![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 26, 2020, 8:56 PM IST
ಚನ್ನಮ್ಮ ಕಿತ್ತೂರು: ಕಿತ್ತೂರ ಕ್ಷೇತ್ರಕ್ಕೆ ಅವಶ್ಯವಿರುವ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಇವರಿಗೆ ಶಾಸಕ ಮಹಾಂತೇಶ ದೊಡಗೌಡರ ಮನವಿ ಸಲ್ಲಿಸಿದರು.
ಕ್ಷೇತ್ರವು ಹೆಚ್ಚಾಗಿ ಗ್ರಾಮೀಣ ಪ್ರದೇಶವನ್ನು ಒಳಗೊಂಡಿದ್ದು ಮಳೆಯಾಶ್ರಿತ ಬೆಳೆಗಳನ್ನು ಬೆಳೆಯುತ್ತಾರೆ. ಈ ಭಾಗದ ರೈತರಿಗೆ ಹೇಳಿಕೊಳ್ಳುವಂತ ಯಾವುದೇ ಸೌಲಭ್ಯವಿಲ್ಲದೇ ನೀರಾವರಿ ಬೆಳೆ ಬೆಳೆಯಲು ಆಗುತ್ತಿಲ್ಲ. ಈ ಭಾಗಕ್ಕೆ ನೀರಾವರಿ ಯೋಜನೆಗಳ ಅತೀ ಅವಶ್ಯಕತೆಯಿರುತ್ತದೆ. ಮಲಪ್ರಭಾ ನದಿಗೆ ಮಹದಾಯಿ ಜೋಡಣೆ ಮಾಡಿ ಕಳಸಾ- ಬಂಡೂರಿ ಯೋಜನೆಗಳನ್ನು ಜಾರಿಗೆ ತರುವ ಸಮಯದಲ್ಲಿ ಮಲಪ್ರಭಾ ನದಿಗೆ ಸೂಕ್ತವಾದ ಸ್ಥಳದಲ್ಲಿ ಬ್ರೀಜ್ ಕಂ ಬ್ಯಾರೇಜ ನಿರ್ಮಿಸಿ ಎಡದಂಡೆ ಹಾಗೂ ಬಲದಂಡೆ ಕಾಲುವೆಗಳ ಮುಖಾಂತರ ನೀರಾವರಿ ಸೌಲಭ್ಯ ಕಲ್ಪಿಸುವುದು, ತಟ್ಟಿ ಹಳ್ಳಕ್ಕೆ ಅಸೋಗಾ ಹತ್ತಿರ ಡ್ಯಾಂ ನಿರ್ಮಿಸುವದು ಮತ್ತು ಎಡದಂಡೆ ಹಾಗೂ ಬಲದಂಡೆ ಕಾಲುವೆಗಳ ಮುಖಾಂತರ ನೀರು ಒದಗಿಸುವದು, ಕಾಳಿ ನದಿಯ ನೀರು ಭಾಗಶಃ ಬಳಕೆಯಾಗದೇ ಸಮುದ್ರಪಾಲಾಗುತ್ತಿದ್ದು ಈ ನೀರನ್ನು ಸದ್ಬಳಕೆ ಮಾಡಿಕೊಂಡು ಕಿತ್ತೂರ ಹಾಗೂ ಧಾರವಾಡ ಭಾಗಕ್ಕೆ ಕಾಲುವೆ ಮುಖಾಂತರ ಸೌಲಭ್ಯ ಕಲ್ಪಿಸುವದು, ತಿಗಡಿ ಡ್ಯಾಂನಿಂದ ಕಾಲುವೆಗಳಿಗೆ ನೀರು ಹರಿಸಲು ಕ್ರಮ ಕೈಗೊಳ್ಳುವದು, ಚಚಡಿ ಏತ ನೀರಾವರಿ ಯೋಜನೆ ತ್ವರಿಗತವಾಗಿ ಕೈಗೆತ್ತಿಕೊಂಡು ನೇಸರಗಿ ಹಾಗೂ ಬೆ„ಲಹೊಂಗಲ ಭಾಗಕ್ಕೆ ಅನುಕೂಲ ಕಲ್ಪಿಸುವದು, ಮುಂತಾದ ನೀರಾವರಿ ಯೋಜನೆಗಳನ್ನು ಜಾರಿಗೆ ತರಬೇಕೆಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.