿಚಾರಣೆಗೆ ಒಳಪಡಿಸಲಾಗಿತ್ತು.
ಇದುವರೆಗೆ 9 ಕೇಸು
ಐಎಸ್‌ಡಿ ಅಧಿಕಾರಿಗಳು ಇದುವರೆಗೆ ಮಾದಕವಸ್ತು ಮಾರಾಟ ಜಾಲಕ್ಕೆ ಸಂಬಂಧಿಸಿ 9 ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಇತ್ತೀಚೆಗೆ ನಡೆಸಿದ ಕಾರ್ಯಾಚರಣೆಯಲ್ಲಿ ಅಂತಾರಾಷ್ಟ್ರೀಯ ಡ್ರಗ್ಸ್ ಪೆಡ್ಲರ್‌ಗಳ ಜತೆ ಸಂಪರ್ಕದಲ್ಲಿದ್ದ ಆರೋಪಿಯೊಬ್ಬನನ್ನು ಬಂಧಿಸಿ ವಿಚಾರಣೆ ನಡೆಸಲಾಗಿತ್ತು. ಈತನ ಮಾಹಿತಿ ಮತ್ತು ಆರೋಪಿಯ ಕರೆ ವಿವರ ಪರಿಶೀಲಿಸಿದಾಗ ಕೆಲವು ನಟ, ನಟಿಯರು ಮತ್ತು ಕಿರುತೆರೆ ಕಲಾವಿದರು ಸಂಪರ್ಕದಲ್ಲಿರುವುದು ಪತ್ತೆಯಾಗಿತ್ತು. ಈ ಸಾಕ್ಷ್ಯ ಆಧರಿಸಿ ಮೂರು ದಿನಗಳಲ್ಲಿ ನಾಲ್ವರ ವಿಚಾರಣೆ ನಡೆಸಲಾಗಿದೆ ಎಂದು ಐಎಸ್‌ಡಿ ಮೂಲಗಳು ತಿಳಿಸಿವೆ.
ಹೊಟೇಲ್‌ಗಳಲ್ಲಿ ಶೋಧ
ಡ್ರಗ್ಸ್ ಪ್ರಕರಣದಲ್ಲಿ ಆರೋಪಿ “ತಾರೆ’ಯರನ್ನು ಬೇಟೆಯಾಡಿದ್ದ ಕೇಂದ್ರ ಅಪರಾಧ ವಿಭಾಗ (ಸಿಸಿಬಿ)ದ ಪೊಲೀಸರು ಈಗ ಸ್ಟಾರ್ ನಟ-ನಟಿಯರು ಹೋಗಿದ್ದ ತಾರಾ ಹೊಟೇಲ್‌ಗಳ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದಾರೆ.
ನಗರದ 3 ಪ್ರತಿಷ್ಠಿತ ಹೊಟೇಲ್‌ಗಳಿಗೆ ನೋಟಿಸ್ ಜಾರಿ ಮಾಡಿದ್ದು, ಲಾಕ್‌ಡೌನ್ ಮತ್ತು ಅದಕ್ಕೂ ಹಿಂದೆ ನಡೆದ ಕೆಲವು ಪಾರ್ಟಿಗಳ ಸಿಸಿಟಿವಿ ದೃಶ್ಯಾವಳಿ ನೀಡುವಂತೆ ನೋಟಿಸ್ ಜಾರಿ ಮಾಡಿದ್ದಾರೆ.
ಪ್ರಕರಣದ ಕಿಂಗ್‌ಪಿನ್ ವೀರೇನ್ ಖನ್ನಾ ವಿಚಾರಣೆ ಸಂದರ್ಭ ಕೆಲವು ಮಾಹಿತಿ ನೀಡಿದ್ದಾನೆ. ಮೂರು ಹೊಟೇಲ್‌ಗಳಿಗೆ ಮಾತ್ರ ನೋಟಿಸ್ ನೀಡಲಾಗಿದೆ. ಹೊಟೇಲ್ ಮಾಲಕರು ಸಿಸಿಟಿವಿ ದೃಶ್ಯಾವಳಿಗಳನ್ನು ನೀಡಿದರೆ ಪ್ರಕರಣಕ್ಕೆ ಪುಷ್ಟಿ ಸಿಕ್ಕಂತಾಗಲಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.