ಸಂತ್ರಸ್ತರಿಗೆ ಶೀಘ್ರ ಪರಿಹಾರ ನೀಡಿ: ಪಾಟೀಲ
Team Udayavani, Sep 22, 2020, 6:23 PM IST
ಚಿಂಚೋಳಿ: ಸೇಡಂ ಮತ್ತು ಚಿಂಚೋಳಿ ವಿಧಾನಸಭಾ ಮತಕ್ಷೇತ್ರಗಳ ಅನೇಕ ಹಳ್ಳಿಗಳಲ್ಲಿ ಸಾಕಷ್ಟು ಮಳೆ ಸುರಿದ ಪರಿಣಾಮ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. ಸಂತ್ರಸ್ತರಿಗೆ ಇನ್ನುವರೆಗೆ ಪರಿಹಾರ ನೀಡಿಲ್ಲ. ಶಾಸಕರು, ಸಚಿವರು ಕೇವಲ ಕುರ್ಚಿ ಉಳಿಸಿಕೊಳ್ಳುವುದರಲ್ಲಿಯೇ ಕಾಲಹರಣ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಬಿಜೆಪಿ ಸರಕಾರ ವಿರುದ್ಧ ವಾಗ್ಧಾಳಿ ನಡೆಸಿದರು.
ಸೇಡಂ ವಿಧಾನಸಭಾ ಮತಕ್ಷೇತ್ರಕ್ಕೆ ಒಳಪಟ್ಟಿರುವ ತಾಲೂಕಿನ ರುದನೂರ, ಚಿಂತಪಳ್ಳಿ, ಭೂತಪೂರ, ರಾಯಕೋಡ, ಕೆರೊಳಿ ಗ್ರಾಮಗಳಲ್ಲಿ ರವಿವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಅನೇಕ ಮನೆಗಳಿಗೆ ಹಳ್ಳಕೊಳ್ಳ, ನಾಲಾಗಳ ನೀರು ನುಗ್ಗಿ ಹಾನಿಯ ಕುರಿತು ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಂಚೋಳಿ ಮತ್ತು ಸೇಡಂ ತಾಲೂಕುಗಳಲ್ಲಿ ದಾಖಲೆಮಳೆ ಸುರಿಯುತ್ತಿದೆ. ಸೇಡಂ ಮತ್ತು ಚಿಂಚೋಳಿಯ ಅನೇಕ ಗ್ರಾಮಗಳಲ್ಲಿ ರೈತರು ಬೆಳೆದ ಮುಂಗಾರು ಬೆಳೆಗಳು ಮಳೆನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ. ರೈತರು ರಾಶಿಗಾಗಿ ಸಂಗ್ರಹಣೆ ಮಾಡಿದ ಹೆಸರು, ಉದ್ದಿನ ಕಾಯಿಗಳಲ್ಲಿ ಮೊಳಕೆಯೊಡೆದಿವೆ. ಮನೆ ಕಳೆದುಕೊಂಡ ಕುಟುಂಬಗಳಿಗೆ 10 ಸಾವಿರ ರೂ. ಮತ್ತು ಬೆಳೆ ಹಾನಿಗೊಳದ ರೈತರ ಪ್ರತಿ ಎಕರೆಗೆ 10 ಸಾವಿರ ರೂ. ಪರಿಹಾರ ತಕ್ಷಣವೇ ಘೋಷಿಸಬೇಕೆಂದು ಆಗ್ರಹಿಸಿದರು.
ಬಿಜೆಪಿ ಸರಕಾರ ಬಡವರ ಮತ್ತು ರೈತರ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲದಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಚಿಂತಪಳ್ಳಿ, ರಾಯಕೋಡ, ರುದನೂರ, ಭೂತಪೂರ, ಕೆರೋಳಿ, ಭಂಟನಳ್ಳಿ ಗ್ರಾಮಗಳಲ್ಲಿ ರವಿವಾರ ರಾತ್ರಿವಿಡೀ ದಾಖಲೆ ಮಳೆ ಸುರಿದ ಪರಿಣಾಮ ಅನೇಕರ ಮನೆಗಳಿಗೆ ನೀರು ನುಗ್ಗಿದೆ. ಸಾಕಷ್ಟು ಪ್ರಮಾಣದಲ್ಲಿ ದವಸ ಧಾನ್ಯಗಳು, ಆಹಾರ ಪದಾರ್ಥಗಳು ನೀರಿನ ರಭಸಕ್ಕೆ ಕೊಚ್ಚಿ ಹೋಗಿವೆ. ಸರಕಾರ ತಕ್ಷಣವೇ ರೈತರ ನೆರವಿಗೆ ಬರಬೇಕೆಂದು ಒತ್ತಾಯಿಸಿದರು.
ಉತ್ತರ ಕರ್ನಾಟಕದ ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ವಿಜಯಪುರ, ಧಾರವಾಡ ಜಿಲ್ಲೆಗಳಲ್ಲಿ ಕಳೆದ ವರ್ಷ ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಹರಿದು ಬಿಟ್ಟ ನೀರಿನ ಪ್ರವಾಹದಿಂದ ಅನೇಕ ತಾಲೂಕಿನಲ್ಲಿ ಹಾನಿ ಸಂಭವಿಸಿದ್ದರಿಂದ ಪ್ರತಿಯೊಂದು ಕುಟುಂಬಕ್ಕೆ ತಕ್ಷಣ 5 ಸಾವಿರ ರೂ. ಪರಿಹಾರ ನೀಡಲಾಗಿದೆ. ಅದರಂತೆ ನಮ್ಮ ಭಾಗದಲ್ಲಿ ಉಂಟಾದ ಹಾನಿಯ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಬೆಳಗಾವಿ ಮಾದರಿಯಲ್ಲಿ ಸರಕಾರದಿಂದ ಪರಿಹಾರ ಘೋಷಿಸಬೇಕೆಂದು ಒತ್ತಾಯಿಸಿದರು.
ಬಸವರಾಜ ಕೆರೋಳಿ, ಸುರೇಶ ಪಾಟೀಲ, ಅರ್ಜುನಕ್ರಾಂತಿ, ವಿಶ್ವನಾಥ ಪಾಟೀಲ, ಕಾಶಿನಾಥ ಜಮಾದಾರ, ಲಿಂಗದೇವಯ್ಯ ಸ್ವಾಮಿ, ರಾಮಲಿಂಗ ಯಲಬಾವಿ, ಶರಣಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.