ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಮೂವರ ಸಾವು! 52 ಹೊಸ ಪ್ರಕರಣ
Team Udayavani, Sep 24, 2020, 7:09 PM IST
ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ 52 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 25 ಮಂದಿ ಗುಣಮುಖರಾಗಿದ್ದಾರೆ. ಮೂವರು ಸೋಂಕಿತರು ಮೃತಪಟ್ಟಿದ್ದಾರೆ.
ಚಾಮರಾಜನಗರ ತಾಲೂಕಿನ ಕಾಡಹಳ್ಳಿ ಗ್ರಾಮದ 75 ವರ್ಷದ ವೃದ್ಧರು ಪಾರ್ಶ್ವವಾಯುವಿನಿಂದ ಬಳಲುತ್ತಿದ್ದು ಸೆ. 5ರಂದು ಸೋಂಕಿನಿಂದಾಗಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸೆ. 23ರಂದು ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆಯ ಗರ್ಗೇಶ್ವರಿ ಗ್ರಾಮದ 57 ವರ್ಷದ ಮಹಿಳೆ ಸೆ. 17ರಂದು ನಗರದ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದು, ಸೆ. 23ರಂದು ಮೃತಪಟ್ಟಿದ್ದಾರೆ. ಚಾಮರಾಜನಗರ ತಾಲೂಕಿನ ನಡುಕಲಮೋಳೆ ಗ್ರಾಮದ 58 ವರ್ಷದ ವ್ಯಕ್ತಿ ಸೆ. 7ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದು, ಸೆ. 23ರಂದು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 3696 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 2978 ಮಂದಿ ಗುಣಮುಖರಾಗಿದ್ದು, 633 ಪ್ರಕರಣಗಳು ಸಕ್ರಿಯವಾಗಿವೆ. 28 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 294 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ. ಗುರುವಾರ 695 ಮಾದರಿಗಳನ್ನು ಪರೀಕ್ಷಿಸಲಾಗಿತ್ತು.
ಇಂದಿನ ಪ್ರಕರಣಗಳು – 52
ಇಂದು ಗುಣಮುಖ – 25
ಒಟ್ಟು ಗುಣಮುಖ – 2978
ಇಂದಿನ ಸಾವು – 03
ಒಟ್ಟು ಸಾವು – 85
ಸಕ್ರಿಯ ಪ್ರಕರಣಗಳು – 633
ಒಟ್ಟು ಸೋಂಕಿತರು – 3696
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್ ಪದವಿ ಕೊಡಲಿದೆ ವಿಟಿಯು!
Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ
CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ
Congress Government 11 ಲಕ್ಷ ಕುಟುಂಬಗಳ ಅನ್ನವನ್ನು ಕಿತ್ತುಕೊಳ್ಳುತ್ತಿದೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.