ಮಾಸ್ಕ್ ಧರಿಸದಿದ್ದರೆ ದಂಡ: ಜಿಲ್ಲಾಧಿಕಾರಿ ಎಚ್ಚರಿಕೆ


Team Udayavani, Sep 25, 2020, 1:09 PM IST

mysuru-tdy-1

ಮೈಸೂರು: ಕೋವಿಡ್‌-19 ಮಾರ್ಗಸೂಚಿಗಳನ್ನು ಪಾಲಿಸದೇ ನಿರ್ಲಕ್ಷ್ಯದಿಂದ ಇರುವುದು ಸೋಂಕು ಹೆಚ್ಚಳಕ್ಕೆ ಕಾರಣವಾಗಿದ್ದು, ಮಾಸ್ಕ್ ಧರಿಸದೇ ಓಡಾಡುವವರಿಗೆ ದಂಡ ವಿಧಿಸುವ ಕೆಲಸಕ್ಕೆ ಮರು ಚಾಲನೆ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಬಿ. ಶರತ್‌ ಹೇಳಿದರು.

ಜಿಪಂ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಕೋವಿಡ್‌ ತಡೆಗೆ ಮಾಸ್ಕ್ ಧರಿಸುವುದೊಂದೇ ದಾರಿ. ಆದರೆ, ಜನರು ಮಾಸ್ಕ್ ಧರಿಸದೇ ಓಡಾಡುತ್ತಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿ 200 ರೂ., ಗ್ರಾಮಾಂತರ ವ್ಯಾಪ್ತಿಯಲ್ಲಿ 100 ರೂ. ದಂಡ ವಿಧಿಸಲಾಗುತ್ತಿತ್ತು. ಈ ವರೆಗೆ 4,675 ಮಂದಿಗೆ ದಂಡ ವಿಧಿಸಿದ್ದು,7,84,900 ರೂ. ದಂಡ ವಸೂಲಿ ಮಾಡಲಾಗಿದೆ. ಇತ್ತೀಚೆಗೆ ಜನರು ಮಾಸ್ಕ್ ಧರಿಸದೇ ಓಡಾಡುತ್ತಿರುವುದರಿಂದ ದಂಡ ವಿಧಿಸುವ ಪ್ರಕ್ರಿಯೆಗೆ ಮರು ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ಬೆಡ್‌ಗಳು: ಸರ್ಕಾರದ ನಿರ್ದೇಶನದಂತೆ ಈವರೆಗೆ ಖಾಸಗಿ ಆಸ್ಪತ್ರೆಗಳಲ್ಲಿ ಶೇ.50 ರಷ್ಟು ಬೆಡ್‌ಗಳನ್ನು ಕೋವಿಡ್‌ ಸೋಂಕಿತರಿಗೆ ಮೀಸಲಿಡುವಂತೆ ಸೂಚಿಸಲಾಗಿದೆ. ಈ ಪೈಕಿ ಖಾಸಗಿ ಆಸ್ಪತ್ರೆಗಳಲ್ಲಿ ಒಟ್ಟು 3,610 ಹಾಸಿಗೆಗಳ ಸೌಲಭ್ಯವಿದ್ದು, ಅದರಲ್ಲಿ 1,130 ಹಾಸಿಗೆಗಳನ್ನಷ್ಟೇ ಜಿಲ್ಲಾಡಳಿತಕ್ಕೆ ನೀಡಿವೆ. ಬಾಕಿ ನೀಡಬೇಕಿ ರುವ ಹಾಸಿಗೆಯನ್ನು ಶೀಘ್ರ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ. ಸದ್ಯಕ್ಕೆ ಜಿಲ್ಲೆಯಲ್ಲಿ 524 ಸಾಧಾರಣ ಹಾಸಿಗೆ, 357 ಆಕ್ಸಿಜನ್‌ವುಳ್ಳ ಹಾಸಿಗೆ, 57 ಹೈ ಡಿಪೆಂಡೆನ್ಸಿ ಹಾಸಿಗೆಗಳು ಹಾಗೂ 87 ಐಸಿಯು ಹಾಸಿಗೆ ಗಳು ಲಭ್ಯವಿದೆ ಎಂದು ಮಾಹಿತಿ ನೀಡಿದರು.

ಚಿಕಿತ್ಸೆಗೆ ಹಿಂದೇಟು: ಸೋಂಕಿಗೆ ತುತ್ತಾಗಿ ಅಥವಾಆರೋಗ್ಯ ಸಮಸ್ಯೆ ಕಾಣಿಸಿಕೊಂಡಾಕ್ಷಣ ಜನರು  ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳದೇ ಹಿಂದೇಟು ಹಾಕುತ್ತಿರುವುದು, ತಡವಾಗಿ ಚಿಕಿತ್ಸೆಗೆ ಬರುತ್ತಿರು ವುದು ಸಾವಿನ ಸಂಖ್ಯೆ ಹೆಚ್ಚಳವಾಗಲು ಕಾರಣವಾಗಿದೆ. ಪ್ರಾಥಮಿಕ ಹಂತದಲ್ಲೇ ಸೂಕ್ತ ಚಿಕಿತ್ಸೆ ಕೊಡಿಸಲು ಮುಂದಾದರೆ, ಮರಣ ಪ್ರಮಾಣ ತಗ್ಗಿಸಬಹುದು. ಅಲ್ಲದೆ, ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಸರ್ವೆ ಆರಂಭಿಸಲಾಗುತ್ತಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬಿಪಿ ಹಾಗೂ ಡಯಾಬಿಟಿಸ್‌ ಇರುವವರ ಪಟ್ಟಿಯನ್ನು ಸಿದ್ಧಪಡಿಸಿದೆ. ಇದರ ಪ್ರಕಾರ, ಅವರ ಮನೆಗೇ ಹೋಗಿ, ಪರಿಶೀಲಿಸಲಾಗುತ್ತದೆ ಎಂದರು. ಸಿಬ್ಬಂದಿ ಕೊರತೆ ನೀಗಿಸಲು ಕ್ರಮ: ಆರೋಗ್ಯ ಇಲಾಖೆಯಲ್ಲಿ ಸಿಬ್ಬಂದಿ ಕೊರತೆಯಿದೆ. ಇದನ್ನು ಸರಿದೂಗಿಸಲು, ಸರ್ಕಾರವು ಪ್ರಯೋಗಶಾಲಾ ತಂತ್ರಜ್ಞರು ಲಭ್ಯವಿಲ್ಲದಿದ್ದಲ್ಲಿ ನರ್ಸಿಂಗ್‌ ಆ್ಯಂಡ್‌ ಪ್ಯಾರಾ ಮೆಡಿಕಲ್‌ ಪರ್ಸನಲ್‌, ಡಿಪ್ಲೊಮೋ ಓಲ್ಡರ್ಸ್‌, ವಿಜ್ಞಾನ ಪದವೀಧರರನ್ನು ಈ ಕಾರ್ಯಕ್ಕೆ ನಿಯೋಜಿಸಿಕೊಳ್ಳಲು ಅವಕಾಶಕಲ್ಪಿಸಿದೆ ಎಂದರು.

ನಗರಪೊಲೀಸ್‌ ಆಯುಕ್ತ ಡಾ.ಚಂದ್ರಗುಪ್ತ ಮಾತನಾಡಿ, ಇಂದಿನಿಂದಲೇ (ಸೆ.25) ಪೊಲೀಸ್‌ ಇಲಾಖೆಯ ಸುಮಾರು 3 ಸಾವಿರ ಸಿಬ್ಬಂದಿಗೂ ಹಾಗೂ ಕುಟುಂಬದವರಿಗೆ ಮತ್ತೂಮ್ಮೆ ಕೊರೊನಾ ಪರೀಕ್ಷೆ ಮಾಡಿಸಲಾಗುವುದು. ಹಾಗೆಯೇ ಸಾರ್ವಜನಿಕರು ತಾವೇ ಮುನ್ನೆಚ್ಚರಿಕೆ ವಹಿಸಿ, ಸ್ವಯಂಪ್ರೇರಿತವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕೋವಿಡ್‌ ಟೆಸ್ಟ್‌ ಸಂದರ್ಭದಲ್ಲಿ ವೈದ್ಯಕೀಯ ಸಿಬ್ಬಂದಿ ಜೊತೆ ಅನುಚಿತವಾಗಿ ವರ್ತಿಸುವುದು, ಹಲ್ಲೆ ನಡೆಸುವುದು ಕಂಡುಬಂದಲ್ಲಿ, ಅಂತಹವರ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಅಗತ್ಯ ಬಿದ್ದರೆ ತಪ್ಪಿತಸ್ಥರ ವಿರುದ್ದ ಎಫ್ಐಆರ್‌ ದಾಖಲಿಸಿ, ರೌಡಿ ಶೀಟರ್‌ ಎಂದು ಘೋಷಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇನ್ನು ಮುಂದೆ ಮಧ್ಯಾಹ್ನವೂ ಟೆಸ್ಟ್‌ : ಜಿಲ್ಲೆಯಲ್ಲಿ ಈವರೆಗೆ 1,65,651 ಮಂದಿಗೆ ಕೋವಿಡ್‌ ಪರೀಕ್ಷೆ ನಡೆಸಲಾಗಿದ್ದು, ಇವರಲ್ಲಿ, 21,256ಮಂದಿಯಲ್ಲಿಸೋಂಕುದೃಢವಾಗಿದೆ. ಆದರೆ, ಸೋಂಕಿತರ ಪ್ರಾಥಮಿಕ ಹಾಗೂ ಸೆಕೆಂಡರಿ ಸಂಪರ್ಕಿತರನ್ನುಪತ್ತೆಹಚ್ಚಬೇಕಾದರೆ, ಅವರು ತಪ್ಪುಮಾಹಿತಿನೀಡುತ್ತಿದ್ದಾರೆ. ಸಂಪರ್ಕಿ ತರನ್ನು ಪತ್ತೆ ಹಚ್ಚುವ ಬಗ್ಗೆ ದಿಕ್ಕು ತಪ್ಪಿಸುತ್ತಿದ್ದಾರೆ. ಮುಂದೆ ಹೀಗಾಗದಂತೆ ನೋಡಿಕೊಳ್ಳಬೇಕು. ಮಾಹಿತಿನೀಡಿಸಹಕರಿಸಿದಷ್ಟು ಸಂಪರ್ಕಿತರನ್ನು ಪತ್ತೆ ಹಚ್ಚಿ ಚಿಕಿತ್ಸೆಕೊಡಿಸಲಾಗುತ್ತದೆ. ಇದರಿಂದ ಸೋಂಕು ನಿಯಂತ್ರಣಕ್ಕೆ ಬರುತ್ತದೆ. ಇನ್ನು ಮೈಸೂರು ಜಿಲ್ಲೆಯಾದ್ಯಂತ ಕೋವಿಡ್‌ 19ರ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ, ಮುಂಬರುವ ದಿನಗಳಲ್ಲಿ ಕೊರೊನಾ ಟೆಸ್ಟ್‌ ಹೆಚ್ಚಿಸಲು ತೀರ್ಮಾನಿಸಲಾಗಿದೆ. ಇಷ್ಟು ದಿನ ಬೆಳಗ್ಗೆ ಮಾತ್ರವೇ ಕೋವಿಡ್‌ ಪರೀಕ್ಷೆ ನಡೆಸಲಾಗುತ್ತಿತ್ತು. ಇನ್ನು ಮುಂದೆ ಮಧ್ಯಾಹ್ನವೂ ಪರೀಕ್ಷೆ ನಡೆಸಲು ಮುಂದಾಗಿದ್ದು, ಸಾರ್ವಜನಿಕರು ಹೆಚ್ಚಿನ ರೀತಿಯಲ್ಲಿಇದಕ್ಕೆ ಸಹಕಾರ ನೀಡಬೇಕು ಎಂದು ಡೀಸಿ ಬಿ.ಶರತ್‌ ಮನವಿ ಮಾಡಿದರು.

ಆಸ್ಪತ್ರೆಗೆಕರೆದೊಯ್ಯಲ್ಲ, ಭಯ ಬೇಡ: ಭಾರತಿ :  ಜಿಲ್ಲೆಯಾದ್ಯಂತ ಕೋವಿಡ್‌ ಪರೀಕ್ಷೆ ಹೆಚ್ಚಿಸುವ ಸಲುವಾಗಿ ಗ್ರಾಪಂ ಸಹಕಾರದೊಂದಿಗೆ ಗ್ರಾಮಾಂತರ ಪ್ರದೇಶಗಳಲ್ಲೂ ಟೆಸ್ಟ್‌ ಮಾಡಲಾಗುವುದು. ಅಲ್ಲದೆ, ಜನರಲ್ಲಿ ಕೋವಿಡ್‌ ಪರೀಕ್ಷೆ ಮಾಡಿಸಿದ ತಕ್ಷಣ ಆಸ್ಪತ್ರೆಗೆ ಕರೆದೊಯ್ಯುತ್ತಾರೆ ಎನ್ನುವ ಆತಂಕವಿದೆ. ಈ ಬಗ್ಗೆ ಭಯ ಬೇಡ. ಏಕೆಂದರೆ ಮನೆಯಲ್ಲೇ ಕ್ವಾರಂಟೈನ್‌ ಆಗುವುದಕ್ಕೂ ಅವಕಾಶವಿದೆ. ಈ ನಿಟ್ಟಿ ನಲ್ಲಿ ಜನರು ಸ್ವಯಂಪ್ರೇರಿತರಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದುಜಿಲ್ಲಾಪಂಚಾಯ್ತಿ ಸಿಇಒ ಡಿ.ಭಾರತಿ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

HD-Kote

H.D.Kote: ಹೆಬ್ಬುಲಿ ದಾಳಿಗೆ ಒಂದೂವರೆ ವರ್ಷದ ಮರಿ ಹುಲಿ ಸಾವು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.