25 ಕ್ವಿಂಟಲ್‌ಗ‌ೂ ಅಧಿಕ ಪ್ಲಾಸ್ಟಿಕ್‌ ವಶ


Team Udayavani, Sep 26, 2020, 5:34 PM IST

25 ಕ್ವಿಂಟಲ್‌ಗ‌ೂ ಅಧಿಕ ಪ್ಲಾಸ್ಟಿಕ್‌ ವಶ

ಸಾಂದರ್ಭಿಕ ಚಿತ್ರ

ಕಲಬುರಗಿ: ಮಹಾನಗರದಲ್ಲಿನ ಪ್ಲಾಸ್ಟಿಕ್‌ ಬಳಕೆ ವಿರುದ್ಧ ಪಾಲಿಕೆ ಆಯುಕ್ತರು ಕಾರ್ಯಾಚರಣೆ ಕೈಗೊಂಡಿದ್ದು, ಶುಕ್ರವಾರ ನಗರದ ಕಪನೂರ ಕೈಗಾರಿಕಾ ವಸಾಹತು ಪ್ರದೇಶದಲ್ಲಿನ ಪ್ಲಾಸ್ಟಿಕ್‌ ತಯಾರಿಕಾ ಘಟಕ ಹಾಗೂ ಎಪಿಎಂಸಿ ಗಂಜ್‌ದಲ್ಲಿನ ದಾಸ್ತಾನು ಮಳಿಗೆ ಮೇಲೆ ದಿಢೀರ್‌ ದಾಳಿ ನಡೆಸಿದ್ದಾರೆ.

ಪಾಲಿಕೆ ಆಯುಕ್ತ ಸ್ನೇಹಲ್‌ ಸುಧಾಕರ ಲೋಖಂಡೆ ಹಾಗೂ ಪರಿಸರ ನಿಯಂತ್ರಣ ಮಾಲಿನ್ಯ ಮಂಡಳಿ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿ, ಪ್ಲಾಸ್ಟಿಕ್‌ ತಯಾರಿಕಾ ಘಟಕಕ್ಕೆ ಬೀಗ ಜಡೆದಿದ್ದಾರೆ. ಕಪನೂರ ವಸಾಹತು ಪ್ರದೇಶದಲ್ಲಿ ಎದುರುಗಡೆ ಪ್ಲಾಸ್ಟಿಕ್‌ ಕೊಡಗಳ ತಯಾರಿಕೆ ಘಟಕ ಎಂಬುದಾಗಿ ನಮೂದಿಸಿ ಹಿಂದುಗಡೆ ಪರಿಸರ ಮಾಲಿನ್ಯಕ್ಕೆ ಕಾರಣವಾಗುವ ಪ್ಲಾಸ್ಟಿಕ್‌ ತಯಾರಿಕೆ ಮಾಡುತ್ತಿರುವುದನ್ನು ಪತ್ತೆ ಮಾಡಲಾಗಿದೆ. ಈ ದಾಳಿಯಲ್ಲಿ 1 ಟನ್‌ ಪ್ಲಾಸ್ಟಿಕ್‌ ಜಫ್ತು ಮಾಡಿಕೊಂಡ ಘಟಕಕ್ಕೆ ಬೀಗ ಜಡಿಯಲಾಗಿದೆ. ಅದೇ ರೀತಿ ನೆಹರು ಗಂಜ್‌ನ ಮಳಿಗೆಯೊಂದರಲ್ಲಿ ಒಂದೂವರೆ ಟನ್‌ ಪ್ಲಾಸ್ಟಿಕ್‌ ದಾಸ್ತಾನು ಮಾಡಿರುವುದನ್ನು ಪತ್ತೆ ಮಾಡಿ ದಾಳಿ ನಡೆಸಲಾಗಿದೆ. ಒಟ್ಟಾರೆ ಈ ಎರಡೂ ದಾಳಿಯಲ್ಲಿ ಒಟ್ಟಾರೆ 25 ಕ್ವಿಂಟಲ್‌ಗ‌ೂ ಅಧಿಕ ಪ್ಲಾಸ್ಟಿಕ್‌ ವಶಪಡಿಸಿಕೊಳ್ಳಲಾಗಿದೆ. ಈಚಿನ ವರ್ಷಗಳಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಪ್ಲಾಸ್ಟಿಕ್‌ ವಶಪಡಿಸಿಕೊಂಡಿರುವ ಉದಾಹರಣೆಗಳೇ ಇಲ್ಲ.

ಪಾಲಿಕೆ ಆಯುಕ್ತರಾದ ಸ್ನೇಹಲ್‌ ಲೋಖಂಡೆ, ಉಪಆಯುಕ್ತ ಆರ್‌. ಪಿ.ಜಾಧವ್‌, ಪಾಲಿಕೆ ಆರೋಗ್ಯಾಧಿಕಾರಿ ಡಾ| ವಿನೋದಕುಮಾರ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳುಹಾಗೂ ಕಲಬುರಗಿ ಗ್ರಾಮೀಣ ಠಾಣೆಯ ಪೊಲೀಸ್‌ ಅಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದರು.

ದಾಳಿಗೆ ಸಿಮೀತವಾಗದಿರಲಿ :  ಪ್ಲಾಸ್ಟಿಕ್‌ ತಯಾರಿಕಾ ಘಟಕ ಹಾಗೂ ದಾಸ್ತಾನು ಜತೆಗೆ ವ್ಯಾಪಾರಿಗಳ ಮೇಲೆ ದಾಳಿ ನಡೆಯುತ್ತಲೇ ಬಂದಿವೆ. ಆದರೆ ಬುಡ ಸಮೇತ ಪ್ಲಾಸ್ಟಿಕ್‌ ಬಳಕೆ ಕಿತ್ತು ಹಾಕಲು ಸಾಧ್ಯವಾಗ್ತಾ ಇಲ್ಲ. 2 ವರ್ಷಗಳ ಹಿಂದೆಯೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಭಾಷಣದಲ್ಲಿ ಕಲಬುರಗಿ ನಗರದಾದ್ಯಂತ ಪ್ಲಾಸ್ಟಿಕ್‌ ಬಳಕೆಗೆ ಸಂಪೂರ್ಣ ಕಡಿವಾಣ ಹಾಕಲಾಗುವುದಾಗಿ ಪ್ರಕಟಿಸಲಾಗಿತ್ತು. ಆದರೆ ಇಂದಿನ ದಿನದವರೆಗೂ ರಾಜಾರೋಷವಾಗಿ ಪ್ಲಾಸ್ಟಿಕ್‌ ತಯಾರಿಕೆ ಎಲ್ಲೇಡೆ ಅವ್ಯಾಹುತವಾಗಿ ನಡೆಯುತ್ತಿದೆ. ಪ್ಲಾಸ್ಟಿಕ್‌ ತ್ಯಾಜ್ಯದಿಂದ ರೋಗಗಳ ಉಲ್ಬಣಕ್ಕೆ ಕಾರಣವಾಗುತ್ತಿದೆ. ಹೀಗಾಗಿ ಮಹಾನಗರದಲ್ಲಿ ಪ್ಲಾಸ್ಟಿಕ್‌ ಬಳಕೆ ತಡೆಗಟ್ಟಲು ಪ್ರಮಾಣಿಕ ಪ್ರಯತ್ನ ಮುಖ್ಯವಾಗಿದೆ. ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದರ ಮೂಲಕ ಪ್ಲಾಸ್ಟಿಕ್‌ ಬಳಕೆಗೆ ಕಡಿವಾಣ ಹಾಕಬೇಕೆಂದು ಜನರು ಆಗ್ರಹಿಸಿದ್ದಾರೆ.

ಕಲಬುರಗಿಯಲ್ಲಿ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣ ನಿಷೇಧ ಕಾರ್ಯಾನುಷ್ಠಾನಕ್ಕೆ ಈಗ ಮುಂದಾಗಲಾಗಿದೆ. ಹೀಗಾಗಿ ದಿನಾಲು ಕಾರ್ಯಾಚರಣೆಗೆ ಇಳಿಯಲಾಗಿದೆ. ದಾಳಿ ನಿರಂತರ ಮುಂದುವರೆಯಲಿದೆ. ಆರೋಗ್ಯದ ಮೇಲೆ ಪರಿಣಾಮ ಬೀರುವ ಪ್ಲಾಸ್ಟಿಕ್‌ ಬಳಕೆಗೆ ಸಾರ್ವಜನಿಕರು ಸಹ ಹಿಂದೇಟು ಹಾಕಬೇಕು. –ಸ್ನೇಹಲ್‌ ಲೋಖಂಡೆ, ಪಾಲಿಕೆ ಆಯುಕ್ತ

ಟಾಪ್ ನ್ಯೂಸ್

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.