ಸರ್ಕಾರದ ಕಾಯ್ದೆ ತಿದ್ದುಪಡಿಗೆ ವಿರೋಧ


Team Udayavani, Sep 26, 2020, 2:41 PM IST

ಸರ್ಕಾರದ ಕಾಯ್ದೆ ತಿದ್ದುಪಡಿಗೆ ವಿರೋಧ

ನಗರದ ಜಯಚಾಮರಾಜೇಂದ್ರ ವೃತ್ತದಲ್ಲಿ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮಂಡ್ಯ: ಭೂ ಸುಧಾರಣೆ, ಎಪಿಎಂಸಿ ಸೇರಿದಂತೆ ವಿವಿಧ ಕಾಯ್ದೆಗಳಿಗೆ ತಿದ್ದುಪಡಿ ಮಾಡಿರುವುದನ್ನು ವಿರೋಧಿಸಿ, ಜಿಲ್ಲೆಯ ವಿವಿಧೆಡೆ ಶುಕ್ರವಾರ ರೈತ ಸಂಘದಿಂದ ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆ ನಡೆಸಲಾಯಿತು.

ನಗರದ ಜಯಚಾಮರಾಜೇಂದ್ರ ವೃತ್ತದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು, ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಇದರಿಂದಾಗಿ ಸುಮಾರು ಅರ್ಧ ಗಂಟೆ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ರೈತರೇ ದೇಶದ ಬೆನ್ನೆಲುಬು ಎಂದೇಳುವ ಸರ್ಕಾರಗಳು, ಅದೇ ರೈತನ ಬೆನ್ನನ್ನು ಮುರಿಯುತ್ತಿವೆ. ಅನ್ನದಾತರಿಗೆ ಒಳಿತು ಮಾಡುತ್ತೇವೆ ಎಂದು ಕೇವಲ ಬೊಗಳೆ ಬಿಡುವ ಮೂಲಕ ಓಟ್‌ ಬ್ಯಾಂಕ್‌ ರಾಜ ಕಾರಣ ಮಾಡಲಾಗುತ್ತಿದೆ. ರೈತರು ಸರ್ಕಾರದ ಕಣ್ಣು ಗಳೆಂದು ಹೇಳುವುದುಕೇವಲ ಮಾತುಗಳಷ್ಟೇ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತರ ಸಮಸ್ಯೆಗೆ ಪರಿಹಾರ ನೀಡಿ: ದೇಶದಲ್ಲಿ ರೈತರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಬರಗಾಲ, ಸರಿಯಾದ ಬೆಲೆ ಸಿಗದೇ, ದುಬಾರಿ ಹಣ ಕೊಟ್ಟು ವ್ಯವಸಾಯ ಮಾಡಿದರೂ ಕನಿಷ್ಠ ಲಾಭವೂ ಸಿಗುತ್ತಿಲ್ಲ. ಇದರಿಂದಾಗಿ ಅನ್ನದಾತ ಆತ್ಮಹತ್ಯೆಯ ಹಾದಿ ಹಿಡಿದಿದ್ದಾರೆ. ಈ ಸಮಸ್ಯೆಗೆ ಪರಿಹಾರ ಕೊಡುವ ನಿಟ್ಟಿನಲ್ಲಿ ಕನಿಷ್ಠ ಮಟ್ಟದ ಕಾಳಜಿಯನ್ನು ತೋರದ ಸರ್ಕಾರ, ರೈತ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ಭೂ ಸುಧಾರಣೆ ಹಾಗೂ ಎಪಿಎಂಸಿ ಕಾಯ್ದೆಗಳಿಗೆ ತಿದ್ದುಪಡಿ ಮಾಡಬಾರದೆಂದು ರೈತರಿಂದ ತೀವ್ರ ವಿರೋಧ ವ್ಯಕ್ತ ವಾಗುತ್ತಿದೆ. ಆದರೆ, ಈ ಬಗ್ಗೆ ಕ್ಯಾರೆ ಎನ್ನುತ್ತಿಲ್ಲ. ಖಾಸಗಿ ಕಂಪನಿ ಹಾಗೂ ಶ್ರೀಮಂತರಿಗೆ ಅನುಕೂಲವಾಗು ವಂತಹ ಯೋಜನೆಗೆ ಹೆಚ್ಚಿನ ಮಹತ್ವ ನೀಡುತ್ತಿರುವುದು ದುರಂತ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಆದೇಶ ಕೂಡಲೇ ರದ್ದುಗೊಳಿಸಿ: ಕೇಂದ್ರ ಮತ್ತು ರಾಜ್ಯ ಸರ್ಕಾರ ಕಾಯ್ದೆ ತಿದ್ದುಪಡಿ ಮಾಡಿರುವ ಆದೇಶವನ್ನು ಕೂಡಲೇ ರದ್ದುಗೊಳಿಸಬೇಕು. ಮೈಷುಗರ್‌ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲಿಯೇ ಶೀಘ್ರವಾಗಿ ಪ್ರಾರಂಭಿಸಬೇಕು. ಇಲ್ಲದಿದ್ದರೆ ಮುಂದಿನ ದಿನದಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ರೈತಸಂಘದ ರಾಜ್ಯಾಧ್ಯಕ್ಷ ಇ.ಎನ್‌.ಕೃಷ್ಣ, ಹೆಮ್ಮಿಗೆ ಚಂದ್ರಶೇಖರ್‌, ಮಂಜು, ನಾರಾಯಣ್‌, ರಾಜೇಶ್‌, ಕರಿಗೌಡ, ಕೆಂಪೇಗೌಡ, ರಮೇಶ್‌ ಸೇರಿದಂತೆ ಮತ್ತಿತರರಿದ್ದರು.

ಮನವೊಲಿಕೆ: ಹೆದ್ದಾರಿ ಸಂಚಾರ ತಡೆ ನಡೆಸುತ್ತಿದ್ದ ಪ್ರತಿಭಟನಾಕಾರರ ಮನವೊಲಿಸುವಲ್ಲಿ ಡಿವೈಎಸ್‌ಪಿ ನವೀನ್‌ಕುಮಾರ್‌ ಯಶಸ್ವಿಯಾದರು. ಪ್ರಾರಂಭದಲ್ಲಿ ಮಾತಿನ ಚಕಮಕಿ ನಡೆದರೂ ಬಳಿಕ ರಸ್ತೆ ತಡೆ ಹಿಂಪಡೆ ಯಲಾಯಿತು. ಇನ್ನು ಮುಂಜಾಗ್ರತಾ ಕ್ರಮವಾಗಿ ಪೊಲೀಸ್‌ ಇಲಾಖೆಯಿಂದ ಸ್ಥಳದಲ್ಲಿ ಬಿಗಿ ಬಂದೋ ಬಸ್ತ್ ಮಾಡಲಾಗಿತ್ತು.

ಟಾಪ್ ನ್ಯೂಸ್

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-mang

Mangaluru ಧರ್ಮಪ್ರಾಂತ;ವಾರ್ಷಿಕ ಪರಮ ಪವಿತ್ರ ಪ್ರಸಾದದ ಮೆರವಣಿಗೆ

arrest-woman

Mulki: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

POlice

Manipal: ವೇಶ್ಯಾವಾಟಿಕೆ; ನಾಲ್ವರುಪೊಲೀಸರ ವಶಕ್ಕೆ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.