ಕುಳೂರು ಕ್ರಿಯೇಷನ್ ಅರ್ಪಿಸುವ ಕಿರುಚಿತ್ರದ ಪೋಸ್ಟರ್ ಬಿಡುಗಡೆ
Team Udayavani, Sep 25, 2020, 2:01 AM IST
ಮಂಜೇಶ್ವರ: ಕುಳೂರು ಕ್ರಿಯೇಷನ್ ಬ್ಯಾನರಡಿಯಲ್ಲಿ ಕಿರುಚಿತ್ರವೊಂದು ತಯಾರಾಗಿದ್ದು ಇದರ ಪೋಸ್ಟರ್ ಬಿಡುಗಡೆ ನಡೆಯಿತು.
‘ಕಂಟಕ’ ಎಂಬ ಈ ಕಿರುಚಿತ್ರಕ್ಕೆ ಮೋಹನ್ ಶೆಟ್ಟಿ ಮಜ್ಜಾರ್ ಬಂಡವಾಳ ಹಾಕುತ್ತಿದ್ದು ಇದರ ಚಿತ್ರೀಕರಣ ಕುಳೂರಿನ ಸುತ್ತಮುತ್ತಲ ಪ್ರದೇಶದಲ್ಲಿ ನಡೆದಿದೆ.
ಈ ಕಿರುಚಿತ್ರಕ್ಕೆ ಜಯರಾಜ್ ಶೆಟ್ಟಿ ಚಾರ್ಲ ಕಥೆ ರಚಿಸಿದ್ದು, ಸಂಭಾಷಣೆ ಹಾಗೂ ನಿರ್ದೇಶನವನ್ನು ಪುಷ್ಪರಾಜ್ ಶೆಟ್ಟಿ ಕುಳೂರು, ಚಿತ್ರಕಥೆ ಹಾಗೂ ಅಸೋಶಿಯೇಟ್ ನಿರ್ದೇಶಕರಾಗಿ ಶಶಿಕುಮಾರ್ ಕುಳೂರು, ಪ್ರೊಡಕ್ಷನ್ ಮೆನೇಜರ್ ಆಗಿ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯ ನಿರ್ವಹಿಸಿರುವರು.
ಬಾತು ಕುಲಾಲ್‌ರವರ ಕ್ಯಾಮೆರಾ ಕೈಚಳಕ ಹಾಗೂ ಎಡಿಟಿಂಗ್, ನಾಗಾರ್ಜುನ್ ಮಂಗಲ್ಪಾಡಿಯವರ ಡಬ್ಬಿಂಗ್‌ನಲ್ಲಿ ಈ ಕಿರು ಚಿತ್ರ ಮೂಡಿಬರಲಿದೆ.
ಈ ಕಿರು ಚಿತ್ರದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮದಲ್ಲಿ ವಾರ್ಡ್ ಸದಸ್ಯೆ ಚಂದ್ರಾವತಿ ವಿ.ಪಿ. ಅವರು ಪೋಸ್ಟರನ್ನು ಕುಳೂರು ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮರವರಿಗೆ ಹಸ್ತಾಂತರಿಸಿದರು.
ಬಳಿಕ ಪೋಸ್ಟರನ್ನು ಬಿಡುಗಡೆ ಮಾಡಿದ ಸತ್ಯನಾರಾಯಣ ಶರ್ಮರವರು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಕಂಚಿಲರವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಜಯರಾಜ್ ಶೆಟ್ಟಿ ಚಾರ್ಲ, ಪುಷ್ಪರಾಜ್ ಕುಳೂರು ಉಪಸ್ಥಿತರಿದ್ದರು. ಅಧ್ಯಾಪಕ ಜಯಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿದರು. ಶಶಿಕುಮಾರ್ ಕುಳೂರು ವಂದಿಸಿದರು. ಈ ಕಿರು ಚಿತ್ರ ಅತೀ ಶೀಘ್ರದಲ್ಲಿ ಬಿಡುಗಡೆಗೊಳ್ಳಲಿದ್ದು, ‘ಕುಳೂರು ಕ್ರಿಯೇಷನ್’ನ ಚೊಚ್ಚಲ ಕಾಣಿಕೆಯಾಗಿದ್ದು, ಎಲ್ಲರ ಸಹಕಾರವನ್ನು ಚಿತ್ರ ತಂಡ ವಿನಂತಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ
Kumbale: ವರ್ಕಾಡಿ ಪ್ಲೈವುಡ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ
Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.