ಡ್ರಗ್ಸ್: ವಿದೇಶಿ ಪ್ರ‌ಜೆ ಸೇರಿ 9 ಮಂದಿ ಬಂಧನ

Team Udayavani, Sep 23, 2020, 11:37 AM IST

ಡ್ರಗ್ಸ್: ವಿದೇಶಿ ಪ್ರ‌ಜೆ ಸೇರಿ 9 ಮಂದಿ ಬಂಧನ

ಬೆಂಗಳೂರು: ಉತ್ತರ ಮತ್ತು ಪೂರ್ವ ವಿಭಾಗ ಪೊಲೀಸರ ಕಾರ್ಯಾಚರಣೆಯಲ್ಲಿ ನಗರದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಒಬ್ಬ ವಿದೇಶಿ ಪ್ರಜೆ ಸೇರಿ ಒಂಭತ್ತು ಮಂದಿಯನ್ನು ಬಂಧಿಸಲಾಗಿದೆ.

ಲಾಕ್‌ಡೌನ್‌ ಸಂದರ್ಭದಲ್ಲಿ ಕೆಲಸವಿಲ್ಲದ ಕಾರಣ ಜೀವನ ನಿರ್ವಹಣೆಗಾಗಿ ನೆರೆ ರಾಜ್ಯದಿಂದ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಆಟೋ ಚಾಲಕ ಸೇರಿ ಮೂವರು ಆರೋಪಿಗಳನ್ನು ಸಂಜಯನಗರ ಪೊಲೀಸರು ಬಂಧಿಸಿದ್ದಾರೆ.

ಭೂಪಸಂದ್ರದ ಹೊಸಬಡಾವಣೆ ನಿವಾಸಿ ಶಬ್ಬಿರ್‌ಖಾನ್‌ (34), ಆಂಧ್ರಪ್ರದೇಶದ ವಿಶಾಖ ಪಟ್ಟಣಂ ನಿವಾಸಿಗಳಾದ ಭೀಮಣ್ಣ (28) ಮತ್ತು  ಎಸ್‌.ನನ್ನರಾವ್‌ (24) ಬಂಧಿತರು. ಅವರಿಂದ 9 ಲಕ್ಷ ರೂ. ಮೌಲ್ಯದ 30.23 ಕೆ.ಜಿ. ಗಾಂಜಾ ಮತ್ತು500 ರೂ. ನಗದುವಶಕ್ಕೆಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.

ಶಬ್ಬಿರ್‌ ಖಾನ್‌ ನಗರದಲ್ಲಿ ಆಟೋ ಚಾಲಕನಾಗಿದ್ದು, ಲಾಕ್‌ಡೌನ್‌ ಸಂದರ್ಭದಲ್ಲಿ ಕೆಲಸ ಇಲ್ಲದೆ ಜೀವನನಿ ರ್ವಹಣೆ ಕಷ್ಟವಾಗಿತ್ತು.ಹೀಗಾಗಿ ಆಂಧ್ರಪ್ರದೇಶದ ವಿಶಾಖಪಟ್ಟಣಂನ ಭೀಮಣ್ಣ ಮತ್ತು ನನ್ನರಾವ್‌ ಅವರಿಂದ ಕಡಿಮೆ ಮೊತ್ತಕ್ಕೆ ಗಾಂಜಾ ಖರೀದಿಸಿ, ಹೆಚ್ಚಿನ ಬೆಲೆಗೆ ನಗರದಲ್ಲಿ ಮಾರಾಟಮಾಡುತ್ತಿದ್ದ.ಇತ್ತೀಚೆಗೆ ಸಂಜಯನಗರ ಠಾಣಾ ವ್ಯಾಪ್ತಿಯ ಭೂಪಸಂದ್ರದ ಬಳಿ ಮಾರಾಟಕ್ಕೆ ಯತ್ನಿಸಿದ್ದಾನೆ. ಈ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಯನ್ನು ಮಾಲು ಸಮೇತ ಬಂಧಿಸಲಾಗಿದೆ. ಈತನ ಮಾಹಿತಿ ಮೇರೆಗೆ ಇಬ್ಬರು ಆಂಧ್ರಪ್ರದೇಶ ಮೂಲದ ಆರೋಪಿಗಳನ್ನು ಬಂಧಿಸಲಾಗಿದೆ.  ಈ ಆರೋಪಿಗಳು ಒಡಿಶಾದಿಂದ ಗಾಂಜಾ ತರಿಸುತ್ತಿದ್ದು, ಅದನ್ನು ಶಬ್ಬಿರ್‌ಖಾನ್‌ಗೆ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದರು.

ಬಿಎಸ್ಸಿ ಪದವಿಧರ ಬಂಧನ: ಪ್ರಕರಣದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಬಿಎಸ್ಸಿ ಪದವಿಧರನನ್ನು ಸೋಲದೇವನಹಳ್ಳಿ ಪೊಲೀ ಸರು ಬಂಧಿಸಿದ್ದಾರೆ. ಸುರೇಂದ್ರ ಅಲಿಯಾಸ್‌ ಸೂರ್ಯ (21) ಬಂಧಿತ. ಆರೋಪಿಯಿಂದ 4 ಕೆ.ಜಿ.ಗಾಂಜಾ ವಶಕ್ಕೆ ಪಡೆಯಲಾಗಿದೆ. ಇತ್ತೀಚೆಗೆ ಸೋಲದೇವನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಸೇವನೆ ಮಾಡುತ್ತಿದ್ದ ಜಗ್ನಿನಾದಂ ವಿಕಾಸ್‌ ಮಿಶಾì ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸುರೇಂದ್ರನ ಹೆಸರು ಬಾಯಿಬಿಟ್ಟಿದ್ದಾನೆ. ಬಳಿಕ ಕಾರ್ಯಾಚರಣೆ ನಡೆಸಿ ಸುರೇಂದ್ರನನ್ನು ಬಂಧಿಸಲಾಗಿದೆ.

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ಬಿಎಸ್ಸಿ ಪದವಿ ಪಡೆದುಕೊಂಡಿರುವ ಆರೋಪಿ, ಹಣದಾಸೆಗಾಗಿ ಆಂಧ್ರದ ಕೆಲ ವ್ಯಕ್ತಿಗಳಿಂದ ಗಾಂಜಾ ಖರೀದಿಸಿ ನಗರದ ಕಾಲೇಜುಗಳ ಬಳಿ ಮಾರುತ್ತಿದ್ದ. ಇತ್ತೀಚೆಗೆ ಚಿಕ್ಕಬಾಣವಾರ ರೈಲು ನಿಲ್ದಾಣ ಸಮೀಪದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸಿದ್ದಾನೆ. ಈ ಖಚಿತ ಮಾಹಿತಿ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.