ರಾಜ್ಯದಲ್ಲಿ11 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ


Team Udayavani, Sep 22, 2020, 8:13 PM IST

MUMBAI-TDY-1

ಸಾಂದರ್ಭಿಕ ಚಿತ್ರ

ಮುಂಬಯಿ, ಸೆ. 21: ರಾಜ್ಯದಲ್ಲಿ ಕೋವಿಡ್‌ ಮೊದಲ ಪ್ರಕರಣ ಬೆಳಕಿಗೆ ಬಂದಾಗಿನಿಂದ, ರಾಜ್ಯದ ಪರಿಸ್ಥಿತಿ ನಿರಂತರವಾಗಿ ಹದಗೆಡುತ್ತಿದ್ದು, ಕೋವಿಡ್‌ ಅಧಿಕ ಸೋಂಕಿತರ ಪಟ್ಟಿಯಲ್ಲಿ ಸತತವಾಗಿ ಅಗ್ರಸ್ಥಾನದಲ್ಲಿರುವ ಮಹಾರಾಷ್ಟ್ರವು ದೇಶದ ರಾಜ್ಯಗಳನ್ನು ಮಾತ್ರವಲ್ಲದೆ ವಿಶ್ವದ ಹಲವು ದೇಶಗಳನ್ನೂ ಮೀರಿ ಮುನ್ನಡೆಯುತ್ತಿದೆ.

31 ಸಾವಿರಕ್ಕೂ ಅಧಿಕ ಮಂದಿ ಸಾವು : ಪ್ರಸ್ತುತ ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 11 ಲಕ್ಷ ದಾಟಿದೆ. ಅಧಿಕ ಸೋಂಕಿತರ ಸ್ಥಾನದಲ್ಲಿ ಆಂಧ್ರಪ್ರದೇಶ 2ನೇ ಸ್ಥಾನದಲ್ಲಿದೆ. ಆದರೆ ಇಲ್ಲಿಯೂ ಸಹ ರೋಗಿಗಳ ಸಂಖ್ಯೆ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆಯ ಅರ್ಧದಷ್ಟಿದೆ ಎನ್ನಲಾಗಿದೆ. ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದ 31 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಒಂದೆಡೆ ರಾಜ್ಯದಲ್ಲಿ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆ ನಿಯಂತ್ರಣಕ್ಕೆ ಬರುತ್ತಿಲ್ಲ. ಇನ್ನೊಂದೆಡೆ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸೋಟಕ್ಕೆ ಎಲ್ಲ ತಜ್ಞರು ವಿಭಿನ್ನ ಕಾರಣಗಳನ್ನು ನೀಡುತ್ತಿದ್ದಾರೆ.

ವಲಸಿಗರಿಂದ ಕೋವಿಡ್ ಸೋಂಕು ಉಲ್ಬಣ : ಮಹಾರಾಷ್ಟ್ರವು ಉದ್ಯೋಗದ ಶಕ್ತಿಶಾಲಿ ಕೇಂದ್ರವಾಗಿದೆ ಎಂದು ಕೆಲವು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇಲ್ಲಿಗೆ ಅಧಿಕ ಸಂಖ್ಯೆಯಲ್ಲಿ ವಲಸೆ ಬಂದವರು ಕೋವಿಡ್ ಸೋಂಕು ಹೆಚ್ಚಾಗಲು ಕಾರಣರಾಗಿದ್ದಾರೆ. ಏತನ್ಮಧ್ಯೆ ಮುಂಬಯಿಯ ಹಣಕಾಸು ಕ್ಷೇತ್ರವನ್ನು ಎಂದಿಗೂ ಮುಚ್ಚಿಲ್ಲ ಎಂದು ಆರೋಗ್ಯ ಅರ್ಥಶಾಸ್ತ್ರಜ್ಞ ರವಿ ದುಗ್ಗಲ್‌ ಹೇಳಿದ್ದಾರೆ. ದೇಶಾದ್ಯಂತ ಲಾಕ್‌ಡೌನ್‌ ಜಾರಿಗೊಳಿಸಿದಾಗಲೂ, ಬ್ಯಾಂಕುಗಳಲ್ಲಿ ಅಥವಾ ಹಣಕಾಸು ಸಂಸ್ಥೆಗಳಲ್ಲಿ ಜನರ ಸಂಚಾರವನ್ನು ನಿಲ್ಲಿಸಲಾಗಲಿಲ್ಲ. ಇದು ಸೋಂಕನ್ನು ಹರಡಲು ಸಹ ಸಹಾಯ ಮಾಡಿದೆ ಎಂದು ಆಪಾದಿಸಿದ್ದಾರೆ. ಯುನೈಟೆಡ್‌ ಸ್ಟೇಟ್ಸ್‌ ನ್ಯೂಯಾರ್ಕ್‌ ನಗರದಲ್ಲಿ ಹೆಚ್ಚಿನ ಕೋವಿಡ್ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ತಜ್ಞ ಡಾ| ಅನಂತ್‌ ಭನ್‌ ಹೇಳಿದ್ದಾರೆ. ಅದೇ ರೀತಿ ಮುಂಬಯಿಯಲ್ಲೂ ಸಂಭವಿಸಿದೆ. ವಲಸಿಗರು ತಮ್ಮ ಕೆಲಸದ ಸ್ಥಳಗಳಿಗೆ ಮರಳುವುದು ಆತಂಕಕ್ಕೆ ಹೊಸ ಕಾರಣವಾಗಿದೆ ಎಂದು ಅವರು ಹೇಳಿದ್ದು, ಥಾಣೆ ನಿಲ್ದಾಣಕ್ಕೆ ಬರುವ ಪ್ರತಿ 10 ಮಂದಿಯಲ್ಲಿ ಒಬ್ಬರಿಗೆ ಸೋಂಕು ದೃಢಪಡುತ್ತಿರುವುದು ಇದಕ್ಕೆ ನಿದರ್ಶನವಾಗಿದೆ ಎಂದಿದ್ದಾರೆ.

ಶಿಥಿಲಗೊಂಡ ಆರೋಗ್ಯ ಸೌಲಭ್ಯ: ಉತ್ತರ ಪ್ರದೇಶದ ಬಳಿಕ ಮಹಾರಾಷ್ಟ್ರದಲ್ಲಿ ಅಧಿಕ ಸಂಖ್ಯೆಯಲ್ಲಿ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಸದ್ಯ ನಡೆದ ಪರೀಕ್ಷೆ ಜನಸಂಖ್ಯಾ ಸಾಂದ್ರತೆಯ ದೃಷ್ಟಿಯಿಂದ ತುಂಬಾ ಕಡಿಮೆಯಾಗಿದೆ. ರಾಜ್ಯದ ಆರೋಗ್ಯ ಇಲಾಖೆಯ ಸ್ಥಿತಿ ಈಗಾಗಲೇ ಕೆಟ್ಟಿದೆ. ಆರೋಗ್ಯ ಮೂಲಸೌಕರ್ಯಕ್ಕಾಗಿ ಕನಿಷ್ಠ ಖರ್ಚು ಮಾಡುವ ರಾಜ್ಯ ಮಹಾರಾಷ್ಟ್ರ. ಇದಲ್ಲದೆ ವೈದ್ಯಕೀಯ ಕ್ಷೇತ್ರದಲ್ಲಿ ಭಾರೀ ಸಂಖ್ಯೆಯಲ್ಲಿ ಹುದ್ದೆಗಳು ಖಾಲಿಯಿವೆ. ಈ ಎಲ್ಲ ಕಾರಣಗಳಿಂದಾಗಿ ಕೋವಿಡ್ ಪ್ರಕರಣಗಳು ಮಹಾರಾಷ್ಟ್ರದಲ್ಲಿ ಅನಿಯಂತ್ರಿತವಾಗಿವೆ. ರಾಜ್ಯ ರಾಜಧಾನಿ ಮುಂಬಯಿಯಲ್ಲಿ ಸೋಂಕಿತರ ಸಂಖ್ಯೆ ತೀವ್ರವಾಗಿ ಹೆಚ್ಚಾಗಿದೆ ಎನ್ನಲಾಗುತ್ತಿದೆ. ಕಳೆದ ಒಂದು ತಿಂಗಳಲ್ಲಿ ರಾಜಧಾನಿಯಲ್ಲಿ ಸಕ್ರಿಯ ರೋಗಿಗಳ ಸಂಖ್ಯೆ ಸುಮಾರು ಶೇ. 92ರಷ್ಟು ಹೆಚ್ಚಾಗಿದೆ. ಬಿಎಂಸಿಮಾಹಿತಿ ಪ್ರಕಾರ ಆಗಸ್ಟ್‌ 18ರಂದು ಮುಂಬಯಿಯಲ್ಲಿ ಕೋವಿಡ್ 17,697 ಸಕ್ರಿಯ ರೋಗಿಗಳಿದ್ದರು. ಸೆ. 18ರಂದು ಈ ಸಂಖ್ಯೆ 34,136ಕ್ಕೆ ಏರಿದೆ. ಸೆ. 1ರಂದು ಆಸ್ಪತ್ರೆಯಲ್ಲಿ ಒಟ್ಟು 20,062 ಸಕ್ರಿಯ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ 18 ದಿನಗಳಲ್ಲಿ 14,074 ಸಕ್ರಿಯ ರೋಗಿಗಳು ಹೆಚ್ಚಿದ್ದಾರೆ. ಸೆ. 1 ಮತ್ತು 18ರ ನಡುವೆ 33,235 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ

ಟಾಪ್ ನ್ಯೂಸ್

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.