ಕಟ್ಟಡ ತೆರವಿಗೆ ಜಿಲ್ಲಾಡಳಿತ ನಿರ್ಧಾರ

Team Udayavani, Sep 25, 2020, 3:12 PM IST

ಕಟ್ಟಡ ತೆರವಿಗೆ ಜಿಲ್ಲಾಡಳಿತ ನಿರ್ಧಾರ

ಕೆಜಿಎಫ್: ಶಾಸಕಿ ಎಂ.ರೂಪಕಲಾ ಮತ್ತು ಜಿಲ್ಲಾಧಿಕಾರಿ ಸತ್ಯಭಾಮ ನಡುವೆ ಮಾತಿನ ಚಕಮಕಿಗೆ ಕಾರಣವಾಗಿದ್ದ ಅಶೋಕನಗರ

ರಸ್ತೆ ಅಗಲೀಕರಣಕ್ಕೆ ಕೊನೆಗೂ ಮುಹೂರ್ತ ಕೂಡಿ ಬಂದಿದೆ. ರಸ್ತೆ ಅಗಲೀಕರಣ ಆಗಲೇ ಬೇಕೆಂದು ಪಟ್ಟು ಹಿಡಿದಿದ್ದ ಶಾಸಕಿ ಎಂ. ರೂಪಕಲಾ ಅವರ ಪ್ರಯತ್ನಕ್ಕೆ ಜಯ ಸಿಕ್ಕಿದ್ದು, ಶನಿವಾರದಂದು ರಸ್ತೆ ಪಕ್ಕದಕಟ್ಟಡಗಳ ತೆರವು ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ.

ಜಿಲ್ಲಾಧಿಕಾರಿಗಳ ಕಚೇರಿಗೆ ವರ್ಗ: ರಸ್ತೆಯ ಮಧ್ಯದಿಂದ 9 ಮೀಟರ್‌ ರಸ್ತೆ ವಿಸ್ತರಣೆಗೆ ಸುಮಾರು ಆರು ವರ್ಷಗಳಿಂದ ಅಡಚಣೆ ಉಂಟಾಗಿತ್ತು. ರಸ್ತೆ ಬದಿಯ ವರ್ತಕರು ನ್ಯಾಯಾಲಯ ಮೆಟ್ಟಿಲೇರಿದ್ದರು. ಲೋಕೋ ಪಯೋಗಿ ಇಲಾಖೆ ಕೋರಮಂಡಲ್‌ನಿಂದ ಎಂ.ಜಿ.ವೃತ್ತದವರೆಗೂ 19 ಕೋಟಿ ರೂ. ವೆಚ್ಚದ ಕಾಮಗಾರಿ ನಡೆಸಿತ್ತು. ಆದರೆ ಕೊನೆಯ 200 ಮೀಟರ್‌ ವ್ಯಾಪ್ತಿಯಲ್ಲಿ ಕಾಮಗಾರಿಗೆ ಅಡ್ಡಿಯಾಗಿತ್ತು. ಕೊನೆಗೆ ಹೈಕೋರ್ಟ್‌ ಪ್ರಕರಣವನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ವರ್ಗಾಯಿಸಿತು. ಹಿಂದಿನ ಜಿಲ್ಲಾಧಿಕಾರಿ ಮಂಜುನಾಥ್‌ ಕಟ್ಟಡ ತೆರವಿಗೆ ಆದೇಶ ಹೊರಡಿಸಿದ್ದರು. ಈ ಸಂಬಂಧವಾಗಿ ಬಹು ದಿನಗಳಿಂದ ಪಟ್ಟು ಹಿಡಿದಿದ್ದ ಶಾಸಕಿ ಎಂ. ರೂಪಕ ‌ಲಾ, ಎರಡು ಬಾರಿ ಕೋಲಾರ ದಲ್ಲಿ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ್ದರು.

ಈಚೆಗೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಮಳೆಯಲ್ಲಿಯೇ ನಾಲ್ಕು ಗಂಟೆಗಳ ಕಾಲ ಒಬ್ಬಂಟಿಯಾಗಿ ನಿಂತು ಪ್ರತಿಭಟನೆ ಮಾಡಿದ್ದರು. ಸಂಜೆ ವೇಳೆಗೆ ಶಾಸಕಿಯನ್ನು ಮಾತನಾಡಿಸಲು ಬಂದಿದ್ದ ಜಿಲ್ಲಾಧಿಕಾರಿ ಮೇಲೆ ಶಾಸಕಿ ಹರಿಹಾಯ್ದಿದ್ದರು. ಈ ಸಂದರ್ಭದಲ್ಲಿ ಮಾತಿನ ಚಕಮಕಿಕೂಡ ನಡೆದಿತ್ತು. ಕಾಣದ ಕೈಗಳು ರಸ್ತೆ ವಿಸ್ತರಣೆಗೆ ಅಡ್ಡಿ ಉಂಟು ಮಾಡುತ್ತಿದೆ ಎಂದು ಶಾಸಕಿ ಆರೋಪಿಸಿದ್ದರು. ಈ ಸಂಬಂಧವಾಗಿ ಈ ಬಾರಿ ಅಧಿವೇಶನದಲ್ಲಿ ಜಿಲ್ಲಾಧಿಕಾರಿಗಳ ವರ್ತನೆ ಬಗ್ಗೆ ಮತ್ತು ರಸ್ತೆ ವಿಸ್ತರಣೆ ಬಗ್ಗೆ ಮಾತನಾಡಿ ದ್ದರು. ಈ ಹಿನ್ನೆಲೆಯಲ್ಲಿಕೊನೆಗೂ ರಸ್ತೆಅಗಲೀಕರಣ ಮಾಡಲು ಜಿಲ್ಲಾಡಳಿತ ಹಸಿರು ನಿಶಾನೆ ತೋರಿದೆ.

ಶನಿವಾರದಂದು ಉಪ ವಿಭಾಗಾಧಿಕಾರಿ ಸೋಮಶೇಖರ್‌ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.