ಚಿಕ್ಕಮಗಳೂರು: ವೃದ್ಧೆಯನ್ನು ಹತ್ಯೆ ಮಾಡಿ ಚಿನ್ನದ ಸರ ದೋಚಿದ ದುಷ್ಕರ್ಮಿಗಳು
Team Udayavani, Sep 24, 2020, 7:35 PM IST
ಚಿಕ್ಕಮಗಳೂರು: ಚಿನ್ನದ ಸರ ದೋಚುವ ಭರದಲ್ಲಿ ದುಷ್ಕರ್ಮಿಗಳು ವೃದ್ಧೆಯ ತಲೆಗೆ ಮರದ ತುಂಡಿನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಅಜ್ಜಂಪುರ ಪಟ್ಟಣ ಶಿವಾನಂದಾಶ್ರಮದಲ್ಲಿ ಗುರುವಾರ ನಡೆದಿದೆ.
ಮೃತ ವೃದ್ಧೆ ಪಟ್ಟಣದ ರೈಲ್ವೇ ನಿಲ್ದಾಣ ಸಮೀಪದ ನಿವಾಸಿ ನಾಗರತ್ನ (70) ಎಂದು ಗುರುತಿಸಲಾಗಿದೆ. ಗುರುವಾರ ಬೆಳಗ್ಗೆ ಮನೆ ಸಮೀಪದ ಶಿವಾನಂದಾಶ್ರಮ ಮಠದ ಆವರಣದಲ್ಲಿದ್ದ ದೇವಾಲಯಕ್ಕೆ ವಾಯುವಿಹಾರಕ್ಕೆ ಆಗಮಿಸಿದ್ದ ವೇಳೆ ವೃದ್ಧೆ ನಾಗರತ್ನ ದೇವರ ದರ್ಶನಕ್ಕೆಂದು ಹೋಗಿದ್ದರು. ಈ ವೇಳೆ ವೃದ್ಧೆಯ ತಲೆಗೆ ಮರದ ತುಂಡಿನಿಂದ ಹೊಡೆದಿದ್ದಾರೆ.
ತಲೆಗೆ ಭಾರೀ ಪೆಟ್ಟು ಬಿದ್ದ ಪರಿಣಾಮ ವೃದ್ಧೆ ದೇವಾಲಯದ ಆವರಣದಲ್ಲೇ ಕುಸಿದ ಬಿದ್ದಿದ್ದಾರೆ. ಈ ಸಂದರ್ಭದಲ್ಲಿ ದುಷ್ಕರ್ಮಿಗಳು ವೃದ್ಧೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಅಪಹರಿಸಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ.
ಅದೇ ದಾರಿಯಲ್ಲಿ ಸಾಗುತ್ತಿದ್ದವರು ವೃದ್ಧೆಯನ್ನು ಗಮನಿಸಿ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಬಳಿಕ ವೃದ್ಧೆಯನ್ನು ಅಜ್ಜಂಪುರ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ಯುವ ದಾರಿ ಮಧ್ಯೆ ವೃದ್ಧೆ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.
ಘಟನೆ ಸಂಬಂಧ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಳಗ್ಗೆ ಎಎಸ್ಪಿ ಶೃತಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಂಜೆ ವೇಳೆ ಎಸ್ಪಿ ಹಕಾಯ್ ಅಕ್ಷಯ್ ಮಚ್ಚೀಂದ್ರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.