ಉಪ್ಪಿನಂಗಡಿ ಕೊಣಾಲು: ಪತಿಯಿಂದ ಪತ್ನಿ, ಪತ್ನಿಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ
Team Udayavani, Sep 24, 2020, 12:29 PM IST
ಉಪ್ಪಿನಂಗಡಿ: ಕೌಟುಂಬಿಕ ಕಲಹದ ಕಾರಣದಿಂದ ವ್ಯಕ್ತಿಯೋರ್ವ ತನ್ನ ಪತ್ನಿ ಹಾಗೂ ಆಕೆಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆ ಕೊಣಾಲು ಗ್ರಾಮದ ಪಾಂಡಿಬೆಟ್ಟು ಎಂಬಲ್ಲಿ ಗುರುವಾರ ಮುಂಜಾನೆ ನಡೆದಿದೆ.
ನೆಲ್ಯಾಡಿ ನಿವಾಸಿ ಬಿಜು (38 ವ) ಎಂಬಾತ ತನ್ನ ಪತ್ನಿ ಶೈನಿ (33ವ) ಹಾಗೂ ಪತ್ನಿಯ ಚಿಕ್ಕಮ್ಮ ಝಾನ್ಸಿ (36ವ) ಎಂಬವರ ಮೇಲೆ ಆಸಿಡ್ ದಾಳಿ ನಡೆಸಿದ್ದಾನೆ. ಆಸಿಡ್ ದಾಳಿಯಿಂದಾಗಿ ಇಬ್ಬರ ಮುಖ, ಕಣ್ಣಿನ ಭಾಗ ಸುಟ್ಟುಹೋಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಬಿಜು ಹಾಗೂ ಆತನ ಪತ್ನಿ ಶೈನಿ ನಡುವೆ ಕಲಹ ನಡೆದಿತ್ತು. ಹೀಗಾಗಿ ಶೈನಿ ಕೊಣಾಲು ಗ್ರಾಮದ ಪಾಂಡಿಬೆಟ್ಟುಯಲ್ಲಿರುವ ತನ್ನ ತಂದೆಯ ತಮ್ಮನ ಮನೆಯಲ್ಲಿ ಮಗಳ ಜೊತೆಗೆ ವಾಸವಾಗಿದ್ದರು. ಅಲ್ಲಿಂದ ಶೈನಿಯವರು ತನ್ನ ಚಿಕ್ಕಮ್ಮ ಝಾನ್ಸಿಯವರ ಜೊತೆಗೆ ನೆಲ್ಯಾಡಿಯ ಆಶ್ರಮವೊಂದಕ್ಕೆ ಕೆಲಸಕ್ಕೆ ಹೋಗುತ್ತಿದ್ದರು.
ಇದನ್ನೂ ಓದಿ: ತೀರ್ಥಹಳ್ಳಿ ಸಮೀಪ ಕುಸಿದ ಸೇತುವೆ: ಶಿವಮೊಗ್ಗ- ಉಡುಪಿ ನಡುವಿನ ಸಂಚಾರ ಸಂಪುರ್ಣ ಬಂದ್
ಇಂದು ಕೂಡಾ ಎಂದಿನಂತೆ ಬೆಳಿಗ್ಗೆ ಆರು ಗಂಟೆಯ ವೇಳೆಗೆ ಶೈನಿ ಹಾಗೂ ಝಾನ್ಸಿಯವರು ಮನೆಯಿಂದ ಕೆಲಸಕ್ಕೆ ಹೋಗಲೆಂದು ಕಾಲುದಾರಿಯಲ್ಲಿ ನಡೆದುಕೊಂಡು ಬರುತ್ತಿದ್ದ ವೇಳೆ ಕಾದು ಕುಳಿತಿದ್ದ ಆರೋಪಿ ಬಿಜು ಇಬ್ಬರ ಮೇಲೂ ಆಸಿಡ್ ದಾಳಿ ನಡೆಸಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಸುದ್ದಿ ತಿಳಿಯುತ್ತಲೇ ಶೈನಿಯವರ ಚಿಕ್ಕಪ್ಪ ಏಲಿಯಸ್‌ರವರು ಸ್ಥಳಕ್ಕೆ ಆಗಮಿಸಿದ್ದು ಇಬ್ಬರನ್ನೂ ರಿಕ್ಷಾದಲ್ಲಿ ನೆಲ್ಯಾಡಿಯ ಆಸ್ಪತ್ರೆಯೊಂದಕ್ಕೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ. ಆಸಿಡ್ ದಾಳಿಯಿಂದಾಗಿ ಇಬ್ಬರ ಮುಖ ಹಾಗೂ ದೇಹದಲ್ಲಿ ತೀವ್ರ ಸ್ವರೂಪದ ಸುಟ್ಟ ಗಾಯವಾಗಿದೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ
US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್!
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.