ಅಂಗನವಾಡಿ-ಐಸಿಡಿಎಸ್‌ ಯೋಜನೆ ಉಳಿಸಲು ಆಗ್ರಹ

Team Udayavani, Sep 22, 2020, 7:42 PM IST

ಅಂಗನವಾಡಿ-ಐಸಿಡಿಎಸ್‌ ಯೋಜನೆ ಉಳಿಸಲು ಆಗ್ರಹ

ದಾವಣಗೆರೆ: ರಾಜ್ಯದಲ್ಲಿನ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ ಕೆಜಿ, ಯುಕೆಜಿ ಪ್ರಾರಂಭಿಸುವ ಮೂಲಕ ಐಸಿಡಿಎಸ್‌ ಯೋಜನೆ ಉಳಿಸುವುದು ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸೋಮವಾರ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್‌ (ಎಐಟಿಯುಸಿ) ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರ ಸರ್ಕಾರಿ ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ಪ್ರಾರಂಭಿಸುವುದಾಗಿ ಘೋಷಣೆ ಮಾಡಿದೆ. ಸರ್ಕಾರಿ ಶಾಲೆಯಲ್ಲೇ ಎಲ್‌ಕೆಜಿ, ಯುಕೆಜಿ ಪ್ರಾರಂಭ ಮಾಡುವುದರಿಂದ ಅಂಗನವಾಡಿಗೆ ಬರುವಂತಹ ಮಕ್ಕಳ ಸಂಖ್ಯೆ ಕಡಿಮೆ ಆಗಲಿದೆ. ಮಕ್ಕಳ ಸಂಖ್ಯೆಯೇ ಇಲ್ಲ ಎಂದು ಮುಂದೆ ಕೇಂದ್ರಗಳನ್ನೇ ಮುಚ್ಚುವಂತಹ ವಾತಾವರಣ ನಿರ್ಮಾಣವಾಗಬಹುದು. ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ಪ್ರಾರಂಭಿಸುವುದರಿಂದ ಲಕ್ಷಾಂತರ ಸಂಖ್ಯೆಯಲ್ಲಿನ ಸಹಾಯಕಿ ಯರು ಮತ್ತು ಕಾರ್ಯಕರ್ತೆಯರ ಜೊತೆಗೆ ಮಕ್ಕಳು, ಪೋಷಕರಿಗೂ ಅನುಕೂಲ ಆಗಲಿದೆ. ಸರ್ಕಾರ ಏನಾದರೂ ಸರ್ಕಾರಿ ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ಪ್ರಾರಂಭಿಸಿದಲ್ಲಿ ಕಾರ್ಯಕರ್ತೆಯರು, ಸಹಾಯಕಿಯರ ಜೀವನಕ್ಕೆ ಭಾರೀ ತೊಂದರೆ ಆಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಸರ್ಕಾರ ಅಂಗನವಾಡಿ ಕೇಂದ್ರಗಳನ್ನೇ ಸಶಕ್ತಗೊಳಿಸಬೇಕು. ಹಲವಾರು ವರ್ಷದಿಂದ ಗೌರವ ಧನದ ಹೆಸರಲ್ಲಿ ಕಡಿಮೆ ವೇತನದೊಂದಿಗೆ ಬಹುತೇಕ ಎಲ್ಲಾ ಇಲಾಖೆ ಕೆಲಸ ಮಾಡುತ್ತಿರುವ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಸರ್ಕಾರಿನೌಕರರು ಎಂದು ಪರಿಗಣಿಸಿ, ಕೆಲಸ ಖಾಯಂ ಮಾಡಬೇಕು. ಆರೋಗ್ಯ ವಿಮೆ, ಭವಿಷ್ಯನಿಧಿ ಇತರೆ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಹಿಸಿಕೊಂಡಿರುವ ಸಚಿವರು ಒಮ್ಮೆಯೂ ಈವರೆಗೆ ಅಂಗನವಾಡಿಕಾರ್ಯಕರ್ತೆಯರು, ಸಹಾಯಕಿಯರ ಸಭೆ ನಡೆಸಿ, ಸಮಸ್ಯೆಗಳ ಬಗ್ಗೆ ಚರ್ಚಿಸುವ ಗೋಜಿಗೂ ಹೋಗಿಲ್ಲ.ಮಹಿಳೆಯರು ಮತ್ತು ಮಕ್ಕಳ ಸಮಸ್ಯೆಗೆ ಸ್ಪಂದಿಸದ ಅವರನ್ನು ಕೂಡಲೇ ಸಚಿವ ಸ್ಥಾನದಿಂದ ಕೈ ಬಿಡಬೇಕು ಎಂದು ಒತ್ತಾಯಿಸಿದರು

ಕೋವಿಡ್ ವಾರಿಯರ್ಸ್‌ಗಳಾಗಿ ಸೇವೆ ಮಾಡುತ್ತಿರುವ ಸಂದರ್ಭದಲ್ಲಿ ಮೃತಪಟ್ಟಿರುವ ಜಿಲ್ಲೆಯ 6 ಜನ ಒಳಗೊಂಡಂತೆ 25 ಜನ ಕಾರ್ಯಕರ್ತೆಯರ ಕುಟುಂಬಗಳಿಗೆ ಗೆ ಸರ್ಕಾರಿ ನಿಯಮದಂತೆ ಕೂಡಲೇ 30 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಉಪ ವಿಭಾಗಾಧಿಕಾರಿ ಕಚೇರಿ ಮೂಲಕ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಎಐಟಿಯುಸಿ ರಾಜ್ಯ ಅಧ್ಯಕ್ಷ ಎಚ್‌. ಕೆ. ರಾಮಚಂದ್ರಪ್ಪ, ಆವರಗೆರೆ ಎಚ್‌.ಜಿ. ಉಮೇಶ್‌, ಎಂ.ಬಿ. ಶಾರದಮ್ಮ, ಎಸ್‌.ಎಸ್‌. ಮಲ್ಲಮ್ಮ, ಆವರಗೆರೆ ಚಂದ್ರು, ಆವರಗೆರೆ ವಾಸು, ಐರಣಿ ಚಂದ್ರು, ಕಾಳಮ್ಮ, ಸುಧಾ, ರೇಣುಕಮ್ಮ ಇತರರು ಇದ್ದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

DVG-Duggamma

Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.