ಪಾಲಿಕೆಯಿಂದ ನಾಲ್ಕು ಖಾಸಗಿ ಆಸ್ಪತ್ರೆಗಳ ವಿರುದ್ಧ ಎಫ್ಐಆರ್?
Team Udayavani, Sep 25, 2020, 11:54 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಕೋವಿಡ್ ಸೋಂಕಿತರ ಚಿಕಿತ್ಸೆಗೆ ಶೇ.50 ಹಾಸಿಗೆಗಳನ್ನು ಬಿಟ್ಟುಕೊಡದ ನಾಲ್ಕು ಪ್ರಮುಖ ಆಸ್ಪತ್ರೆ ಹಾಗೂ ರಾಜಾಜಿನಗರದ ಒಂದು ಆಸ್ಪತ್ರೆ ಮೇಲೆ ಎಫ್ಐಆರ್ ದಾಖಲಿಸಲು ಪಾಲಿಕೆ ಮುಂದಾಗಿದೆ. ಇದೇ ವೇಳೆ ರಾಜಾಜಿನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ಲಾಸ್ಟ್ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ನಗರದಲ್ಲಿ ಕೋವಿಡ್ ಸೋಂಕಿತರಿಗೆ ಶೇ.50ರಷ್ಟು ಹಾಸಿಗೆಗಳನ್ನು ಬಿಟ್ಟುಕೊಡದ 36 ಖಾಸಗಿ ಆಸ್ಪತ್ರೆಗಳಿಗೆ ಕಾರಣ ಕೇಳಿ ಪಾಲಿಕೆ ಇತ್ತೀಚಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿತ್ತು. ಈ ನೋಟಿಸ್ಗೆ 48 ಗಂಟೆಗಳ ಒಳಗಾಗಿ ಉತ್ತರ ನೀಡುವಂತೆ ಸೂಚನೆ ನೀಡಲಾಗಿತ್ತು. ಈ ವೇಳೆ ನಾಲ್ಕು ಪ್ರಮುಖ ಆಸ್ಪತ್ರೆಗಳು ನೀಡಿರುವ ವಿವರಣೆ ಸಂಮಜಸವಾಗಿಲ್ಲ ಎಂದು ಬಿಬಿಎಂಪಿಯು ವಿಪತ್ತು ನಿರ್ವಹಣೆ ಕಾಯ್ದೆಯಡಿ ನೋಟಿಸ್ ಜಾರಿ ಮಾಡಿದ್ದು, ಈ ಆಸ್ಪತ್ರೆಗಳ ಮೇಲೆ ಎಫ್ಐಆರ್ ದಾಖಲಿಸುವಂತೆ ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಅವರು ಆಸ್ಪತ್ರೆ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಪತ್ರ ಬರೆದಿದ್ದಾರೆ.
ಈ ಆಸ್ಪತ್ರೆಗಳು ಸರ್ಕಾರ ಹಾಗೂ ಬಿಬಿಎಂಪಿ ಶಿಫಾರಸು ಮಾಡುವ ಸೋಂಕಿತರ ಚಿಕಿತ್ಸೆ ನೀಡುವುದಕ್ಕೆ ಪರೋಕ್ಷವಾಗಿ ನಿರಾಕರಣೆ ಮಾಡಿವೆ. ಕೆಪಿಎಂಸಿ ಪೋರ್ಟ್ನಲ್ಲಿ ಹಾಸಿಗೆಗಳು ಖಾಲಿ ಇವೆ ಎಂದು ನಮೂದಿಸಲಾಗಿದೆಯಾದರೂ, ಸೋಂಕಿತರನ್ನು ಸೇರಿಸುವ ವೇಳೆ ಹಾಸಿಗೆಖಾಲಿ ಇಲ್ಲ ಎಂದು ಸೋಂಕಿತರ ಚಿಕಿತ್ಸೆಗೆ ನಿರಾಕರಿಸಲಾಗಿದೆ. ಇದು ಸರ್ಕಾರಿ ಆದೇಶದ ಸ್ಪಷ್ಟ ಉಲ್ಲಂಘನೆ.ಅಲ್ಲದೆ, ಹಾಸಿಗೆಗಳನ್ನು ಸೋಂಕಿತರ ಚಿಕಿತ್ಸೆಗೆ ನೀಡದೆ ಕಾನೂನು ಉಲ್ಲಂಘನೆ ಮಾಡಲಾಗಿದೆ. ಹೀಗಾಗಿ, ಈ ಆಸ್ಪತ್ರೆಗಳ ಮುಖ್ಯಸ್ಥರ ವಿರುದ್ದ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಾನೂನು ಕ್ರಮ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಆಯುಕ್ತರು ಆಸ್ಪತ್ರೆಗಳಿಗೆ ಕಳುಹಿಸಲಾಗಿರುವ ನೋಟಿಸ್ನಲ್ಲಿ ವಿವರಣೆ ನೀಡಿದ್ದಾರೆ.
ನಗರದ 36ಖಾಸಗಿ ಆಸ್ಪತ್ರೆಗಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿ ವಿವರ ನೀಡುವಂತೆ ಕೇಳಲಾಗಿತ್ತು. ಇದರಲ್ಲಿ ಹಲವು ಆಸ್ಪತ್ರೆಗಳು ಡಯಾಲಿಸಿಸ್, ಹೃದ್ರೋಗ ಸೇರಿದಂತೆ ವಿವಿಧಕಾರಣಗಳಿಗೆ ಹಾಸಿಗೆ ಮೀಸಲಿಟ್ಟಿರುವುದಾಗಿ ವಿವರಣೆ ನೀಡಿವೆ. ಇನ್ನುಕೆಲವು ಆಸ್ಪತ್ರೆಗಳ ವಿವರಣೆ ಸಮರ್ಪಕವಾಗಿಲ್ಲ. ಹೀಗಾಗಿ, ಎಫ್ಐಆರ್ ದಾಖಲಿಸಲು ಮುಂದಾಗಿದ್ದೇವೆ. –ಎನ್. ಮಂಜುನಾಥ್ ಪ್ರಸಾದ್, ಬಿಬಿಎಂಪಿ ಆಯುಕ್ತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.