ಜಿಲ್ಲಾದ್ಯಂತ ಕೋವಿಡ್ ಪರೀಕ್ಷೆ ಹೆಚ್ಚಿಸಿ


Team Udayavani, Sep 26, 2020, 8:04 PM IST

ಜಿಲ್ಲಾದ್ಯಂತ ಕೋವಿಡ್ ಪರೀಕ್ಷೆ ಹೆಚ್ಚಿಸಿ

ಶಿವಮೊಗ್ಗ: ಕೋವಿಡ್ ನಿಯಂತ್ರಿಸುವ ಕ್ರಮವಾಗಿ ಮುಂದಿನ 15 ದಿನಗಳ ಕಾಲ ಜಿಲ್ಲೆಯಾದ್ಯಂತ ವ್ಯಾಪಕವಾಗಿ ಪರೀಕ್ಷೆ ನಡೆಸುವಂತೆ ಜಿಲ್ಲಾಧಿ ಕಾರಿ ಕೆ.ಬಿ. ಶಿವಕುಮಾರ್‌ ಸೂಚನೆ ನೀಡಿದರು.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಸರ್ವೇಕ್ಷಣಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಮುಂದಿನ 15 ದಿನಗಳ ಕಾಲ ಪ್ರತಿದಿನ ಕನಿಷ್ಟ 3ಸಾವಿರ ವ್ಯಕ್ತಿಗಳಿಗೆ ಕೊರೊನಾ ಪರೀಕ್ಷೆ ನಡೆಸಬೇಕು. ಪ್ರತಿದಿನ 2ಸಾವಿರ ಆರ್‌ಟಿಪಿಸಿಆರ್‌ ಮತ್ತು 1ಸಾವಿರ ರ್ಯಾಪಿಡ್‌ ಆ್ಯಂಟಿಜನ್‌ ಟೆಸ್ಟ್‌ ನಡೆಸಬೇಕು. ಪ್ರತಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಿಂದ ಆರಂಭಿಸಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು, ತಾಲೂಕು ಆಸ್ಪತ್ರೆಗಳಲ್ಲಿ ಸಹ ಕೊರೊನಾ ತಪಾಸಣೆ ನಡೆಸಬೇಕು. ಇದಕ್ಕೆ ಅಗತ್ಯವಾಗಿರುವ ತಪಾಸಣಾ ಕಿಟ್‌ಗಳನ್ನು ಪೂರೈಸಲಾಗುವುದು ಎಂದರು.

ಎಲ್ಲಾ ಸಿದ್ಧತೆ: ಕೋವಿಡ್ ಪರೀಕ್ಷೆ ಹೆಚ್ಚಳಕ್ಕೆ ಪೂರಕವಾಗಿ ಪಾಸಿಟಿವ್‌ ವ್ಯಕ್ತಿಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಲು ಎಲ್ಲಾ ವ್ಯವಸ್ಥೆ ಮಾಡಬೇಕು. ರೋಗ ಲಕ್ಷಣವಿಲ್ಲದ ಕೋವಿಡ್ ಪೀಡಿತರಿಗೆ ಹೋಂ ಕ್ವಾರೆಂಟೈನ್‌ ವ್ಯವಸ್ಥೆ ಕಲ್ಪಿಸಬೇಕು. ಹೋಂ ಕ್ವಾರೆಂಟೈನ್‌ನಲ್ಲಿರುವವರ ಆರೋಗ್ಯದ ಮೇಲೆ ನಿಗಾ ಇರಿಸಲು ವೈದ್ಯಾಧಿಕಾರಿಗಳನ್ನು ಒಳಗೊಂಡ ತಂಡಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ರಚಿಸಬೇಕು. ರೋಗ ಲಕ್ಷಣವಿರುವ ಮತ್ತು ಚಿಕಿತ್ಸೆ ಅಗತ್ಯವಿರುವವರನ್ನು ಮಾತ್ರ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಬೇಕು. ಕೋವಿಡ್‌ ಆಸ್ಪತ್ರೆಗಳಲ್ಲಿ ಸೂಕ್ತ ಪ್ರಮಾಣದಲ್ಲಿ ಆಕ್ಸಿಜನ್‌ ಲಭ್ಯತೆಯನ್ನು ಖಾತ್ರಿಪಡಿಸಬೇಕು. ಮೆಗ್ಗಾನ್‌ ಆವರಣದಲ್ಲಿ ಇನ್ನೊಂದು ಆಕ್ಸಿಜನ್‌ ಪ್ಲಾಂಟ್‌ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಪರ್ಯಾಯ ವ್ಯವಸ್ಥೆ: ಕೋವಿಡ್ ಹೆಚ್ಚಾಗುತ್ತಿರುವ ಇಂತಹ ಸಂದರ್ಭದಲ್ಲಿ ಮೆಗ್ಗಾನ್‌ ಆಸ್ಪತ್ರೆ ಹೊರಭಾಗದಲ್ಲಿ ಸೇವಾ ಭದ್ರತೆ ಹಾಗೂ ಇನ್ನಿತರ ಬೇಡಿಕೆ ಮುಂದಿಟ್ಟು ಹೊರ ಗುತ್ತಿಗೆ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿರುವುದು ದುರದೃಷ್ಟಕರ. ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನು ತಾಂತ್ರಿಕ ಕಾರಣಗಳಿಂದ ಅಂಗೀಕರಿಸಲು ಸರ್ಕಾರದ ಹಂತದಲ್ಲಿ ಸಾಧ್ಯವಾಗಿಲ್ಲ. ಬೇಡಿಕೆಗಳನ್ನು ಈಡೇರಿಸಲು ಜಿಲ್ಲಾಡಳಿತ ಎಲ್ಲಾ ಪ್ರಯತ್ನಗಳನ್ನು ಮಾಡಿದೆ. ಪ್ರಸ್ತುತ ಮೆಗ್ಗಾನ್‌ ಆಸ್ಪತ್ರೆಯಲ್ಲಿ 350ಮಂದಿ ಕೋವಿಡ್ ಪೀಡಿತರು ಚಿಕಿತ್ಸೆ ಪಡೆಯುತ್ತಿದ್ದು, ಇಂತಹ ಸೂಕ್ಷ್ಮ ಸಂದರ್ಭದಲ್ಲಿ ಸೇವೆ ಸಲ್ಲಿಸಬೇಕಾದವರು ಪ್ರತಿಭಟನೆ ನಡೆಸುತ್ತಿರುವುದು ಸರಿಯಲ್ಲ ಎಂದರು.

ಹೊರಗುತ್ತಿಗೆ ನೌಕರರ ಸಮಸ್ಯೆ ಬಗೆಹರಿಸಲು ಎಲ್ಲಾ ರೀತಿಯ ಪ್ರಯತ್ನ ಮುಂದುವರೆಸಲಾಗಿದೆ. ಅವರಿಗೆ ಕಾನೂನುಬದ್ಧವಾಗಿ ನೀಡಬೇಕಾಗಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಕೋವಿಡ್ ಪೀಡಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಇರುವ ಸಿಬ್ಬಂದಿ ಮೇಲೆ ಒತ್ತಡ ಹೆಚ್ಚಾಗುತ್ತಿದ್ದು ಸಿಬ್ಬಂದಿ ಅಗತ್ಯವಿದೆ. ಹೀಗಾಗಿ ಸಿಬ್ಬಂದಿ ನೇಮಕ ಮಾಡಿಕೊಳ್ಳಲು ಅನುಮತಿ ನೀಡುವಂತೆ ಶಿಮ್ಸ್‌ ನಿರ್ದೇಶಕ ಡಾ| ಸಿದ್ಧಪ್ಪ ಅವರು ಮನವಿ ಮಾಡಿದರು.

ಕ್ರಿಮಿನಲ್‌ ಮೊಕದ್ದಮೆ: ಕೋವಿಡ್ ಸೋಂಕಿತರ ಚಿಕಿತ್ಸೆಗೆ ಯಾವುದೇ ಕುಂದುಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಅನುಮೋದನೆಗೊಂಡಿರುವ ಹುದ್ದೆಗಳಿಗೆ ಎರಡು ದಿನಗಳ ಒಳಗಾಗಿ ಪರ್ಯಾಯ ಸಿಬ್ಬಂದಿ ನೇಮಕ ಮಾಡಿಕೊಳ್ಳಬೇಕು. ಇಂತಹ

ಸಾಂಕ್ರಾಮಿಕ ರೋಗದ ತುರ್ತು ಸಂದರ್ಭದಲ್ಲಿ

ಕಾನೂನು ಬಾಹಿರ ಚಟುವಟಿಕೆ ನಡೆಸುವವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವಂತೆ ಜಿಲ್ಲಾಧಿಕಾರಿ ಅವರು ಶಿಮ್ಸ್‌ ನಿರ್ದೇಶಕರಿಗೆ ಸೂಚನೆ ನೀಡಿದರು. ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್‌. ವೈಶಾಲಿ, ಅಪರ ಜಿಲ್ಲಾ ಕಾರಿ ಜಿ.ಅನುರಾಧ, ಜಿಲ್ಲಾ ಸರ್ಜನ್‌ ಡಾ|ರಘುನಂದನ್‌ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK-Shiavamogga

Industry: ಕುದುರೆಮುಖದ ಕಂಪನಿಗೆ ದಿನಕ್ಕೆ 27 ಕೋಟಿ ರೂ.ನಷ್ಟ: ಎಚ್‌.ಡಿ.ಕುಮಾರಸ್ವಾಮಿ

Beluru

Shivamogga: ಸಾಗರ ಜನರಲ್ ಆಸ್ಪತ್ರೆ ಮೇಲ್ದರ್ಜೆಗೆ, ನೂರು ಹಾಸಿಗೆ ವ್ಯವಸ್ಥೆ: ಶಾಸಕ ಬೇಳೂರು

Shimoga; ಕೆಂಪಣ್ಣ ಆಯೋಗ ವರದಿ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಲಿ: ಕುಮಾರಸ್ವಾಮಿ

Shimoga; ಕೆಂಪಣ್ಣ ಆಯೋಗ ವರದಿ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಲಿ: ಕುಮಾರಸ್ವಾಮಿ

Theertha-Land

Landslide: ಆಗುಂಬೆ ಬಳಿಯ ಕಾರ್ ಬೈಲು ಗುಡ್ಡ ಕುಸಿತ!

Theerthalli

Theerthahalli: ವಾಹನ ಚಲಾಯಿಸುವ ವೇಳೆಯೇ ಕುಸಿದು ಬಿದ್ದು ಯುವಕ ದುರ್ಮರಣ!

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.