ಬೆಳಗಾವಿ ಎಪಿಎಂಸಿಗೆ ಅನುದಾನಕ್ಕಾಗಿ ಸಚಿವರಿಗೆ ಮನವಿ
Team Udayavani, Sep 23, 2020, 7:26 PM IST
ಬೆಳಗಾವಿ: ಬೆಳಗಾವಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ 15 ಕೋಟಿ ರೂ.ಅನುದಾನ ನೀಡಬೇಕು ಎಂದು ಆಗ್ರಹಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹಾಗೂ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ನೇತೃತ್ವದಲ್ಲಿ ಸಹಕಾರ ಸಚಿವ ಟಿ. ಸೋಮಶೇಖರ ಅವರಿಗೆ ಮನವಿ ಸಲ್ಲಿಸಲಾಯಿತು.
ಬೆಳಗಾವಿ ಎಪಿಎಂಸಿ ಮಾರುಕಟ್ಟೆಯ ಆಡಳಿತ ಮಂಡಳಿಯ ನಿಯೋಗ ಸಚಿವರನ್ನು ಭೇಟಿಯಾಗಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿತು. ಬೆಳಗಾವಿ ಎಪಿಎಂಸಿಯ ಬಾಕಿ ಉಳಿದಿರುವ ಆರ್ ಡಿ ಪಿ ಯೋಜನೆಯ 15 ಕೋಟಿ ರೂ. ಅನುದಾನ ಬಿಡುಗಡೆ ಮಾಡಬೇಕು. ಅಭಿವೃದ್ಧಿಗಾಗಿ ಹೆಚ್ಚುವರಿಯಾಗಿ 15 ಕೋಟಿ ರೂ. ಅನುದಾನ ನೀಡಬೇಕೆಂದು ಒತ್ತಾಯಿಸಿತು.
ಬೆಳಗಾವಿ ಎಪಿಎಂಸಿ ಆವರಣದಲ್ಲಿರುವ ತರಕಾರಿ ಮಾರುಕಟ್ಟೆಯಲ್ಲಿ ಅಂಗಡಿಕಾರರು ಒಂದು ಕೋಟಿ ರೂ. ವರೆಗೆ ಮಳಿಗೆಗಳನ್ನು ಖರೀದಿ ಮಾಡಿದ್ದಾರೆ. ಕೋವೀಡ್ ಹಿನ್ನೆಲೆಯಲ್ಲಿ ಅವರಿಗೆ ಕಂತು ಪಾವತಿ ಮಾಡಲು ಸಾಧ್ಯವಾಗುತ್ತಿಲ್ಲ. ಐದು ವರ್ಷಗಳವರೆಗೆ ಕಂತು ತುಂಬುವ ಅವಧಿ ನೀಡುವಂತೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿತು.
ಎಪಿಎಂಸಿ ಅಧ್ಯಕ್ಷ ಯುವರಾಜ ಕದಂ, ಲಕ್ಷ್ಮೀ ಹೆಬ್ಬಾಳಕರ, ಸದಸ್ಯ ಸುಧೀರ ಗಡ್ಡೆ , ತಾಪಂ ಸದಸ್ಯ ನಿಲೇಶ ಚಂದಗಡಕರ, ಕಾಂಗ್ರೆಸ್ ಯುವ ಮುಖಂಡ ತೌಸೀಫ್ ಫಣಿಬಂಧ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ಹೊಸ ಸೇರ್ಪಡೆ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.