ರೈತ-ಕಾರ್ಮಿಕರ ಹೋರಾಟಕ್ಕೆ ಎಸ್‌ಯುಸಿಐ ಬೆಂಬಲ
Team Udayavani, Sep 25, 2020, 7:27 PM IST
ಬಳ್ಳಾರಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಅಂಗೀಕರಿಸಿರುವ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಅಗತ್ಯ ವಸ್ತುಗಳ ಕಾಯ್ದೆ ತಿದ್ದುಪಡಿ, ಗುತ್ತಿಗೆ ಕೃಷಿ ಕಾಯ್ದೆ, ವಿದ್ಯುತ್ಛಕ್ತಿ ಕಾಯ್ದೆ 2002ರ ತಿದ್ದುಪಡಿ, ಬೆಂಬಲ ಬೆಲೆ ಕಾಯ್ದೆ ತಿದ್ದುಪಡಿಗಳ ವಿರುದ್ಧ ಮತ್ತು ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರವು ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿಗಳ ವಿರುದ್ಧ ಅಖೀಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯು(ಎಐಕೆಎಸ್ ಎಸ್‌ಸಿ) ಕರೆ ನೀಡಿರುವ ಸೆ.28ರ ಕರ್ನಾಟಕ ಬಂದ್ ಹೋರಾಟಕ್ಕೆ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷವು ಬೆಂಬಲ ಸೂಚಿಸಿದೆ.
ಈ ಕುರಿತು ಪ್ರಕಟಣೆ ನೀಡಿರುವ ಪಕ್ಷದ ಜಿಲ್ಲಾ ಕಾರ್ಯದರ್ಶಿ ರಾಧಾಕೃಷ್ಣ, ಕೋವಿಡ್ 19 ಮಹಾಮಾರಿಯ ಸಂದರ್ಭ ಬಳಸಿಕೊಂಡು, ಪ್ರಜಾತಾಂತ್ರಿಕ ಚರ್ಚೆಗಳಿಗೆ ಅವಕಾಶ ನೀಡದೆ ಸಂಸತ್ತು, ವಿಧಾನಮಂಡಲಗಳಲ್ಲಿ ಚರ್ಚೆ ನಡೆಸದೆ ತರಾತುರಿಯಲ್ಲಿ ಈ ಕಾಯ್ದೆಗಳನ್ನು ಅಂಗೀಕರಿಸುತ್ತಿರುವುದು ಸರಿಯಲ್ಲ. ಈ ಕಾಯ್ದೆಗಳ ಜಾರಿಯಿಂದ ಕೃಷಿ ಉತ್ಪಾದನೆ ಮತ್ತು ಮಾರುಕಟ್ಟೆಯ ಕ್ಷೇತ್ರದಲ್ಲಿ ಕಾರ್ಪೊರೇಟ್ ಕುಳಗಳು ಲಗ್ಗೆ ಇಟ್ಟು ಸಣ್ಣ- ಮಧ್ಯಮ ರೈತರು ಸರ್ವನಾಶವಾಗಲಿದ್ದಾರೆ. ಸಾಮಾನ್ಯ ಗ್ರಾಹಕರು ಕೂಡ ಬೆಲೆ ಏರಿಕೆಯಿಂದ ಕಂಗಾಲಾಗಲಿದ್ದಾರೆ. ಆರ್ಥಿಕ ಸಂಕಷ್ಟಕ್ಕೆ ತಳ್ಳಲ್ಪಟ್ಟಿರುವ ರೈತರು ತಮ್ಮ ಕೃಷಿ ಭೂಮಿಯನ್ನು ಮಾರಿ ಬೀದಿಪಾಲಾಗಲಿದ್ದಾರೆ. ಇಂತಹ ವಿನಾಶಕಾರಿ ಕಾಯ್ದೆಗಳ ವಿರುದ್ಧ ದೇಶದಾದ್ಯಂತ 200ಕ್ಕೂ ಹೆಚ್ಚು ರೈತ ಸಂಘಟನೆಗಳು ಒಂದಾಗಿ ಹೋರಾಟ ಕಟ್ಟುತ್ತಿರುವುದು ಚೇತೋಹಾರಿ ಬೆಳವಣಿಗೆಯಾಗಿದೆ. ರೈತದ್ರೋಹಿ ಸರ್ಕಾರಗಳನ್ನು ಮಣಿಸಲು ದೇಶದ ಎಲ್ಲ ಜನವಿಭಾಗಗಳು ಮುಂದಾಗಬೇಕು ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.