ಬೆಳೆಹಾನಿ ಪರಿಹಾರಕ್ಕೆ ಆಗ್ರಹ
Team Udayavani, Sep 24, 2020, 6:34 PM IST
ಯಡ್ರಾಮಿ: ತಾಲೂಕಿನಲ್ಲಿ ಕಳೆದ ಹದಿನೈದುದಿನಗಳಿಂದ ವ್ಯಾಪಕ ಮಳೆ ಸುರಿದ ಪರಿಣಾಮ ರೈತರ ಬೆಳೆ ಹಾಗೂ ಮನೆಗಳು ಹಾಳಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಅವರಿಗೆ ತುರ್ತು ಪರಿಹಾರ ನೀಡುವಂತೆ ಆಗ್ರಹಿಸಿ ತಾಲೂಕು ಕರವೇ (ನಾರಾಯಣಗೌಡ ಬಣ) ವತಿಯಿಂದ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಹಗಲು ರಾತ್ರಿ ಎನ್ನದೆ ಸತತ ಬಿದ್ದ ಮಳೆಯಿಂದ ಹತ್ತಿ ಬೆಳೆ ವಿವಿಧ ರೋಗಬಾಧೆಯಿಂದ ಹಾಳಾಗುತ್ತಿದ್ದರೆ, ಭೂಮಿ ಅತಿ ಹೆಚ್ಚು ಹಸಿ ಆಗಿ ತೊಗರಿ ಬೆಳೆ ಒಣಗುತ್ತಿವೆ. ಇಷ್ಟೇ ಅಲ್ಲದೆ ಹಳ್ಳಿಗಳಲ್ಲಿನ ಮನೆಗಳ ಗೋಡೆಗಳು ಬಿದ್ದು ಹೋಗಿವೆ. ರೈತರು ಅನುಭವಿಸುತ್ತಿರುವ ಈ ತೊಂದರೆಗಳಿಗೆ ಪರಿಹಾರವಾಗಿ ಸರ್ಕಾರ ಪ್ರತಿ ಎಕರೆಗೆ 20,000 ರೂ.ಗಳನ್ನು ನೀಡಬೇಕು. ಹಾಳಾದ ಮನೆಗಳ ಸಮೀಕ್ಷೆ ಮಾಡಿಸಿ ಸೂಕ್ತ ಪರಿಹಾರ ವಿತರಿಸುವ ಮೂಲಕ ರೈತರನ್ನು ಸಂಕಷ್ಟದಿಂದ ಕೂಡಲೇ ಪಾರು ಮಾಡಬೇಕೆಂದು ಕರವೇ ಹೋರಾಟಗಾರರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಕರವೇ (ನಾರಾಯಣಗೌಡ ಬಣ) ಅಧ್ಯಕ್ಷ ದೇವಿಂದ್ರಪ್ಪಗೌಡ ಪೊಲೀಸ್‌ಪಾಟೀಲ,ಕಾರ್ಯದರ್ಶಿ ಮಹೇಶ ಮಾಲೀಪಾಟೀಲ, ಹಣಮಂತ್ರಾಯ ದುದ್ದಣಗಿ, ಲಕ್ಷ್ಮಣ ಕಲ್ಲೂರ, ಶಂಕರ ಬಿಳವಾರ, ರವಿಕುಮಾರ ಪಿ, ಆನಂದ ದೇವರಮನಿ, ಸುಧೀರ ಕಲ್ಲೂರ, ನಿಖೀಲ ಅರಳಗುಂಡಗಿ, ದತ್ತು ಮರಾಠಿ, ವಿಶ್ವನಾಥ ಗೌಂಡಿ ಇದ್ದರು.
…………………………………………………………………………………………………………………………………………………….
ಕೆಕೆಆರ್‌ಡಿಬಿಗೆ ಅನುದಾನ ನೀಡಿ : ಕಲಬುರಗಿ: ಈ ಭಾಗದ ಅಭಿವೃದ್ಧಿ ನಿಟ್ಟಿನಲ್ಲಿ ಅಸ್ತಿತ್ವಕ್ಕೆ ಬಂದಿರುವ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಗೆ 2 ಸಾವಿರ ಕೋ.ರೂ. ಅನುದಾನ ನಿಗದಿ ಮಾಡುವಂತೆ, ಸತತ ಮಳೆಯಿಂದ ಹದಗೆಟ್ಟಿರುವ ರಸ್ತೆಗಳನ್ನು ದುರಸ್ತಿಗೊಳಿಸುವಂತೆ ಹಾಗೂ ಈ ಭಾಗಕ್ಕೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಜೈ ಕನ್ನಡಿಗರ ರಕ್ಷಣಾ ವೇದಿಕೆ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.
ಕಳೆದ ವರ್ಷ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಬಂದಾಗ ಎರಡು ಸಾವಿರ ಕೋ.ರೂ. ನೀಡುವುದಾಗಿ ಹೇಳಿದ್ದರು. ಆದರೆ ಮೊನ್ನೆ ಬಂದಾಗ ಯಾವುದೇ ಚಕಾರವೆತ್ತಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಾದರೂ ನುಡಿದಂತೆ ಅನುದಾನ ಬಿಡುಗಡೆಗೊಳಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಅನ್ನಪೂರ್ಣ ಕ್ರಾಸ್‌ದಿಂದ ಆರ್‌ಟಿಒ ವರೆಗಿನ ರಸ್ತೆ ಅಗಲೀಕರಣ ಜತೆಗೆ ಸರಿಯಾದ ನಿಟ್ಟಿನಲ್ಲಿ ಅಭಿವೃದ್ಧಿಯಾಗಬೇಕೆಂದು ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ ಸಲ್ಲಿಸಲಾಯಿತು.
ವೇದಿಕೆಯ ರಾಜ್ಯಾಧ್ಯಕ್ಷ ಸಚಿನ್ ಫರತಾಬಾದ್, ಮಲ್ಲಿಕಾರ್ಜುನ ನೀಲೂರ, ಪ್ರವೀಣ ಸಚಿನ್, ಅಕ್ಷಯ ಸಚಿನ್ ಪೂಜಾರಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.