ಆಯುಷ್ಮಾನ್ ಸೌಲಭ್ಯ ವಂಚಿತ ಕಡಬ ಸಮುದಾಯ ಆಸ್ಪತ್ರೆ
ತಜ್ಞ ವೈದ್ಯರಿಲ್ಲ; ತಾಲೂಕು ಕೇಂದ್ರ ಕಡಬದ ಜನತೆಯ ಗೋಳು ಕೇಳುವವರಿಲ್ಲ
Team Udayavani, Sep 23, 2020, 5:34 AM IST
ಕಡಬ ಸಮುದಾಯ ಆರೋಗ್ಯ ಕೇಂದ್ರ.
ಕಡಬ: ನೂತನ ತಾಲೂಕು ಕೇಂದ್ರ ಕಡಬದಲ್ಲಿ ಸಮುದಾಯ ಆರೋಗ್ಯ ಕೇಂದ್ರವಿದ್ದರೂ ಸೂಕ್ತ ಸವಲತ್ತುಗಳು ಹಾಗೂ ತಜ್ಞ ವೈದ್ಯರು ಇಲ್ಲದಿರುವ ಕಾರಣದಿಂದಾಗಿ ಆರೋಗ್ಯ ಸೇವೆಯ ವಿಚಾರದಲ್ಲಿ ತೀರಾ ಹಿಂದುಳಿದಿದೆ. ಇದೀಗ ಕೇಂದ್ರ ಸರಕಾರದ ಆಯುಷ್ಮಾನ್ ಕಾರ್ಡ್ ನ ಮೂಲಕ ಉಚಿತ ಚಿಕಿತ್ಸೆ ಸೌಲಭ್ಯವನ್ನು ದ.ಕ. ಜಿಲ್ಲೆಯ ಸುಮಾರು 40 ಆಸ್ಪತ್ರೆಗಳಿಗೆ ನೀಡಿದ್ದರೂ ಕಡಬ ತಾಲೂಕಿನ ಯಾವುದೇ ಆಸ್ಪತ್ರೆಗಳಿಗೆ ಅವಕಾಶ ನೀಡದಿರುವುದು ಕಡಬ ಭಾಗದ ಜನರಲ್ಲಿ ನಿರಾಸೆ ಮೂಡಿಸಿದೆ.
ಸೂಕ್ತ ವೈದ್ಯಕೀಯ ಸವಲತ್ತುಗಳು ಇಲ್ಲದೆ ಕಡಬ ಭಾಗದ ಜನತೆ ದೂರದ ಪುತ್ತೂರು, ಮಂಗಳೂರಿಗೆ ಚಿಕಿತ್ಸೆಗಾಗಿ ತೆರಳಬೇಕಾದ ಅನಿವಾರ್ಯ ಇದೆ. ಕೇಂದ್ರ ಸರಕಾರದ ಆಯುಷ್ಮಾನ್ ಭಾರತ ಯೋಜನೆಯ ಮೂಲಕ ಆರೋಗ್ಯ ಇಲಾಖೆಯಿಂದ ಬಿಪಿಎಲ್ ಪಡಿತರದಾರರಿಗೆ ವಾರ್ಷಿಕ 5 ಲಕ್ಷ ರೂ. ವರೆಗೆ ಉಚಿತ ಚಿಕಿತ್ಸೆ ಹಾಗೂ ಎಪಿಎಲ್ ಪಡಿತರದಾರಿಗೆ ಶೇ. 30ರಷ್ಟು ಉಚಿತ ಚಿಕಿತ್ಸೆಗಳ ಸೌಲಭ್ಯ ಇದೆ. ಕಡಬ ತಾ|ನ ಕಡಬ, ಸುಬ್ರಹ್ಮಣ್ಯ, ನೆಲ್ಯಾಡಿ ಭಾಗದಲ್ಲಿ ಆಸ್ಪತ್ರೆಗಳಿದ್ದರೂ ಉಚಿತ ಚಿಕಿತ್ಸೆಗೆ ಈ ಭಾಗದ ಜನತೆ ಮಾತ್ರ ಪುತ್ತೂರು, ಮಂಗಳೂರಿಗೆ ಹೋಗಬೇಕಿದೆ. ಕಡಬ ತಾ| ವ್ಯಾಪ್ತಿಯ ಸುಬ್ರಹ್ಮಣ್ಯದಲ್ಲಿ ದಿನಂಪ್ರತಿ ಸಾವಿರಾರು ಯಾತ್ರಿಕರು ಬರುತ್ತಿದ್ದರೂ ಅಲ್ಲಿಯೂ ಸಮರ್ಪಕ ವೈದ್ಯಕೀಯ ಸವಲತ್ತುಗಳಿಲ್ಲದೆ ಜನರು ಪರದಾಡುವಂತಾಗಿದೆ.
ಸವಲತ್ತುಗಳಿಲ್ಲ
ಕಡಬದಲ್ಲಿ ಸುಮಾರು 5 ಕೋಟಿ ರೂ.ಗಳಿಗೂ ಹೆಚ್ಚು ಅನುದಾನ ವ್ಯಯಿಸಿ ಸಮುದಾಯ ಆಸ್ಪತ್ರೆಗೆ ಸುಸಜ್ಜಿತ ಕಟ್ಟಡ ನಿರ್ಮಿಸಲಾಗಿದೆ. ಆದರೆ ಇಲ್ಲಿಗೆ ಅಗತ್ಯ ತಜ್ಞ ವೈದ್ಯರ ನೇಮಕವಾಗಿಲ್ಲ. ಸಿಬಂದಿ ಕೊರತೆ, ವೈದ್ಯಕೀಯ ಸಲಕರಣೆಗಳ ಕೊರತೆಯಿಂದ ಈ ಆಸ್ಪತ್ರೆ ತಲೆನೋವು, ಜ್ವರ ಹಾಗೂ ಅಪಘಾತ ನಡೆದಾಗ ಪ್ರಥಮ ಚಿಕಿತ್ಸೆ ಮೊದಲಾದ ಸೀಮಿತ ಚಿಕಿತ್ಸೆಗಳಿಗೆ ಮೀಸಲಾಗಿದೆ. ಈ ಮಧ್ಯೆ ಸ್ಥಳೀಯ ಜನರು ಕಡಬದಲ್ಲಿ ಹೊಸದಾಗಿ ಆರಂಭಗೊಂಡಿರುವ ಖಾಸಗಿ ಚಿಕಿತ್ಸಾಲಯಕ್ಕೆ ತೆರಳುವ ಅನಿವಾರ್ಯ ಎದುರಾಗಿದೆ. ಆದರೆ ಅಲ್ಲಿ ದುಬಾರಿ ಶುಲ್ಕ ಪಡೆಯಲಾಗುತ್ತಿದೆ ಎಂಬ ದೂರುಗಳೂ ಕೇಳಿಬರುತ್ತಿವೆ. ಕಡಬ ಸಮುದಾಯ ಆಸ್ಪತ್ರೆಗೆ ತಜ್ಞ ವೈದ್ಯರು, ವೈದ್ಯಕೀಯ ಸಲಕರಣೆ ನೀಡಿ ಸೌಲಭ್ಯಗಳನ್ನು ಒದಗಿಸುವಲ್ಲಿ ಜನಪ್ರತಿನಿಧಿಗಳು ಸೂಕ್ತ ರೀತಿಯಲ್ಲಿ ಪ್ರಯತ್ನಿಸುತ್ತಿಲ್ಲ ಎನ್ನುವ ಆರೋಪ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ.
ತಜ್ಞ ವೈದ್ಯರ ನೇಮಕ ಬಳಿಕ ಸೌಲಭ್ಯ
ಆಯುಷ್ಮಾನ್ ಯೋಜನೆಯಡಿಯಲ್ಲಿ ಉಚಿತ ಚಿಕಿತ್ಸೆ ಸೌಲಭ್ಯವನ್ನು ಆಸ್ಪತ್ರೆಗೆ ನೀಡಬೇಕಾದರೆ ತಜ್ಞ ವೈದ್ಯರು ಇರಬೇಕು. ಆದರೆ ಕಡಬ ಸಮುದಾಯ ಆಸ್ಪತ್ರೆಯಲ್ಲಿ ತಜ್ಞ ವೈದ್ಯರು ಇಲ್ಲದಿರುವುದರಿಂದ ಅಲ್ಲಿಗೆ ನೀಡಲಾಗಿಲ್ಲ, ತಜ್ಞ ವೈದ್ಯರ ನೇಮಕವಾದ ಬಳಿಕವಷ್ಟೇ ಆಯುಷ್ಮಾನ್ ಸೌಲಭ್ಯವನ್ನು ನೀಡಲಾಗುತ್ತದೆ.
-ಡಾ| ರಾಮಚಂದ್ರ ಬಾಯರಿ, ಡಿಎಚ್‌ಒ
ನಾಗರಾಜ್ ಎನ್.ಕೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್!
Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ
Cyber Crime: ಸೈಬರ್ ವಂಚನೆ ತಡೆಗೆ ಕೇಂದ್ರದಿಂದ 6.69 ಲಕ್ಷ ಸಿಮ್‌ಗಳಿಗೆ ನಿರ್ಬಂಧ
Adani issue: ಕೇಂದ್ರ ಸರಕಾರ ಅದಾನಿಯನ್ನು ರಕ್ಷಿಸುತ್ತಿದೆ, ಕೂಡಲೇ ಬಂಧಿಸಿ: ರಾಹುಲ್ ಗಾಂಧಿ
Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.