ಮಾಸ್ಕ್ ಧರಿಸದವರಿಗೆ ದಂಡ ವಿಧಿಸಿ

Team Udayavani, Sep 25, 2020, 3:20 PM IST

hasan-tdy-1

ಹಾಸನ: ಕೋವಿಡ್ ಸೋಂಕು ಹರಡುವುದನ್ನು ನಿಯಂತ್ರಿಸಲು ಆರ್‌ ಟಿ-ಪಿಸಿಆರ್‌(ರಿವರ್ಸ್‌ ಟ್ರಾನ್ಸ್‌ಸ್ಕ್ರಿಪ್ಷನ್‌ -ಪಾಲಿಮರೇಸ್‌ ಚೈನ್‌ ರಿಯಾಕ್ಷನ್‌) ಪರೀಕ್ಷೆಯನ್ನು ಮೂರು ಪಟ್ಟು ಹೆಚ್ಚಿಸಬೇಕು. ಮಾಸ್ಕ್ ಧರಿಸದೆ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಯಮ ಉಲ್ಲಂಘನೆ ಮಾಡಿದವರಿಗೆ ದಂಡ ವಿಧಿಸಲು ನಗರ ಪ್ರದೇಶದ ಪೊಲೀಸ್‌ ಸಿಬ್ಬಂದಿಗೆ ಹಾಗೂ ಸ್ಥಳೀಯಸಂಸ್ಥೆಗಳಕಂದಾಯಅಧಿಕಾರಿಗಳಿಗೆ ನಿಗದಿತ ಗುರಿ ನೀಡಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯ್‌ ಭಾಸ್ಕರ್‌ ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಿದರು.

ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಗುರುವಾರ ವಿಡಿಯೋ ಸಂವಾದ ನಡೆಸಿದ ಅವರು, ಕೋವಿಡ್ ಸೋಂಕಿತರ ಸಂಖ್ಯೆ ಮತ್ತು ಮರಣ ಪ್ರಮಾಣ ಹೆಚ್ಚಾಗಿರುವ 7 ರಾಜ್ಯಗಳೊಂದಿಗೆ ಪ್ರಧಾನ ಮಂತ್ರಿಯವರು ಬುಧವಾರ ವಿಡಿಯೋ ಸಂವಾದ ನಡೆಸಿ ಸೋಂಕು ತಡೆಗಟ್ಟಲು ಹಲವು ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಅವುಗಳನ್ನು ಎಲ್ಲಾ ಜಿಲ್ಲೆಗಳು ಅನುಸರಿಸಬೇಕು ಎಂದು ಸೂಚಿಸಿದರು.

ಸೋಂಕಿತರ ಸಂಪರ್ಕಿತರನ್ನು ಪತ್ತೆಹಚ್ಚುವ ಕಾರ್ಯವನ್ನು 24 ಗಂಟೆಯೊಳಗೆ ಮಾಡಬೇಕು,ಒಬ್ಬ ಸೋಂಕಿತರಿಗೆ10ಮಂದಿ ಸಂಪರ್ಕಿತರನ್ನು ಗುರುತಿಸಿ ಪರೀಕ್ಷೆಗೆ ಒಳಪಡಿಸುವ ಮೂಲಕ ಸೋಂಕು ಹರಡವಿಕೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದರು. ಹೋಂಐಸೋಲೇಷನ್‌ನಲ್ಲಿರುವವ್ಯಕ್ತಿಗಳ ಮೇಲೆ ಕಟ್ಟುನಿಟ್ಟಿನ ನಿಗಾವಹಿಸಿ ಪ್ರತಿ ದಿನ ವೈದ್ಯರು ಕರೆ ಮಾಡಿ ಆರೋಗ್ಯ ವಿಚಾರಿಸಿಕೊಳ್ಳಬೇಕು, ಅವರೆಲ್ಲರಿಗೂ ಥರ್ಮೋ ಮೀಟರ್‌ ನೀಡಿ ನಿಗಾವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚನೆ ನೀಡಿದರು.

ಅಪಪ್ರಚಾರ; ಕಠಿಣ ಕ್ರಮಕೈಗೊಳ್ಳಿ: ಮೈಕ್ರೋ ಕಂಟೇನ್ಮೆಂಟ್‌ ವಲಯದಲ್ಲಿ ಇರು ವವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸ ಬೇಕು. ಸೋಂಕಿತರ ಸಂಪರ್ಕಿತರು ಮತ್ತು ಅವರ ಕುಟುಂಬದ ಎಲ್ಲಾ ಸದಸ್ಯರನ್ನು ಎರೆಡೆರಡು ಬಾರಿ ಪರೀಕ್ಷೆಗೆ ಒಳಪಡಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಕೋವಿಡ್ ಪರೀಕ್ಷೆಯ ಕುರಿತು ಅಪಪ್ರಚಾರ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ವಿಜಯಭಾಸ್ಕರ್‌ ತಾಕೀತು ಮಾಡಿದರು.

ಜಿಲ್ಲಾಧಿಕಾರಿ ಆರ್‌.ಗಿರೀಶ್‌, ಎಸ್ಪಿ ಶ್ರೀನಿವಾಸ್‌ಗೌಡ ಜಿಲ್ಲೆಯಲ್ಲಿನ ಸೋಂಕಿತರ ಪತ್ತೆಗಾಗಿ ಸರ್ಕಾರ ನೀಡಿರುವ ಆರ್‌ ಟಿ-ಪಿಸಿಆರ್‌ ಹಾಗೂ ರ್ಯಾಪಿಡ್‌ ಆ್ಯಂಟಿಜನ್‌ ಪರೀಕ್ಷೆಗಳ ಗುರಿ ಸಾಧನೆ ಹಾಗೂ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ದಂಡ ವಿಧಿಸುತ್ತಿರುವುದರ ಕುರಿತು ಮಾಹಿತಿ ನೀಡಿದರು. ಜಿಪಂ ಸಿಇಒ ಬಿ.ಎ.ಪರಮೇಶ್‌, ಹಿಮ್ಸ್‌ ನಿರ್ದೇಶಕ ಡಾ.ರವಿಕುಮಾರ್‌, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಕೃಷ್ಣಮೂರ್ತಿ, ಮತ್ತಿತರ ಅಧಿಕಾರಿಗಳು ವಿಡಿಯೋ ಸಂವಾದದಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

25-kota

CT Ravi ಬಂಧನ ಪ್ರಕರಣ; ಗ್ರಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

25-kota

CT Ravi ಬಂಧನ ಪ್ರಕರಣ; ಗ್ರಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.