1,406 ಹಳ್ಳಿಗಳಿಗೆ ನೀರು

ಜಲಧಾರೆ ಯೋಜನೆ ಸಮಾಲೋಚಕರ ಜತೆ ಸಿಇಒ ಲಕ್ಷ್ಮೀಕಾಂತ ರೆಡ್ಡಿ ವಿಡಿಯೋ ಸಂವಾದ

Team Udayavani, Sep 26, 2020, 5:49 PM IST

1,406 ಹಳ್ಳಿಗಳಿಗೆ ನೀರು

ರಾಯಚೂರು: ಜಿಲ್ಲೆಯಲ್ಲಿ ಜಲಧಾರೆ ಕುಡಿಯುವ ನೀರಿನ ಯೋಜನೆ ಕೈಗೊಂಡಿದ್ದು, 1,406 ಗ್ರಾಮಗಳಿಗೆ ನೀರು ಪೂರೈಸುವ ಮಹೋನ್ನತ ಉದ್ದೇಶ ಯೋಜನೆ ಹಿಂದೆ ಅಡಗಿದೆ ಎಂದು ಜಿಪಂ ಸಿಇಒ ಲಕ್ಷ್ಮೀ ಕಾಂತರೆಡ್ಡಿ ತಿಳಿಸಿದರು.

ನಗರದ ಜಿಪಂ ಸಿಇಒ ಕಚೇರಿಯಲ್ಲಿ ಜಲಧಾರೆ ಯೋಜನೆ ಸಮಾಲೋಚಕರೊಂದಿಗೆ ಶುಕ್ರವಾರ ಹಮ್ಮಿಕೊಂಡಿದ್ದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು. ಜನವಸತಿ ಪ್ರದೇಶಗಳಲ್ಲಿ ವಾಸಿಸುವ ಪ್ರತಿಯೊಬ್ಬರಿಗೆ 55 ಲೀಟರ್‌ನಂತೆ 21.39 ಲಕ್ಷ ಜನರಿಗೆ ನೀರು ಪೂರೈಸಬಹುದು. ಈ ಯೋಜನೆಗೆ 2.06 ಟಿಎಂಸಿ ಅಡಿ ನೀರನ್ನು ನಾರಾಯಣಪುರ ಜಲಾಶಯದಿಂದ ಪಡೆಯಲಾಗುವುದು. ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಸಮಗ್ರ ಕುಡಿಯುವ ನೀರು ಯೋಜನೆ ಜಲಧಾರೆ ಅನುಷ್ಠಾನಕ್ಕೆ ಸರ್ಕಾರ ಮುಂದಾಗಿದೆ ಎಂದರು.

ಜಿಲ್ಲೆಯಲ್ಲಿರುವ ನೀರಿನ ಸಂಪನ್ಮೂಲ ಬಳಸಿಕೊಂಡು ಪ್ರತಿ ಹಳ್ಳಿಗೂ ಕುಡಿವ ನೀರು ಪೂರೈಸಬೇಕು ಎಂಬುದು ಯೋಜನೆಯ ಉದ್ದೇಶವಾಗಿದೆ. ಸಾಮಾನ್ಯ ದಿನಗಳಲ್ಲಿ ಎಂದಿನ ಮೂಲಗಳಿಂದ ನೀರು ಪಡೆಯುವುದು, ಬೇಸಿಗೆ ದಿನಗಳಲ್ಲಿ  ಜಲಧಾರೆ ಯೋಜನೆ ಸದ್ಬಳಕೆ ಮಾಡಿಕೊಳ್ಳುವ ಉದ್ದೇಶವಿದೆ. ಈಗಾಗಲೇ ಯೋಜನೆ ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ್ದು, ಹಂತ ಹಂತವಾಗಿ ಅನುಷ್ಠಾನ ಮಾಡಲು ಸರ್ಕಾರ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಜಲಾಧಾರೆ ಯೋಜನೆಯ ಸಮಾಲೋಚಕರಿಗೆ ಕೆಲವೊಂದು ಅಂಶಗಳನ್ನು ಮರು ಪರಿಶೀಲಿಸುವಂತೆ ಸೂಚಿಸಿದರು. ನಂತರ ಸರ್ಕಾರದ ಅನುಮೋದನೆಗಾಗಿ ಸಲ್ಲಿಸಲು ಸಮಿತಿಯಲ್ಲಿದ್ದ ಸರ್ವ ಸದಸ್ಯರ ಒಪ್ಪಿಗೆ ಪಡೆಯಲಾಯಿತು.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ರಾಮಕೃಷ್ಣ, ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಅಧಿಕಾರಿ ಗಣಪತಿ ಸಾಕ್ರೆ ಇತರೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.