ಕೋವಿಡ್ ಹಿನ್ನಲೆ : ಪೌಷ್ಟಿಕ ಆಹಾರ ಮನೆಗೇ ತಲುಪಿಸಿ

Team Udayavani, Sep 24, 2020, 5:06 PM IST

ಕೋವಿಡ್ ಹಿನ್ನಲೆ : ಪೌಷ್ಟಿಕ ಆಹಾರ ಮನೆಗೇ ತಲುಪಿಸಿ

ಹಾಸನ: ಕೋವಿಡ್ ಕಾರಣದಿಂದಾಗಿ ಅಂಗನವಾಡಿ ಕೇಂದ್ರಗಳಿಗೆ ಮಕ್ಕಳು ಬಾರದಿರುವುದರಿಂದ, ಪೋಷಣ್‌ ಅಭಿಯಾನದಲ್ಲಿ ನೀಡಲಾಗುವ ಪೂರಕ ಪೌಷ್ಟಿಕ ಆಹಾರವನ್ನು ಮನೆಗಳಿಗೇ ತಲುಪಿಸಬೇಕು ಎಂದು ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪೋಷಣ್‌ ಅಭಿಯಾನದ ಕುರಿತು 2ನೇ ತ್ತೈಮಾಸಿಕ ಸಭೆಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಯೋಜನೆಯ ಸೌಲಭ್ಯಗಳು ಪೂರಕವಾಗಿ ಮಕ್ಕಳು, ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ತಪ್ಪದೇ ದೊರಕಬೇಕು ಎಂದು ಹೇಳಿದರು.

ಬೆಳವಣಿಗೆ ಮಾಪನ ಮಾಡಿ: ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಮನೆಗೆ ಭೇಟಿ ನೀಡಿ ಮಕ್ಕಳ ಬೆಳವಣಿಗೆ ಮಾಪನವನ್ನು ನಿರ್ವಹಿಸಬೇಕು. ಅಪೌಷ್ಟಿಕತೆಯ ಕಾರಣದಿಂದಾಗಿ ಕಡಿಮೆ ತೂಕ, ಕುಬjತೆ ಹಾಗೂ ಇತರೆ ನೂನ್ಯತೆಗಳಿಗೆ ಮಕ್ಕಳು ಒಳಗಾಗಬಾರದು. ಈ ನಿಟ್ಟಿನಲ್ಲಿ ಪೋಷಣ್‌ ಅಭಿಯಾನದಿಂದ ದೊರಕುವ ಎಲ್ಲಾ ಸೌಲಭ್ಯ ಕಡ್ಡಾಯವಾಗಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕಾರ್ಯಕ್ರಮ ಯಶಸ್ವಿಗೊಳಿಸಿ: ಶಾಲೆ ಬಿಟ್ಟ ಕಿಶೋರಿಯರ ಪಟ್ಟಿಯನ್ನು ಶಿಕ್ಷಣ ಇಲಾಖೆಯಿಂದ ಪಡೆದು, ಎಲ್ಲೂಅರ್ಹರಿಗೂ ಅವರ ಮನೆಗಳಿಗೇ ಕಚ್ಚಾ ಆಹಾರ ಪದಾರ್ಥಗಳನ್ನು ಪೂರೈಸಬೇಕು ಎಂದ ಅವರು, ಕಟ್ಟಡ ಕಾರ್ಮಿಕರ ಮಕ್ಕಳಲ್ಲಿ ಅಪೌಷ್ಟಿಕತೆಯ ಪ್ರಮಾಣ ಹೆಚ್ಚಾಗಿದ್ದು, ಅವರು ಕೆಲಸ ಮಾಡುವ ಸ್ಥಳದ ಸಮೀಪದಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ನೋಂದಾಯಿಸಿಕೊಂಡು, ಪೂರಕ ಪೌಷ್ಟಿಕ ಆಹಾರ ದೊರಕುವಂತೆ ಕ್ರಮಕೈಗೊಳ್ಳಬೇಕು. ಇತರೆ ಇಲಾಖೆಗಳ ಸಹಕಾರ ಪಡೆದು ಪೋಷಣ್‌ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.

ಜಿಪಂ ಸಿಇಒ ಬಿ.ಎ.ಪರಮೇಶ್‌ ಮಾತನಾಡಿ, ಕಾರ್ಮಿಕರ ಮಕ್ಕಳಿಗೆ ಪೌಷ್ಟಿಕ ಆಹಾರಹಾಗೂಅಗತ್ಯಚಿಕಿತ್ಸಾ ಸೌಲಭ್ಯಗಳ ಅವಶ್ಯಕತೆ ಇದೆ. ಅಂತಹವರನ್ನು ಗುರುತಿಸಿ ಸೌಲಭ್ಯಗಳನ್ನು ಒದಗಿಸಬೇಕು. ತೋಟ ಗಾರಿಕೆ ಇಲಾಖೆಯಿಂದ ಹಣ್ಣು ಹಾಗೂ ತರಕಾರಿಗಳ ಬೀಜಗಳನ್ನು ಪಡೆದು, ಅಂಗನವಾಡಿ ಕೇಂದ್ರಗಳಲ್ಲಿಯೇ ಬೆಳೆಯಲು ಉತ್ತೇಜನ ನೀಡಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಜಿಲ್ಲಾ ನಿರೂಪಣಾಧಿಕಾರಿಗಳಾದ ಮಲ್ಲೇಶ್‌ ಪೋಷಣ್‌ ಅಭಿಯಾನದಲ್ಲಿ ಕೈಗೊಳ್ಳಲಾಗಿರುವ ಕಾರ್ಯಕ್ರಮಗಳು ಹಾಗೂ ಇತರೆ ಕ್ರಮಗಳ ಬಗ್ಗೆ ವಿವರಣೆ ನೀಡಿದರು. ಸಮಾಜ ಕಲ್ಯಾಣಇಲಾಖೆಯ ಉಪನಿರ್ದೇಶಕ ಶ್ರೀಧರ್‌, ಇತರೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.